ಕರಾವಳಿ ಸೌಹಾರ್ದ ರ‍್ಯಾಲಿಗೆ ಉಡುಪಿಯಿಂದ 2000 ಮಂದಿ
ಉಡುಪಿ, ಫೆ.22: ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋಮುವಾದದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಸಿಪಿಐ(ಎಂ) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲಾ ಸಮಿತಿ ಫೆ.25ರಂದು ಮಂಗಳೂರಿನಲ್ಲಿ ಆಯೋಜಿಸಿರುವ ಕರಾವಳಿ ಸೌಹಾರ್ದ ರ‍್ಯಾಲಿಗೆ ಉಡುಪಿ ಜಿಲ್ಲೆಯಿಂದ 2000ಕ್ಕೂ ಹೆಚ್ಚು ಕಾರ್ಮಿಕರು, ರೈತರು ಮತ್ತು ಕೃಷಿ ಕೂಲಿಕಾರರು ಭಾಗವಹಿಸಲಿದ್ದಾರೆ.
ಕರಾವಳಿ ಸೌಹಾರ್ದ ರ‍್ಯಾಲಿಗೆ ವಿದ್ಯಾರ್ಥಿ ದೆಸೆಯಿಂದಲೇ ಹಿಂದೂ-ಮುಸ್ಲಿಂ ಐಕ್ಯತೆಗಾಗಿ ಶ್ರಮಿಸಿದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸಲಿದ್ದು ಸಂಪೂರ್ಣ ಯಶಸ್ವಿಯಾಗುವ ಭರವಸೆ ಇದೆ. ಈ ನಡುವೆ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಲು ಕೆಲವು ಸಂಘಟನೆಗಳು ಮಂಗಳೂರು ಬಂದ್‌ಗೆ ಕರೆ ನೀಡಿದ್ದು, ಜನತೆ ಅದನ್ನು ತಿರಸ್ಕರಿಸಬೇಕೆಂದು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ಮನವಿ ಮಾಡಿದೆ.
Next Story





