Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿ ಕರ್ನಾಟಕ ಸಂಘದಿಂದ ಬೊಳುವಾರು...

ದೆಹಲಿ ಕರ್ನಾಟಕ ಸಂಘದಿಂದ ಬೊಳುವಾರು ಮುಹಮ್ಮದ್ ಕುಂಞಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ26 Feb 2017 10:09 PM IST
share
ದೆಹಲಿ ಕರ್ನಾಟಕ ಸಂಘದಿಂದ ಬೊಳುವಾರು ಮುಹಮ್ಮದ್ ಕುಂಞಿಗೆ ಸನ್ಮಾನ

ದೆಹಲಿ, ಫೆ. 26: ಕನ್ನಡ ಬರಹಗಾರ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ ಬೊಳವಾರು ಮುಹಮ್ಮದ್ ಕುಂಞಿ ಅವರಿಗೆ ಇತ್ತೀಚೆಗೆ ದೆಹಲಿ ಕರ್ನಾಟಕ ಸಂಘದ ವತಿಯಿಂದ  ಅಭಿನಂದಿಸಲಾಯಿತು.

ದಿನಾಂಕ 24.02.2017ರಂದು ಕನ್ನಡದ ಖ್ಯಾತ ಬರಹಗಾರ ಈ ಬಾರಿಯ ಕೇಂದ್ರ ಸಾಹಿತ್ಯ  ಅಕಾಡಮಿ ಪ್ರಶಸ್ತಿ ಪುರಸ್ಕೃತ ಶ್ರೀ ಬೊಳುವಾರು ಮುಹಮ್ಮದ್ ಕುಂಞ ಅವರು ಕರ್ನಾಟಕ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಅವರ 'ಸ್ವಾತಂತ್ರದ ಓಟ' ಎಂಬ 1,086ಪುಟಗಳ ಸುದೀರ್ಘವಾದ ಕಾದಂಬರಿಗೆ 2016ರ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಲು ಬಂದ ಸಂದರ್ಭದಲ್ಲಿ ದೆಹಲಿ ಕರ್ನಾಟಕ ಸಂಘವು ಅವರನ್ನು ಸಂಘಕ್ಕೆ ಬರಮಾಡಿಕೊಂಡು ಅವರ ಸಹಿತ ಅವರ ಪತ್ನಿ ಜುಬೇದಾ ಅವರಿಗೆ ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಪುಷ್ಪಗುಚ್ಚ ನೀಡಿ ಅಭಿನಂದಿಸಿ ಗೌರಸಲಾಯಿತು.

 ಸಂಘದ ಪದಾಧಿಕಾರಿಗಳೊಂದಿಗಿನ ಮಾತುಕತೆಯ ಸಂದರ್ಭದಲ್ಲಿ ಬೊಳುವಾರು ಅವರು ತಮ್ಮ ಕಾದಂಬರಿಯ ಒಂದು ಸಂಕ್ಷಿಪ್ತ ವಿವರಣೆ ನೀಡಿದರು.

ಜೊತೆಗೆ ದೇಶದಾದ್ಯಂತ ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ಹಲವಾರು ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಆತಂಕಗಳ ಬಗ್ಗೆ ಪ್ರಸ್ತಾಪಿಸುತ್ತಾ ಸ್ವತಂತ್ರ ಭಾರತದಲ್ಲಿ ಇಂದೂ ಕೂಡಾ ಹಿಂದುಗಳು ಮತ್ತು ಮುಸ್ಲಿಮರು ಪರಸ್ಪರರನ್ನು ಪ್ರೀತಿಸಿ ಗೌರವಿಸಿ ಸಹಬಾಳ್ವೆಯನ್ನು ನಡೆಸುವುದರ ಬದಲಾಗಿ ಒಂದು ರೀತಿಯ ಗೋಡೆ -ಕಂದರ ಏರ್ಪಟ್ಟಿರುವುದರ ಬಗ್ಗೆ ವಿಷಾದ ವ್ಯಕ್ತಪಡಿಸಿದರು.

ಕನ್ನಡದ ಸೃಜನಶೀಲ ಗದ್ಯ ಸಾಹಿತ್ಯಕ್ಕೆ ಮುಸ್ಲಿಮ್ ಬದುಕನ್ನು ಮೊತ್ತ ಮೊದಲ ಬಾರಿಗೆ ಪರಿಚಯಿಸಿದ ಕರಾವಳಿ ಕರ್ನಾಟಕದ ಬೊಳುವಾರು ಮುಹಮ್ಮದ್ ಕುಂಞಿ (1951) ಸುಮಾರು ಇನ್ನೂರಕ್ಕೂ ಮಿಕ್ಕಿ ಕತೆಗಳಲ್ಲದೆ, ಕಾದಂಬರಿ, ನಾಟಕ, ಪ್ರವಾಸ ಕಥನ, ಅನುವಾದ ಸಾಹಿತ್ಯ ಹಾಗೂ ಮಕ್ಕಳ ಸಾಹಿತ್ಯಗಳನ್ನು ರಚಿಸಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಪರಂಪರೆಯಲ್ಲೇ ಮೊತ್ತ ಮೊದಲ ಬಾರಿಗೆ ತಮ್ಮ ಸೃಜನಶೀಲ ಕೃತಿಗಳಿಗಾಗಿ ಎರಡು ಬಾರಿ ಪ್ರಶಸ್ತಿಗಳನ್ನು ಪಡೆದು ರಾಷ್ಟ್ರೀಯ ದಾಖಲೆ ನಿರ್ಮಿಸಿದವರು.

ಕನ್ನಡದ ಮಕ್ಕಳ ಸಾಹಿತ್ಯಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಮೊದಲ ಪ್ರಶಸ್ತಿಯನ್ನು ತಂದುಕೊಟ್ಟ ದಾಖಲೆಗೂ ಪಾತ್ರರಾದರು. ಇವರು ಸಂಪಾದಿಸಿದ ತಟ್ಟು ಚಪ್ಪಾಳೆ ಪುಟ್ಟ ಮಗು ಎಂಬ ಮಕ್ಕಳ ಪದ್ಯಗಳ ಸಂಕಲನದಿಂದಾಗಿ ಇವರು ಕನ್ನಡ ಮಕ್ಕಳ ಸಾಹಿತ್ಯದಲ್ಲೂ ಗುರುತಿಸಿಕೊಂಡಿದ್ದಾರೆ.

ಕರ್ನಾಟಕ ಸಾತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಸಹಿತ ಮೂರು ಬಾರಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳಿಂದಲೂ ಸನ್ಮಾನಿತರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ವಹಿಸಿ ಮಾತನಾಡಿ, ಬೊಳುವಾರು ಅವರು ದೆಹಲಿಯಲ್ಲಿದ್ದಾಗ ಸಂಘದ ಜೊತೆಗೆ ಅವರ ಆತ್ಮೀಯ ಒಡನಾಟವನ್ನು ನೆನಪಿಸಿ, ಮುಂದೆ ಕನ್ನಡದ ಸಾರಸತ್ವ ಲೋಕಕ್ಕೆ ಬೊಳುವಾರು ಇನ್ನೂ ಹೆಚ್ಚು ಕೃತಿಯನ್ನು ಕೊಡುವಂತಾಗಲಿ ಎಂದು ಹಾರೈಸಿದರು.

ನಂದಿನಿ ಮಲ್ಯ, ಸಂಘದ ಪದಾಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷ ಸಖಾರಾಮ ಉಪ್ಪೂರು ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X