ಪುತ್ತೂರು: ಬೈಕ್ ಮತ್ತು ಲಾರಿ ಢಿಕ್ಕಿ

ಪುತ್ತೂರು, ಫೆ.27: ಬೈಕ್ ಮತ್ತು ಅಡುಗೆ ಅನಿಲ ಸಾಗಾಟದ ಲಾರಿಯೊಂದರ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಮೈಸೂರು ರಸ್ತೆಯ ಪುತ್ತೂರು ನಗರದ ಹೊರವಲಯದ ನೆಹರೂನಗರ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ಬೈಕ್ ಸವಾರ ರಾಹುಲ್ ಕಿಶೋರ್ ಗಾಯಗೊಂಡವರು. ಮಂಗಳೂರಿನಿಂದ ಮೈಸೂರು ಕಡೆಗೆ ಅನಿಲ ಸಾಗಾಟ ನಡೆಸುತ್ತಿದ್ದ ಲಾರಿ ಹಾಗೂ ಮುಂಬಾಗದಿಂದ ಸಾಗುತ್ತಿದ್ದ ರಾಹುಲ್ ಕಿಶೋರ್ ಅವರ ಬೈಕ್ ನಡುವೆ ಢಿಕ್ಕಿ ಸಂಭವಿಸಿತ್ತು.
ಈ ಸಂದರ್ಭದಲ್ಲಿ ರಸ್ತೆಗೆಸೆಯಲ್ಪಟ್ಟ ರಾಹುಲ್ ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು ಸಂಚಾರಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story





