Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕೊರಗ ವಸತಿ ಸಮುಚ್ಚಯ ನಿರ್ಮಾಣ...

ಮಂಗಳೂರು: ಕೊರಗ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 Feb 2017 8:57 PM IST
share
ಮಂಗಳೂರು: ಕೊರಗ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಉದ್ಘಾಟನೆ

ಮಂಗಳೂರು, ಫೆ. 27: ಸ್ವಚ್ಛ ಭಾರತದ ಘೋಷಣೆಯನ್ನು ಪ್ರಧಾನ ಮಂತ್ರಿಯವರು ಮಾಡಿದಾಗ ಅವರು ದೇಶವನ್ನು ಕೋಮುವಾದ, ಭ್ರಷ್ಟಾಚಾರ ಹಾಗೂ ಆತಂಕವಾದಗಳಿಂದ ದೂರ ಮಾಡುವರೆಂದು ಭಾವಿಸಿ ನಾವು ಸ್ವಾಗತಿಸಿದ್ದೆವು. ಆದರೆ ಅವೆಲ್ಲವೂ ಕೇವಲ ರಸ್ತೆ ಗುಡಿಸುವುದಷ್ಟಕ್ಕೇ ಸೀಮಿತವಾಗಿ ನಮಗೆ ಭ್ರಮನಿರಸನವುಂಟಾಗಿದೆ. ಇವತ್ತು ಕೋಮುವಾದವನ್ನು ನಿಜವಾಗಿಯೂ ಎದುರಿಸಿ ಸೌಹಾರ್ದ ರ‍್ಯಾಲಿ ಮಾಡಿದುದಕ್ಕೆ ಸಿಪಿಎಂ ಪಕ್ಷವನ್ನು ಅಭಿನಂದಿಸಬೇಕಾಗಿದೆ ಎಂದು ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೊ ಹೇಳಿದ್ದಾರೆ.

ಅವರು ನಗರದ ಕುಲಶೇಖರ ಕೋಟಿಮುರದಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹಮ್ಮಿಕೊಂಡಿದ್ದ ಕೊರಗ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ ಉದ್ಘಾಟಿಸಿ ಮಾತನಾಡುತ್ತಿದ್ದರು.

2009ರಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಂತೂರಿನಲ್ಲಿ ವಾಸವಾಗಿದ್ದ 8 ಕೊರಗ ಕುಟುಂಬಗಳನ್ನು ಹೆದ್ದಾರಿ ವಿಸ್ತರಣೆಗಾಗಿ ಒಕ್ಕಲೆಬ್ಬಿಸಿ ನಿರ್ವಸಿತಗೊಳಿಸಿದ ವಿದ್ಯಮಾನವನ್ನು ಸಿಪಿಎಂ ಮಂಗಳೂರು ನಗರ ಸಮಿತಿ ಹಾಗೂ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಹೋರಾಟಗಳನ್ನು ಮಾಡಿ ಆದಿವಾಸಿಗಳಿಗೆ ನಗರ ಪಾಲಿಕೆ ವತಿಯಿಂದ ನಿವೇಶನ ಹಾಗೂ ವಸತಿ ಮಂಜೂರು ಮಾಡಿಸಲು ಶ್ರಮಿಸಿರುವುದು ಶ್ಲಾಘನೀಯ ಎಂದರು.

ಕಾಂಗಾರಿಯ ಮೇಲುಸ್ತುವಾರಿಯನ್ನು ವಹಿಸಿಕೊಂಡಿರುವ ತಿಮ್ಮಯ್ಯ ಕೊಂಚಾಡಿ, ಪ್ರೇಮನಾಥ ಜಲ್ಲಿಗುಡ್ಡೆ, ಉಮಾಶಂಕರ ಬೋಳೂರು ಮತ್ತು ಕಿಶೋರ್ ಪೊರ್ಕೋಡಿ ಇವರಿಗೆ ರಾಯ್ ಕ್ಯಾಸ್ಟಲಿನೊ ಅವರು ಕಾಮಗಾರಿ ಸಲಕರಣೆಗಳನ್ನು ಹಸ್ತಾತರಿಸುವ ಮೂಲಕ ಕಾಮಗಾರಿಯನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡ ಎಸ್. ವೈ. ಗುರುಶಾಂತ್ ಮಾತನಾಡಿ, ಕೊರಗರು ಸೇರಿ ಆದಿವಾಸಿಗಳ ಬದುಕು ಉಳಿದಲ್ಲಿ ಮಾತ್ರ ದೇಶದ ಜನಸಮುದಾಯದ ಬದುಕು ಉಳಿಯಬಲ್ಲುದು ಎಂದು ಎಚ್ಚರಿಸಿದರು.

ಕೃಷ್ಣಪ್ಪ ಕೊಂಚಾಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿಪಿಎಂ ದ.ಕ. ಜಿಲ್ಲಾ ಸಮಿತಿ ಕಾರ್ಯದರ್ಶಿ ವಸಂತ ಆಚಾರಿ, ಮಂಗಳೂರು ನಗರ ದಕ್ಷಿಣ ಸಮಿತಿ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ದಲಿತ ಹಕ್ಕುಗಳ ಸಮಿತಿಯ ಸಂಚಾಲಕ ಲಿಂಗಪ್ಪ ನಂತೂರು ಮಾತನಾಡಿದರು.

ವೇದಿಕೆಯಲ್ಲಿ ಸೀತಾರಾಮ್ ಎಸ್. ಕೋಡಿಕಲ್, ಆದಿವಾಸಿ ಹಕ್ಕುಗಳ ಸಮಿತಿ ನಗರ ಅಧ್ಯಕ್ಷ ಶಾಂತಾ ನಾಯ್ಕಾ, ಕಾರ್ಯದರ್ಶಿ ಶಶಿಕಲಾ ನಂತೂರು ಉಪಸ್ಥಿತರಿದ್ದರು.

ಜಯಕುಮಾರ್ ಸ್ವಾಗತಿಸಿ, ಸಂತೋಷ್ ಶಕ್ತಿನಗರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X