Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ನಿಮ್ಮ ಸಿಎಂ' ಎಂದ ಜಿ.ಪಂ. ಅಧ್ಯಕ್ಷೆ!

'ನಿಮ್ಮ ಸಿಎಂ' ಎಂದ ಜಿ.ಪಂ. ಅಧ್ಯಕ್ಷೆ!

ಕ್ಷಮೆಗೆ ವಿಪಕ್ಷ ಸದಸ್ಯರ ಪಟ್ಟು

ವಾರ್ತಾಭಾರತಿವಾರ್ತಾಭಾರತಿ27 Feb 2017 6:14 PM IST
share
ನಿಮ್ಮ ಸಿಎಂ ಎಂದ ಜಿ.ಪಂ. ಅಧ್ಯಕ್ಷೆ!

ಮಂಗಳೂರು, ಆ.27: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಮಾತಿನ ಭರದಲ್ಲಿ 'ನಿಮ್ಮ ಸಿಎಂ' ಎಂದು ಹೇಳಿಕೆ ನೀಡುವ ಮೂಲಕ ವಿಪಕ್ಷ ಸದಸ್ಯರನ್ನು ಆಕ್ರೋಶಕ್ಕೀಡು ಮಾಡಿದ ಪ್ರಸಂಗ ಇಂದು ನಡೆಯಿತು.

ಜಿಲ್ಲಾ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳಿಗಾಗಿ ಕೇಂದ್ರ ಅನುದಾನಕ್ಕಾಗಿ ಸಂಸದರ ನೇತೃತ್ವದಲ್ಲಿ ತಂಡವೊಂದು ಭೇಟಿ ನೀಡೋಣ ಎಂದು ಮಾಜಿ ಅಧ್ಯಕ್ಷೆ ಹಾಗೂ ಹಿರಿಯ ಸದಸ್ಯೆ ಮಮತಾ ಗಟ್ಟಿಯವರು ಆಗ್ರಹಿಸಿದರು.

ಈ ಬಗ್ಗೆ ಪ್ರತಿಕ್ರಿಯೆಗೆ ಮುಂದಾದ ಮೀನಾಕ್ಷಿ ಶಾಂತಿಗೋಡು, ಬೆಂಗಳೂರು ನಗರ ಹಾಗೂ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಅಧ್ಯಕ್ಷರು ಅನುದಾನಕ್ಕಾಗಿ ನಿಯೋಗ ಕೊಂಡೊಯ್ದಿದ್ದರೂ ನಿಮ್ಮ ಸಿಎಂ ಏನೂ ಕೊಟ್ಟಿಲ್ಲ ಎಂದು ಹೇಳಿದರು.

ಈ ಮಾತು ವಿಪಕ್ಷ ಸದಸ್ಯರನ್ನು ಕೆರಳಿಸಿತು. ಅವರು ಎಲ್ಲರ ಸಿಎಂ. ಅಧ್ಯಕ್ಷ ಸ್ಥಾನದಲ್ಲಿದ್ದು, ನೀವು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಕ್ಷಮೆಯಾಚಿಸಿ ಎಂದು ಆಗ್ರಹಿಸಿದರು.

 ಇದಕ್ಕೆ ಪ್ರತಿಯಾಗಿ ಅಧ್ಯಕ್ಷರು, 'ನೀವು ಅಷ್ಟು ಗುಡುಗಿದರೆ ಯಾರೂ ಹೆದರುವವರಿಲ್ಲ' ಎಂದು ಮಾತಿನ ತಿರುಗೇಟು ನೀಡಿದರು.

ಇದರಿಂದ ಮತ್ತೂ ಕೆರಳಿದ ವಿಪಕ್ಷ ಸದಸ್ಯರು , ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆಕ್ಷೇಪಿಸುತ್ತಾ, ಅಧ್ಯಕ್ಷರ ಪೀಠದೆದುರು ತೆರಳಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ವೇದಿಕೆಯಲ್ಲಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್‌ರವರು ಪ್ರತಿಭಟನಾನಿರತ ಸದಸ್ಯರ ಜತೆ ಸೇರಿಕೊಂಡರು.

ಕೊನೆಗೆ ಉಪಾಧ್ಯಕ್ಷೆ ಕಸ್ತೂರಿ ಪಂಜ ಪ್ರತಿಕ್ರಿಯಿಸಿ, ಕೆಲವೊಮ್ಮೆ ಶಬ್ಧಗಳಲ್ಲಿ ಹೆಚ್ಚು ಕಡಿಮೆ ಆಗುತ್ತದೆ. ಸುಧಾರಿಸಿಕೊಂಡು ಹೋಗುವ ಎನ್ನುತ್ತಾ ಸದಸ್ಯರನ್ನು ಸಮಾಧಾನಿಸಲೆತ್ನಿಸಿದರು. ಕೆಲ ನಿಮಿಷಗಳ ಕಾಲ ಸದಸ್ಯರ ಪ್ರತಿಭಟನೆ ಮುಂದುವರಿದು, ಅವರು ನಮ್ಮ ಸಿಎಂ, ನಾನು ಹಾಗೇ ಹೇಳಿದ್ದು ಎಂದಾಗ ವಿಪಕ್ಷ ಸದಸ್ಯರು ತಮ್ಮ ಆಸನಗಳತ್ತ ತೆರಳಿ ಚರ್ಚೆ ಮುಂದುವರಿಸಲು ಅವಕಾಶ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X