Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಿಜಿಟಲ್ ಪಾವತಿಯಿಂದ ಕಪ್ಪುಹಣಕ್ಕೆ...

ಡಿಜಿಟಲ್ ಪಾವತಿಯಿಂದ ಕಪ್ಪುಹಣಕ್ಕೆ ಕಡಿವಾಣ

ಮನ್‌ಕಿ ಬಾತ್‌ನಲ್ಲಿ ಮೋದಿ

ವಾರ್ತಾಭಾರತಿವಾರ್ತಾಭಾರತಿ26 Feb 2017 11:48 PM IST
share

ಹೊಸದಿಲ್ಲಿ,ಫೆ.26: ಕಪ್ಪುಹಣವನ್ನು ಮಟ್ಟಹಾಕಲು ಹಾಗೂ ಲಂಚಗುಳಿತನದ ವಿರುದ್ಧ ಹೋರಾಡಲು ಡಿಜಿಟಲ್ ಪಾವತಿ ವ್ಯವಸ್ಥೆ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ,ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಕೈಜೋಡಿಸುವ ಮೂಲಕ ದೇಶವನ್ನು ‘ಸ್ವಚ್ಛಗೊಳಿಸುವ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಯುವಜನತೆಗೆ ಕರೆ ನೀಡಿದರು.

‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರಕಾರವು ಜಾರಿಗೊಳಿಸಿರುವ ಡಿಜಿಟಲ್ ಪಾವತಿ ಕಾರ್ಯಕ್ರಮಗಳಿಗೆ ಜನತೆ ಅದರಲ್ಲಿ ವಿಶೇಷವಾಗಿ ಯುವಜನರು ರಾಯಭಾರಿಗಳಾಗಬೇಕೆಂದು ಕರೆ ನೀಡಿದರು.
  ‘‘ ಭ್ರಷ್ಟಾಚಾರ ಹಾಗೂ ಕಪ್ಪುಹಣದ ವಿರುದ್ಧ ಹೋರಾಟದಲ್ಲಿ ಪ್ರಧಾನ ಪಾತ್ರವಹಿಸುವ ಡಿಜಿಟಲ್ ಪಾವತಿ ಚಳವಳಿಯ ನೇತೃತ್ವವನ್ನು ವಹಿಸಿಕೊಳ್ಳಿ. ಈ ಚಳವಳಿಯಲ್ಲಿ ಶಾಮೀಲಾದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಭ್ರಷ್ಟಾಚಾರ ನಿಗ್ರಹ ತಂಡದ ಸದಸ್ಯನೆನಿಸಿಕೊಳ್ಳುತ್ತಾನೆ. ಸ್ವಚ್ಛತೆ ಹಾಗೂ ಶುದ್ಧತೆಯ ಸೇನಾನಿಯೆನಿಸಿಕೊಳ್ಳುತ್ತಾನೆ’’ ಎಂದು ಪ್ರಧಾನಿ ಭಾಷಣದಲ್ಲಿ ಹೇಳಿದರು.
 ದೇಶದ ಜನತೆ ನಿಧಾನವಾಗಿ ಡಿಜಿಟಲ್ ಕರೆನ್ಸಿ ವ್ಯವಸ್ಥೆಯೆಡೆಗೆ ಸಾಗುತ್ತಿದ್ದಾರೆಂದು ಹೇಳಿದ ಮೋದಿ, ಪಾವತಿಗಳನ್ನು ಮಾಡಲು ಹಾಗೂ ಸ್ವೀಕರಿಸಲು ಮೊಬೈಲ್‌ಫೋನ್‌ಗಳನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ಯುವಜನತೆ ಡಿಜಿಟಲ್ ಪಾವತಿ ಚಳವಳಿಯ ಮುನ್ನಡೆ ವಹಿಸಿದ್ದಾರೆ ಎಂದು ಶ್ಲಾಘಿಸಿದರು.
    ಎಪ್ರಿಲ್ 14ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮದಿನವನ್ನು ಆಚರಿಸಲಿದ್ದು, ಅಂದು ಕೇಂದ್ರ ಸರಕಾರ ಜಾರಿಗೊಳಿಸಿರುವ ಡಿಜಿಟಲ್ ಪಾವತಿ ಯೋಜನೆಗಳಿಗೆ ನೂರು ದಿನಗಳು ತುಂಬಲಿವೆ. ಡಿಜಿಟಲ್ ವ್ಯವಹಾರಗಳಿಗಾಗಿ ಮೊಬೈಲ್ ಫೋನ್‌ನಲ್ಲಿ ಭೀಮ್ ಆ್ಯಪ್ ಅನ್ನು ಡೌನ್‌ಲೋಡ್ ಮಾಡಲು ಪ್ರತಿಯೊಬ್ಬರೂ, 125 ಮಂದಿಗೆ ನೆರವಾಗುವಂತೆ ಕರೆ ನೀಡಿದರು.
  ತನ್ನ ಅಚ್ಚುಮೆಚ್ಚಿನ ಸ್ವಚ್ಛ ಭಾರತ್ ಅಭಿಯಾನವನ್ನು ಪ್ರಸ್ತಾಪಿಸಿದ ಅವರು, ಶೌಚಗೃಹಗಳನ್ನು ಸ್ವಚ್ಛಗೊಳಿಸುವುದಕ್ಕೆ ಯಾವುದೇ ರೀತಿಯ ಮಾನಸಿಕ ತಡೆಗೋಡೆ ಇರಕೂಡದು ಎಂದವರು ಹೇಳಿದರು.
ಇತ್ತೀಚೆಗೆ ನಡೆದ ಅಂಧರ ಟಿ-20 ಕ್ರಿಕೆಟ್ ವಿಶ್ವಕಪ್‌ನ ಫೈನಲ್ ಗೆದ್ದ ಆಟಗಾರರನ್ನು ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದರು.
 ಸಮಾಜದಲ್ಲಿ ಮಹಿಳೆಯರ ಪಾತ್ರವನ್ನು ಪ್ರಸ್ತಾಪಿಸಿದ ಅವರು, ಕ್ರೀಡೆಯಾಗಲಿ ಅಥವಾ ಬಾಹ್ಯಾಕಾಶ ವಿಜ್ಞಾನವಾಗಲಿ, ವನಿತೆಯರು ಅಪ್ರತಿಮವಾದ ಸಾಧನೆಯನ್ನು ಪ್ರದರ್ಶಿಸಿದ್ದಾರೆ ಎಂದರು. ‘ಬೇಟಿ ಬಚಾವೋ, ಬೇಟಿ ಪಢಾವೊ’ ಕೇವಲ ಸರಕಾರದ ಕಾರ್ಯಕ್ರಮವಾಗಿ ಉಳಿಯದೆ, ಅದು ಸಾಮಾಜಿಕ ಸಹಾನುಭೂತಿ ಹಾಗೂ ಸಾರ್ವಜನಿಕ ಶಿಕ್ಷಣ ಚಳವಳಿಯಾಗಿ ರೂಪುಗೊಂಡಿರುವುದು ಆರೋಗ್ಯಕರ ಲಕ್ಷಣವೆಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X