Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಎಫ್‌ಐ ಕೈಕಂಬ ವತಿಯಿಂದ ರಕ್ತದಾನ ಶಿಬಿರ

ಪಿಎಫ್‌ಐ ಕೈಕಂಬ ವತಿಯಿಂದ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ28 Feb 2017 1:42 PM IST
share
ಪಿಎಫ್‌ಐ ಕೈಕಂಬ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ, ಫೆ.28: ಪ್ರತಿ ವರ್ಷ ಜಗತ್ತಿನಲ್ಲಿ ಹನ್ನೆರಡು ಬಿಲಿಯನ್ ಯುನಿಟ್ ರಕ್ತಕ್ಕೆ ಬೇಡಿಕೆ ಇರುತ್ತದೆ. ಆದರೆ ಅದರಲ್ಲಿ ಒಂಬತ್ತು ಬಿಲಿಯನ್ ಯುನಿಟ್ ರಕ್ತ ಮಾತ್ರ ಪೋರೈಕೆಯಾಗುತ್ತಿದ್ದು ಇನ್ನುಳಿದ ಮೂರು ಬಿಲಿಯನ್ ಯುನಿಟ್ ರಕ್ತದ ಕೊರತೆಯಿಂದ ಪ್ರತೀ ವರ್ಷ ಸಾವಿರಾರು ಮಂದಿ ಸಾವನ್ನಪ್ಪುತ್ತಿರುವುದು ಖೇದಕರ ಸಂಗತಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ಸದಸ್ಯ ಅಶ್ರಪ್ ಮಾಚಾರ್ ಹೇಳಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಹತ್ತನೆ ವರ್ಷಾಚರಣೆಯ ಪ್ರಯುಕ್ತ ಪಿಎಫ್‌ಐ ಕೈಕಂಬ ವಲಯದ ವತಿಯಿಂದ, ಮಂಗಳೂರು ತೇಜಸ್ವಿನಿ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಕೈಕಂಬದ ಪರ್ಲಿಯ ನರ್ಸಿಂಗ್ ಹೋಮ್‌ನಲ್ಲಿ ರವಿವಾರ ನಡೆದ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ರಕ್ತದ ಕೊರತೆಯಿಂದ ಉಂಟಾಗುತ್ತಿರುವ ಸಾವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಆ ಮೂಲಕ ಜನರನ್ನು ಸ್ವಯಂ ರಕ್ತದಾನ ಪ್ರೇರೇಪಿಸಬೇಕಿದೆ. ಪಿಎಫ್‌ಐ ಸದಸ್ಯರು ಪ್ರತೀ ಗ್ರಾಮದಲ್ಲಿ ಮೂರು ತಿಂಗಳಿಗೊಮ್ಮೆ ರಕ್ತದಾನ ಶಿಬಿರ ಹಮ್ಮಿಕೊಂಡು ಬ್ಲಡ್ ಬ್ಯಾಂಕ್‌ಗೆ ಗರಿಷ್ಠಮಟ್ಟದಲ್ಲಿ ರಕ್ತ ಪೂರೈಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾರ್ ಅಹ್ಮದ್ ಮಾತನಾಡಿ, ರಕ್ತದಾನ ಶಿಬಿರ ಸಮಾಜದಲ್ಲಿ ಮಾನವೀಯತೆಯನ್ನು ಬೆಸೆಯುವಲ್ಲಿ ಸಹಕಾರಿಯಾಗಿದೆ. ಪಾಪ್ಯುಲರ್ ಫ್ರಂಟ್ ಸಂಘಟನೆ ದೇಶಾದ್ಯಂತ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುವುದರ ಜೊತೆಗೆ ಜನಾರೋಗ್ಯವೇ ರಾಷ್ಟ್ರಶಕ್ತಿ, ಸ್ಕೂಲ್‌ ಚಲೋ ಸಹಿತ ಮೊದಲಾದ ಜನಕಲ್ಯಾಣ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಅವರು ಹೇಳಿದರು.

ಪಿಎಫ್‌ಐ ಪರ್ಲಿಯಾ ವಲಯಾಧ್ಯಕ್ಷ ಅಕ್ಬರ್ ಅಲಿ ಪರ್ಲಿಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಇಬ್ರಾಹೀಂ ಮಜೀದ್ ತುಂಬೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಸಿಕಂದರ್ ಪಾಷ, ಯೆನೆಪೋಯ ಯುನಿವರ್ಸಿಟಿ ಇದರ ಶ್ವಾಸಕೋಶ ವಿಭಾಗದ ಸಹಾಯಕ ಪ್ರೊ. ಡಾ.ಇರ್ಫಾನ್, ಪರ್ಲಿಯಾ ನರ್ಸಿಂಗ್ ಹೋಮ್ ನಿರ್ದೆಶಕ ಮುಹಮ್ಮದ್ ಇಶಾನ್, ಪರ್ಲಿಯಾ ಅರಫ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ಸಾಗರ್, ತೇಜಸ್ವಿನಿ ಆಸ್ಪತ್ರೆ ಮಂಗಳೂರು ಇದರ ವೈದ್ಯ ಡಾ. ಅರ್ನವ್ ಮೊದಲಾದವರು ಭಾಗವಹಿಸಿದ್ದರು. ಶಿಬಿರದಲ್ಲಿ 71 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ರಿಝ್ವೆನ್ ತಲಪಾಡಿ ಸ್ವಾಗತಿಸಿದರು. ರಹಿಮಾನ್ ಮಠ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X