Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತಿಮ ತೀರ್ಮಾನದವರೆಗೆ ಟೋಲ್ ಶುಲ್ಕ...

ಅಂತಿಮ ತೀರ್ಮಾನದವರೆಗೆ ಟೋಲ್ ಶುಲ್ಕ ಇಲ್ಲ: ರಾ.ಹೆದ್ದಾರಿ ಜಾಗೃತಿ ಸಮಿತಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ24 Feb 2017 7:54 PM IST
share
ಅಂತಿಮ ತೀರ್ಮಾನದವರೆಗೆ ಟೋಲ್ ಶುಲ್ಕ ಇಲ್ಲ: ರಾ.ಹೆದ್ದಾರಿ ಜಾಗೃತಿ ಸಮಿತಿ ನಿರ್ಧಾರ

ಉಡುಪಿ, ಫೆ.24: ರಾಜ್ಯ ಮುಖ್ಯ ಕಾರ್ಯದರ್ಶಿಯವರು ಸಭೆ ಕರೆದು ಕರಾವಳಿ ಜಿಲ್ಲೆಗಳ ಟೋಲ್‌ಗೇಟ್‌ಗಳಲ್ಲಿ ಸ್ಥಳೀಯ ವಾಹನಗಳಿಂದ ಟೋಲ್ ಸಂಗ್ರಹದ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳುವವರೆಗೆ ಜಿಲ್ಲೆಯ ಯಾವುದೇ ಖಾಸಗಿ ವಾಹನಗಳಿಂದ ಟೋಲನ್ನು ಸಂಗ್ರಹಿಸಬಾರದು ಎಂದು ಉಡುಪಿ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ತಿಳಿಸಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಪ್ರತಾಪ್ ಶೆಟ್ಟಿ ಅವರು, ರಾಷ್ಟ್ರೀಯ ಹೆದ್ದಾರಿಯ ಅಸಮರ್ಪಕ ಹಾಗೂ ಅವೈಜ್ಞಾನಿಕ ಕಾಮಗಾರಿ, ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಉಡುಪಿ ಜಿಲ್ಲಾ ವಾಹನಗಳಿಗೆ ಟೋಲ್‌ಶುಲ್ಕ ವಿನಾಯಿತಿಗಾಗಿ ರಾ.ಹೆದ್ದಾರಿ ಜಾಗನತಿ ಸಮಿತಿಯ ಮೂಲಕ ಈಗಾಗಲೇ ನ್ಯಾಯಯುತ ಹೋರಾಟ ನಡೆಸಿದ್ದೇವೆ ಎಂದರು.

ಕಳೆದ ಫೆ.13ರಂದು ಈ ಸಂಬಂಧ ನಡೆದ ಉಡುಪಿ ಜಿಲ್ಲಾ ಬಂದ್ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬ್ರಹ್ಮಾವರ ವಿಶೇಷ ತಹಶೀಲ್ದಾರ್‌ರು ನಮ್ಮ ಬೇಡಿಕೆಗಳನ್ನು ಆಲಿಸಿ, ಫೆ.25ರವರೆಗೆ ಟೋಲ್ ವಿನಾಯಿತಿ ನೀಡಲಾಗು ವುದು ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಮುತುವರ್ಜಿ ವಹಿಸಲು ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದರು.

 ಇದೀಗ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಜಿಲ್ಲಾಧಿಕಾರಿ ಹಾಗೂ ಇತರ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ರಾಜ್ಯ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ವರೆಗೆ ಯಾವುದೇ ರೀತಿಯಲ್ಲಿ ಟೋಲ್ ಶುಲ್ಕ ಸಂಗ್ರಹಿಸಬಾರದು ಎಂದು ನವಯುಗ ಕಂಪೆನಿಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸ್ಪಷ್ಟ ಸೂಚನೆ ನೀಡಿದ್ದರು ಎಂದವರು ಹೇಳಿದರು.

 ಹೀಗಾಗಿ ಬೆಂಗಳೂರಿನ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವವರೆಗೂ ಟೋಲ್‌ನ್ನು ಜಿಲ್ಲೆಯ ವಾಹನಗಳಿಂದ ಸಂಗ್ರಹಿಸಬಾರದು ಹಾಗೂ ಯಾವುದೇ ಸ್ಥಳೀಯ ಖಾಸಗಿ ವಾಹನ ಮಾಲಕರು ಟೋಲ್‌ನ್ನು ನೀಡಬಾರದು ಎಂದು ಪ್ರತಾಪ್ ಶೆಟ್ಟಿ ನುಡಿದರು.

ಸಮಿತಿಯ ಬೇಡಿಕೆಗಳೇನು ಎಂದು ಪ್ರಶ್ನಿಸಿದಾಗ, ಎಲ್ಲಾ ಕಡೆಗಳಲ್ಲಿ ಸರ್ವಿಸ್ ರಸ್ತೆಗಳ ನಿರ್ಮಾಣ, ಸರಿಯಾದ ಒಳಚರಂಡಿ ವ್ಯವಸ್ಥೆ, ಅಲ್ಲಲ್ಲಿ ಬಸ್‌ನಿಲ್ದಾಣಗಳ ರಚನೆ, ದಾರಿ ದೀಪಗಳ ವ್ಯವಸ್ಥೆ ಕಲ್ಪಿಸುವುದು ಹಾಗೂ ಸ್ಥಳೀಯ ವಾಹನಗಳಿಗೆ (ಕೆಎ-20) ಟೋಲ್ ಶುಲ್ಕದಿಂದ ವಿನಾಯಿತಿ ನಮ್ಮ ಪ್ರಮುಖ ಬೇಡಿಕೆಗಳು ಎಂದರು.

ಫೆ.25ರ ಬಳಿಕ ಕಂಪೆನಿ ಮತ್ತೆ ಟೋಲ್ ಸಂಗ್ರಹಕ್ಕೆ ಮುಂದಾದರೆ ನಾವು ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದವರು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ವಿಠಲ ಪೂಜಾರಿ, ಐರೋಡಿ ಗ್ರಾಪಂ ಅಧ್ಯಕ್ಷ ಮೋಸೆಸ್ ರಾಡ್ರಿಗಸ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಸದಸ್ಯ ಅಚ್ಚುತ ಪೂಜಾರಿ, ಆಲ್ವಿನ್ ಅಂದ್ರಾದೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X