Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಸೌಹಾರ್ದ ರ‍್ಯಾಲಿ ಯಶಸ್ಸಿಗೆ...

ಮಂಗಳೂರು: ಸೌಹಾರ್ದ ರ‍್ಯಾಲಿ ಯಶಸ್ಸಿಗೆ ವಿವಿಧ ಸಂಘಟನೆಗಳ ಕರೆ

ವಾರ್ತಾಭಾರತಿವಾರ್ತಾಭಾರತಿ23 Feb 2017 6:25 PM IST
share
ಮಂಗಳೂರು: ಸೌಹಾರ್ದ ರ‍್ಯಾಲಿ ಯಶಸ್ಸಿಗೆ ವಿವಿಧ ಸಂಘಟನೆಗಳ ಕರೆ

ಮಂಗಳೂರು, ಫೆ.23: ದ.ಕ ಜಿಲ್ಲೆಯಲ್ಲಿ ಶಾಂತಿ ಸಾಮರಸ್ಯವನ್ನು ಕಾಪಾಡುವ ಸಲುವಾಗಿ ಫೆ.25ರಂದು ಆಯೋಜಿಸಲಾಗಿರುವ ಕರಾವಳಿ ಸೌಹಾರ್ದ ರ‍್ಯಾಲಿಯನ್ನು ಯಶಸ್ಸಿಗೊಳಿಸಲು ವಿವಿದ ಸಂಘಟನೆಗಳು ಕರೆ ನೀಡಿವೆ.

ಸಿಐಟಿಯು:

ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌ರ ಭೇಟಿಯನ್ನು ತಡೆಯಬೇಕು ಮತ್ತು ಸೌಹಾರ್ದ ರ‍್ಯಾಲಿಯ ದಿನ ದ.ಕ ಜಿಲ್ಲೆಯಲ್ಲಿ ಹರತಾಳ ಆಚರಿಸಬೇಕು ಎಂದು ಸಂಘ ಪರಿವಾರದ ಸಂಘಟನೆಗಳು ಕರೆಕೊಟ್ಟಿವೆ. ಆದರೆ ಈ ಸಂಚನ್ನು ವಿಫಲಗೊಳಿಸಿ ಸೌಹಾರ್ದ ರ‍್ಯಾಲಿಯನ್ನು ಯಶಸ್ಸುಗೊಳಿಸಬೇಕು ಎಂದು ಸಿಐಟಿಯು ದ.ಕ. ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಮನವಿ ಮಾಡಿದ್ದಾರೆ.

ದಸಂಸ:

ಕರಾವಳಿ ಸೌಹಾರ್ದ ರ‍್ಯಾಲಿಯ ಬಹಿರಂಗ ಸಭೆಗೆ ಆಗಮಿಸುತ್ತಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ರನ್ನು ತಡೆಯಲು ಹಾಗೂ ರ‍್ಯಾಲಿ ದಿನ ದ.ಕ ಜಿಲ್ಲೆಯನ್ನೇ ಬಂದ್ ಮಾಡಲು ಸಂಘಪರಿವಾರದ ಸಂಘಟನೆಗಳು ಕರೆ ಕೊಟ್ಟಿರುವುದು ಖಂಡನೀಯ. ಪ್ರಜಾಪ್ರಭುತ್ವವಾದಿ ಶಕ್ತಿಗಳು ಶಾಂತಿ ಸೌಹಾರ್ದ ಪ್ರೇಮಿಗಳೂ ಒಟ್ಟಾಗಿ ಹಿಂದುತ್ವದ ಸಂಚನ್ನು ವಿಫಲಗೊಳಿಸಬೇಕಾಗಿದೆ. ಸಿಪಿಎಂ ಹಮ್ಮಿಕೊಂಡಿರುವ ಸೌಹಾರ್ದ ರ‍್ಯಾಲಿಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ)ಯ ರಾಜ್ಯ ಸಂಘಟನಾ ಸಂಚಾಲಕ ಎಂ. ದೇವದಾಸ್ ಹಾಗೂ ದ.ಕ. ಜಿಲ್ಲಾ ಸಂಚಾಲಕ ರಘು ಎಕ್ಕಾರ್ ಕರೆ ನೀಡಿದ್ದಾರೆ.

ಮಾನವ್ ಸಮಾನತಾ ಮಂಚ್:

ಸೌಹಾರ್ದ ರ‍್ಯಾಲಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಮಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ, ವಿಶ್ವ ಹಿಂದೂ ಪರಿಷತ್, ಸಂಘಪರಿವಾರ ಹಾಗೂ ಅದರ ಸಹ ಸಂಘಟನೆಗಳು ಫೆ.25ರಂದು ಹರತಾಳ ಆಚರಿಸಲು ಕರೆ ಕೊಟ್ಟಿರುವುದು ಬಿಜೆಪಿಯ ಹತಾಶೆಯನ್ನು ತೋರಿಸುತ್ತದೆ. ಜನಸಾಮಾನ್ಯರು ಹಾಗೂ ವಿದ್ಯಾರ್ಥಿಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ಲೆಕ್ಕಿಸದೆ ಹರತಾಳ ಆಚರಿಸಲು ಕರೆ ಕೊಟ್ಟಿರುವುದು ಬಿಜೆಪಿಗೆ ದೇಶದ ಜನತೆಯ ಮೇಲೆ ಇರುವ ಕಾಳಜಿಗೆ ಕನ್ನಡಿ ಹಿಡಿದಂತಿದೆ.

ಒಂದು ರಾಜ್ಯದ ಮುಖ್ಯಮಂತ್ರಿಯ ಭೇಟಿಯನ್ನು ವಿರೋಧಿಸುವುದು ಸಂವಿಧಾನದ ಆಶಯಗಳಿಗೆ ವಿರೋಧವಾಗಿದ್ದು ಈ ಮೂಲಕ ಬಿಜೆಪಿ ಮತ್ತು ಅದರ ಸಹ ಸಂಘಟನೆಗಳು ಸಂವಿಧಾನವನ್ನು ಅವಮಾನಿಸುವ ಜೊತೆಗೆ ಸೌಹಾರ್ದವನ್ನು ಕೋಮುಗಲಭೆಗೆ ಪರಿವರ್ತಿಸಿ ಜಿಲ್ಲೆಯ ಜನರನ್ನು ಒಡೆಯುವ ಹಾಗೂ ತಪ್ಪುದಾರಿಗೆಳೆಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಸಂಘದ ಪದಾಧಿಕಾರಿಗಳಾದ ಅಲಿ ಹಸನ್, ವಸಂತ್ ಟೈಲರ್, ರೋಶನ್ ಪತ್ರಾವೊ, ಮುಹಮ್ಮದ್ ಸಾಲಿ, ಮೋಹನ್ ಎಂ., ಗೋಲ್ಡನ್ ಡಿಸೋಜ ಮತ್ತಿತರರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X