Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೃಜನಶೀಲತೆಯ ಬೆಳವಣಿಗೆಗೆ ನಾಟಕಗಳು ಪೂರಕ:...

ಸೃಜನಶೀಲತೆಯ ಬೆಳವಣಿಗೆಗೆ ನಾಟಕಗಳು ಪೂರಕ: ಮುಸ್ತಫಾ ಹಾಜಿ

ವಾರ್ತಾಭಾರತಿವಾರ್ತಾಭಾರತಿ22 Feb 2017 11:24 PM IST
share
ಸೃಜನಶೀಲತೆಯ ಬೆಳವಣಿಗೆಗೆ ನಾಟಕಗಳು ಪೂರಕ:  ಮುಸ್ತಫಾ ಹಾಜಿ

ಕಾಸರಗೋಡು, ಫೆ.22: ಶಿಕ್ಷಣ ಎನ್ನುವುದು ಕೇವಲ ಓದುವಿಕೆಗೆ ಮಾತ್ರಾ ಸೀಮಿತವಲ್ಲ. ಹಾಡು, ನಾಟಕ, ಆಟ, ಚಿತ್ರಕಲೆ ಇತ್ಯಾದಿಗಳೆಲ್ಲವನ್ನೂ ಆರ್ಜಿಸಿಕೊಂಡು ನಾವು ನಮ್ಮ ಜ್ಞಾನ ಸಂಪತ್ತನ್ನು ವೃದ್ಧಿಗೊಳಿಸಬೇಕು. ತಾಂತ್ರಿಕತೆಯ ನಾಗಾಲೋಟದಲ್ಲಿ ಮಾಯವಾಗುತ್ತಿರುವ ನಮ್ಮ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು, ಕಲಾರೂಪಗಳು ಇತ್ಯಾದಿಗಳನ್ನು ಉಳಿಸಿ ಬೆಳೆಸಲು, ಅವುಗಳ ಮಹತ್ವವನ್ನು ಪುಟಾಣಿಗಳಿಗೆ ತಿಳಿಸಲು ಇಂತಹ ಶಿಬಿರಗಳು ಉತ್ತಮ ವೇದಿಕೆಗಳಾಗಿವೆ, ಇವು ಸೃಜನಶೀಲತೆಯನ್ನು ಬೆಳೆಸುತ್ತವೆ ಎಂದು ದೇಲಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ  ಮುಸ್ತಫಾ ಹಾಜಿ ಅಭಿಪ್ರಾಯಪಟ್ಟರು. 

ಜಿ. ಎಚ್. ಎಸ್. ಎಸ್. ಪಾಂಡಿಯಲ್ಲಿ ನಡೆಯುವ ಕುಂಬಳೆ ಉಪಜಿಲ್ಲಾ ಮಟ್ಟದ ದ್ವಿದಿನ ನಾಟಕ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ವಹಿಸಿದ್ದ ದೇಲಂಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಉಷಾ ಕುಮಾರಿಯವರು ಮಾತನಾಡುತ್ತಾ ಮೌಲ್ಯಯುತ ಶಿಕ್ಷಣದ ಬೆಳವಣಿಗೆಗೆ ಸಹಾಯಕವಾಗುವ ಇಂತಹ ಶಿಬಿರಗಳು ಮಕ್ಕಳಿಗೆ ನಿರಂತರವಾಗಿ ಸಿಗುತ್ತಿರಬೇಕು ಎಂದರು.

ದೇಲಂಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಕ್ಷೇಮ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ರತನ್ ಕುಮಾರ್ ರವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದರು.

ಕುಂಬಳೆ ಉಪಜಿಲ್ಲಾ ಸಮೂಹ ಸಂಪನ್ಮೂಲ ಕೇಂದ್ರದ ಸಂಯೋಜಕರಾದ ಎನ್. ವಿ. ಕುಂಞಿಕೃಷ್ಣನ್ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಶಿಬಿರದ ಅಗತ್ಯ ಮತ್ತು ಉದ್ಧೇಶಗಳನ್ನು ತಿಳಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ  ದಿವಾಕರನ್ ಬಿ. ಮತ್ತು ಎಸ್ ಎಂ ಸಿ ಅಧ್ಯಕ್ಷರಾದ  ತೋಟ್ಟಂ ಅಬ್ದುಲ್ಲರವರು ಶುಭ ಹಾರೈಸಿದರು. 

ಎರಡು ದಿನಗಳ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸಿದ್ಧ ನಾಟಕಕಾರ  ಉದಯ್ ಸಾರಂಗ್ ಪೆರ್ಲ, ಶರತ್ ಕುಮಾರ್,  ವಿಜಯನ್ ಶಂಕರಪ್ಪಾಡಿ,  ರಂಜಿತ್ ಪೆರ್ಲ,  ರೋಹಿತ್ ಮಾಟೆಬಯಲು ಹಾಗು ಶಾಲಾ ಅಧ್ಯಾಪಕ ವೃಂದದವರು ಸಹಕರಿಸುತ್ತಿದ್ದಾರೆ. 

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ದ್ವಿದಿನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅಶೋಕ್ ನಾಯ್ಕ್ ರವರು ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ನಾರಾಯಣ ದೇಲಂಪಾಡಿಯವರು ಧನ್ಯವಾದವನ್ನು ಸಮರ್ಪಿಸಿದರು. ಶಾಲಾ ಶಿಕ್ಷಕ ಸುಭಾಷ್ ಮಾಸ್ತರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X