Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಘಪರಿವಾರದ ಬೆದರಿಕೆಗಳಿಗೆ...

ಸಂಘಪರಿವಾರದ ಬೆದರಿಕೆಗಳಿಗೆ ಅಂಜುವುದಿಲ್ಲ: ಶ್ರೀರಾಮರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ24 Feb 2017 8:39 PM IST
share
ಸಂಘಪರಿವಾರದ ಬೆದರಿಕೆಗಳಿಗೆ ಅಂಜುವುದಿಲ್ಲ: ಶ್ರೀರಾಮರೆಡ್ಡಿ

ಮಂಗಳೂರು, ಫೆ. 23: ಸಿಪಿಎಂ ವತಿಯಿಂದ ಹಮ್ಮಿಕೊಳ್ಳಲಾದ ಕರಾವಳಿ ಸೌಹಾರ್ದ ರ್ಯಾಲಿ ವಿಫಲಗೊಳಿಸಲು ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಭೇಟಿಯನ್ನು ತಡೆಯಲು ಯತ್ನಿಸುತ್ತಿರುವ ಸಂಘಪರಿವಾರದ ಫ್ಯಾಸಿಸ್ಟ್ ಕೃತ್ಯವನ್ನು ಖಂಡಿಸುವುದಾಗಿ ಹೇಳಿರುವ ಸಿಪಿಎಂ ರಾಜ್ಯ ಸಮಿತಿ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ, ಸಂಘಪರಿವಾರದ ಬೆದರಿಕೆಗಳಿಗೆ ಅಂಜುವುದಲ್ಲಿ ಎಂದು ಹೇಳಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗುರು ನಡೆದಾಡಿದ ಕರಾವಳಿ ಪ್ರಾಂತ್ಯದಲ್ಲಿ ಕೋಮುವಾದಿಗಳ ಅಟ್ಟಹಾಸ ನೆಲದ ಸಂಸ್ಕೃತಿಗೆ ಅಪಮಾನವಾಗಿದ್ದು, ದಲಿತ, ಹಿಂದುಳಿದ ವರ್ಗಗಳ ಸ್ವಾಭಿಮಾನಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ. ಸಂಘಪರಿವಾರದ ಶಕ್ತಿಗಳ ಬಗ್ಗೆ ದಲಿತ, ಹಿಂದುಳಿದ ವರ್ಗದವರು ಎಚ್ಚೆತ್ತುಕೊಳ್ಳಬೇಕೆಂದು ಹೇಳಿದರು.

ಪಿಣರಾಯಿ ವಿಜಯನ್ ಅವರ ಭೇಟಿಯ ವಿರುದ್ಧ ಪ್ರತಿಭಟಿಸುತ್ತಿರುವ ಸಂಘಪರಿವಾರ, ಅವರನ್ನು ಸಾವಿನ ವ್ಯಾಪಾರಿಯೆಂದು ನಿರೂಪಿಸುತ್ತಿದ್ದು, ಇದು ಸಂಘಪರಿವಾರಕ್ಕೆ ಇತಿಹಾಸವನ್ನು ಮರೆಯುವ ಮತ್ತು ತಿರುಚುವ ಗುಣ ಕರಗತವಾಗಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ. ಭಾರತ ವಿಭಜನೆಯ ಕಾಲದಿಂದ ಕೋಮುಧ್ರುವೀಕರಣ ಆರಂಭಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹತ್ಯೆಯಿಂದ ಗುಜರಾತ್ ಹತ್ಯಾಕಾಂಡದವರೆಗೂ ಸಾವಿನ ವ್ಯಾಪಾರಿಗಳು ಯಾರು ಎಂಬುದು ಭಾರತದ ಇತಿಹಾಸ ತಿಳಿದವರಿಗೆ ಗೊತ್ತಿದೆ ಎಂದು ಶ್ರೀರಾಮರೆಡ್ಡಿ ಹೇಳಿದರು.

ಸಂಘಪರಿವಾರದ ಕಾರ್ಯಕರ್ತರು ಪಕ್ಷದ ಕಚೇರಿಗೆ ಬೆಂಕಿ ಹಾಕಿ, ಬ್ಯಾನರ್‌ಗಳನ್ನು ಹರಿಯುವ ಮೂಲಕ ಹೆದರಿಸಬಹುದೆಂದು ಭಾವಿಸಿದಂತಿದೆ. ಆದರೆ, ಇದರಿಂದ ಪಕ್ಷದ ತತ್ವಸಿದ್ಧಾಂತಗಳು ಬದಲಾಗದು. ಕರಾವಳಿಯ ಕೋಮು ಸೌಹಾರ್ದ ಕಾಪಾಡಲು ಪಕ್ಷ ಯಾವ ತ್ಯಾಗಕ್ಕೂ ಸಿದ್ಧವಿದೆ. ಆರೆಸ್ಸೆಸ್ ನ ಸೂಚನೆಯಂತೆ ಸಂಘಪರಿವಾರವು ಸೌಹಾರ್ದವನ್ನು ವಿರೋಧಿಸುತ್ತಿದೆ. ಇದರ ಹಿಂದೆ ಬಿಜೆಪಿ ಕೆಲಸ ಮಾಡಿದೆ ಎಂದು ಶ್ರೀರಾಮರೆಡ್ಡಿ ಆರೋಪಿಸಿದರು.

ಫೆ. 25ರಂದು ಶನಿವಾರ ನಗರದ ನೆಹರೂ ಮೈದಾನದಲ್ಲಿ ನಡೆಯುವ 'ಕರಾವಳಿ ಸೌಹಾರ್ದ ರ‍್ಯಾಲಿ' ಯನ್ನು ದ.ಕ. ಜಿಲ್ಲೆಯ ಜನರು ಯಶಸ್ವಿಗೊಳಿಸಬೇಕೆಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ವಿ.ಜೆ.ಕೆ.ನಾಯರ್, ಜೆ.ಬಾಲಕೃಷ್ಣ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ಕೆ.ಯಾದವ ಶೆಟ್ಟಿ, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X