Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಶಾಲಾ ಕಾಲೇಜುಗಳಿಗೆ ಏಕ ರೂಪ ರಜೆ;...

ಭಟ್ಕಳ: ಶಾಲಾ ಕಾಲೇಜುಗಳಿಗೆ ಏಕ ರೂಪ ರಜೆ; ಮರು ಪರಿಶೀಲಿಸುವಂತೆ ಶಿಕ್ಷಣ ಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ24 Feb 2017 9:30 PM IST
share
ಭಟ್ಕಳ: ಶಾಲಾ ಕಾಲೇಜುಗಳಿಗೆ ಏಕ ರೂಪ ರಜೆ; ಮರು ಪರಿಶೀಲಿಸುವಂತೆ ಶಿಕ್ಷಣ ಸಚಿವರಿಗೆ ಮನವಿ

ಭಟ್ಕಳ, ಫೆ.24: ಸಾರ್ವಜನಿಕ ಶಿಕ್ಷಣ ಇಲಾಖೆಯು ಇತ್ತಿಚೆಗೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ಅನ್ವಯವಾಗುವಂತೆ ಸುತ್ತೋಲೆಯೊಂದನ್ನು ಕಳುಹಿಸಿದ್ದು ಶಾಲಾ ಕಾಲೇಜುಗಳಿಗೆ ನೀಡುವ ವಾರದ ರಜೆಯನ್ನು ಏಕರೂಪ ಇರುವಂತೆ ನೋಡಿಕೊಳ್ಳಬೇಕೆಂದು ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಉರ್ದು ಹಾಗೂ ಮುಸ್ಲಿಮ್ ಆಡಳಿತ ಮಂಡಳಿಗಳು ನಡೆಸುತ್ತಿರುವ ಶಾಲಾ ಕಾಲೇಜುಗಳಿಗೆ ಈ ಆದೇಶದಿಂದಾಗಿ ತೊಂದರೆಯನ್ನು ಅನುಭವಿಸುವಂತಾಗಿದ್ದು, ಏಕರೂಪ ರಜೆಯ ಬದಲು ವಾರದ ರಜೆಯನ್ನು ನೀಡುವ ಅಧಿಕಾರವನ್ನು ಆಯಾ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ವಹಿಸಿಕೊಡಬೇಕೆಂದು ಭಟ್ಕಳದ ಎಲ್ಲ ಮುಸ್ಲಿಮ್ ಆಡಳಿತ ಮಂಡಳಿಗಳ ಒಕ್ಕೂಟವು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿಯನ್ನು ಅರ್ಪಿಸಿದ್ದಾರೆ.

 ಭಟ್ಕಳ ನಗರದಲ್ಲಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಹಾಗೂ ಸರ್ಕಾರಿ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಲಿ ಇರುವ ಶುಕ್ರವಾರದ ರಜೆಯನ್ನು ರದ್ದುಗೊಳಿಸಿ ಅರ್ದದಿನ ಶಾಲೆಯನ್ನು ನಡೆಸುವಂತೆ ಮಾನ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದು ಇದರಿಂದಾಗಿ ಮುಸ್ಲಿಮ್ ಸಮುದಾಯದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

 ಶುಕ್ರವಾರ ಮುಸ್ಲಿಮರ ಪವಿತ್ರ ದಿನವಾಗಿದ್ದು ಭಟ್ಕಳದ ಪರಿಸರದಲ್ಲಿ ಶೇ100 ವಿದ್ಯಾರ್ಥಿಗಳೇ ಇರುವ ಅಲ್ಪಸಂಖ್ಯಾತ ಸಮುದಾಯದ ಶಾಲೆಗಳ ಆಡಳಿತ ಮಂಡಳಿಗೆ ಅಂದು ಶಾಲೆಯನ್ನು ನಡೆಸುವುದು ತುಂಬಾ ಕಷ್ಟವಾಗುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಶುಕ್ರವಾರ ಪ್ರಾರ್ಥನೆಗಾಗಿ ಕಳುಹಿಸುವುದರಿಂದ ಶಾಲೆಗಳಿಗೆ ಕಳುಹಿಸಲು ಒಪ್ಪುತ್ತಿಲ್ಲ. ಕಾರಣ ಶುಕ್ರವಾರ ರಜೆ ನೀಡಬೇಕೊ ಅಥವಾ ಶಾಲೆಯನ್ನು ನಡೆಸಬೇಕೋ ಎನ್ನುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ವಹಿಸಿಕೊಡುವುದರ ಮೂಲಕ ಅಲ್ಪಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಭಟ್ಕಳದ ಪರಿಸರವು ಬೇರೆ ನಗರ ಹಾಗೂ ಪಟ್ಟಣಗಳಲ್ಲಿ ಇರುವಂತೆ ಇಲ್ಲ. ಇಲ್ಲಿನ ಮುಸ್ಲಿಮ್ ಸಮುದಾಯ ಅತ್ಯಂತ ಧಾರ್ಮಿಕ ಶ್ರಧ್ದಾಳುಗಳಾಗಿರುವುದರಿಂದ ಶುಕ್ರವಾರ ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲ. ಅಲ್ಲದೇ ಭಟ್ಕಳದಲ್ಲಿ ಕಳೆದ ನೂರಾರು ವರ್ಷಗಳಿಂದ ಶುಕ್ರವಾರವೇ ವಾರದ ರಜೆಯನ್ನು ನೀಡುತ್ತ ಬಂದಿದ್ದು ಇದರಿಂದ ಯಾವುದೇ ಆಡಳಿತಾತ್ಮಕ ಸಮಸ್ಯೆ ಉದ್ಭವಿಸಿರುವುದಿಲ್ಲ. ಪರೀಕ್ಷೆ ಮತ್ತಿತರ ಅತಿ ಜರೂರು ಕಾರ್ಯಗಳಿಗೆ ಇಲ್ಲಿನ ಆಡಳಿತ ಮಂಡಳಿ ಯಾವತ್ತೂ ಶುಕ್ರವಾರದ ದಿನವಾದರೂ ಸಹಕರಿಸಿ ಅಂದು ಶಾಲೆಯನ್ನು ನಡೆಸಿದೆ.

ಮುಂದೆಯೂ ಇದೇ ರೀತಿಯ ಸಹಕಾರವನ್ನು ಶಿಕ್ಷಣ ಇಲಾಖೆಗೆ ನೀಡುತ್ತದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಜಾರಿಗೊಳಿಸಿದ ಆದೇಶವನ್ನು ಮತ್ತೊಮ್ಮೆ ಪರಿಶೀಲಿಸಿ ಭಟ್ಕಳದ ಅಲ್ಪಸಂಖ್ಯಾತ ಆಡಳಿತ ಮಂಡಳಿ ಶಾಲೆಗಳಿಗೆ ಶುಕ್ರವಾರ ರಜೆ ನೀಡುವಂತೆ ಅವಕಾಶ ಮಾಡಿಕೊಡಬೇಕೆಂದು ಮನವಿಯಲ್ಲಿ ಕೋರಿಕೊಳ್ಳಲಾಗದೆ.

ಈ ಸಂದರ್ಭದಲ್ಲಿ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹೀಮ್ ಜುಕಾಕೋ, ತರಬಿಯತ್ ಎಜ್ಯುಕೇಶನ್ ಸೂಸೈಟಿ ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ, ತಂಝೀಮ್ ಅಧ್ಯಕ್ಷ ಮುಝಮ್ಮಿಲ್ ಕಾಝಿಯಾ ಸೇರಿದಂತೆ ಮುರುಡೇಶ್ವರದ ಮುಸ್ಲಿಮ್ ಎಜ್ಯುಕೇಶ್ ಸೂಸೈಟಿ, ಇಖ್ರಾ ಶಾಲೆ, ಅಲಿಪಬ್ಲಿಕ್ ಸ್ಕೂಲ್, ಮಾದರೆ ಹವ್ವಾ ಹಾಗೂ ಮತ್ತಿತರರ ಮುಸ್ಲಿಮ ಆಡಳಿತ ಮಂಡಳಿಗಳ ಸದಸ್ಯರು ಉಪಸ್ಥಿತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X