ಯಕ್ಷಧ್ರುವ ಪಟ್ಲ ಸಂಭ್ರಮ 2017: ಕರೆಯೋಲೆ ಬಿಡುಗಡೆ

ಮಂಗಳೂರು, ಫೆ.25: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ವತಿಯಿಂದ ಮೇ 28ರಂದು ನಡೆಯಲಿರುವ ಯಕ್ಷಧ್ರುವ ಪಟ್ಲ ಸಂಭ್ರಮ-2017ರ ಕರೆಯೋಲೆ ಬಿಡುಗಡೆಯನ್ನು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ನೆರವೇರಿಸಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆಯೋಲೆ ಬಿಡುಗಡೆಗೊಳಿಸಿ ಮಾತನಾಡಿದ ಕೃಷ್ಣ ಪಾಲೆಮಾರ್, ಯಕ್ಷಗಾನ ಅಳಿದುಹೋಗುತ್ತಿದೆ ಎಂಬ ಕೂಗು ಕೇಳಿ ಬರುತ್ತಿರುವ ಸಮಯದಲ್ಲೇ ಯಕ್ಷಗಾನ ಕ್ಷೇತ್ರವನ್ನು ಉತ್ತೇಜಿಸುವ ಕಾರ್ಯಕ್ರಮಗಳು ನಡೆಯುತ್ತಿರುವುದು ಅಭಿನಂದನಾರ್ಹ ಎಂದರು. ಕಾರ್ಯಕ್ರಮದಲ್ಲಿ ಸವಣೂರು ಸೀತಾರಾಮ ರೈ, ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಸಂತೋಷ್ ಕುಮಾರ್ ರೈ, ಪೂರ್ಣಿಮಾ ಯತೀಶ್ ರೈ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಉಪಾಧ್ಯಕ್ಷ ಡಾ.ಮನು, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿ.ಎ.ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಜತೆ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.





