ಫರಂಗಿಪೇಟೆ: ಫೆ.25ರಂದು10 ಜೋಡಿಗಳ ಸಾಮೂಹಿಕ ವಿವಾಹ

ಬಂಟ್ವಾಳ, ಫೆ.24: ಫರಂಗಿಪೇಟೆ ಮುಹಿಯುದ್ದೀನ್ ಜುಮಾ ಮಸೀದಿಯ ಸಹಕಾರದೊಂದಿಗೆ ಖಿದ್‌ಮತುಲ್ ಇಸ್ಲಾಮ್ ಅಸೋಸಿಯೇಷನ್ ಫರಂಗಿಪೇಟೆ ಇದರ ವತಿಯಿಂದ 10 ಜೋಡಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಫೆ. 26ರಂದು ಫರಂಗಿಪೇಟೆಯ ನೇತ್ರಾವತಿ ನದಿ ಕಿನಾರೆಯ ಮೈದಾನದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಫರಂಗಿಪೇಟೆ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಎಫ್.ಮುಹಮ್ಮದ್ ಬಾವ ಅಧ್ಯಕ್ಷತೆ ವಹಿಸುವರು. ಸಮಸ್ತ ಕೇಂದ್ರ ಮುಶಾವರದ ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್, ಅಡ್ಯಾರ್ ಕಣ್ಣೂರಿನ ಮುದರ್ರಿಸ್ ಸೈತ್ತದ್ ಮುಹಮ್ಮದ್ ಜಿಫ್ರಿ ಮತ್ತು ಕೋಯಾ ತಂಙಳ್, ಫರಂಗಿಪೇಟೆ ಜುಮಾ ಮಸೀದಿಯ ಮುದರ್ರಿಸ್ ಉಸ್ಮಾನ್ ದಾರಿಮಿ, ಮಾಹಿನ್ ದಾರಿಮಿ ಪಾತೂರು ಉಪಸ್ಥಿತರಿರುವರು.
ಬಿ.ಎ.ಗ್ರೂಫ್ ಆಫ್ ಕಂಪೆನಿಯ ಬಿ.ಅಹ್ಮದ್ ಹಾಜಿ ಮುಹಿಯ್ಯುದ್ದೀನ್, ಸಮಸ್ತ ಕೇಂದ್ರ ಮುಶಾವರದ ಉಪಾಧ್ಯಕ್ಷ ಕೆ.ಪಿ.ಅಬ್ದುಲ್ ಜಬ್ಬಾರ್ ಮುಸ್ಲಿಯಾರ್‌ರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.
ಮುಖ್ಯ ಅತಿಥಿಗಳಾಗಿ ಆಹಾರ ಸಚಿವ ಯು.ಟಿ.ಖಾದರ್, ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಅಧ್ಯಕ್ಷ ಮೊದಿನ್ ತುಂಬೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಮ್.ಎ. ಗಫೂರ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಸಹಿತ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







