Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾ.3ರಂದು ಆತ್ರಾಡಿ ನವೀಕೃತ ಜುಮಾ ಮಸೀದಿ...

ಮಾ.3ರಂದು ಆತ್ರಾಡಿ ನವೀಕೃತ ಜುಮಾ ಮಸೀದಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Feb 2017 2:30 PM IST
share
ಮಾ.3ರಂದು ಆತ್ರಾಡಿ ನವೀಕೃತ ಜುಮಾ ಮಸೀದಿ ಉದ್ಘಾಟನೆ

ಉಡುಪಿ, ಫೆ.28: ನವೀಕೃತ ಆತ್ರಾಡಿ ಮುಹ್ಯಿದ್ದೀನ್ ಜುಮಾ ಮಸೀದಿಯ ಉದ್ಘಾಟನೆಯು ಮಾ.3ರಂದು ಜರುಗಲಿದ್ದು, ಆ ಪ್ರಯುಕ್ತ ಮಾ.2ರಿಂದ 6ರವರೆಗೆ  ಬೃಹತ್ ಆಧ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಮಾರು 60ವರ್ಷಗಳ ಇತಿಹಾಸ ಹೊಂದಿರುವ ಮಸೀದಿಯ ನವೀಕೃತ ಕಾಮಗಾರಿಯನ್ನು ಸುಮಾರು 1.5ಕೋಟಿ ರೂ. ವೆಚ್ಚದಲ್ಲಿ ಮಾಡಲಾಗಿದೆ ಎಂದು ಮಸೀದಿಯ ಜೊತೆ ಕಾರ್ಯದರ್ಶಿ ಇಸ್ಮಾಯಿಲ್ ಆತ್ರಾಡಿ ಉಡುಪಿ ಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2ರಂದು ಮಗ್ರಿಬ್ ನಮಾಝ್‌ನ ಬಳಿಕ ಆತ್ರಾಡಿ ಖಾಝಿ ವಿ.ಕೆ.ಅಬೂಬ ಕ್ಕರ್ ಮುಸ್ಲಿಯಾರ್ ನೇತೃತ್ವದಲ್ಲಿ ಹಝ್ರತ್ ಬಾಬಾ ಫಕ್ರುದ್ದೀನ್ ವಲಿಯು ಲ್ಲಾಹಿರವರ ದರ್ಗಾ ಝಿಯಾರತ್ ಹಾಗೂ ಆಧ್ಯಾತ್ಮಿಕ ಮಜ್ಲಿಸ್ ಜರಗಲಿದೆ. ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಸಾದಾತ್ ತಂಙಳ್ ಗುರುವಾಯನಕೆರೆ ದುವಾ ನೆರವೇರಿಸಲಿರುವರು. ಅಧ್ಯಕ್ಷತೆಯನ್ನು ಮಸೀದಿಯ ಅಧ್ಯಕ್ಷ ಹಾಜಿ ಕೆ.ಅಬೂಬಕರ್ ಪರ್ಕಳ ವಹಿಸಲಿರುವರು.

3ರಂದು ಶುಕ್ರವಾರ ಬೆಳಗ್ಗೆ 11ಗಂಟೆಗೆ ಮಸೀದಿಯ ವಿಸ್ತೃತ ಭಾಗದ ವಕ್ಫ್ ನಿರ್ವಹಣೆ ಕಾರ್ಯಕ್ರಮ ನಡೆಯಲಿದ್ದು, ಅಲ್‌ಹಾಜ್ ಎಂ.ಎ.ಕಾಸಿಂ ಮುಸ್ಲಿಯಾರ್ ಮೊಗ್ರಾಲ್ ಕುಂಬ್ಳೆ ಖುತ್ಬ ನಿರ್ವಹಣೆ ಮಾಡಲಿರುವರು. ಮಗ್ರಿಬ್ ನಮಾಝಿನ ಬಳಿಕ ಕಾರ್ಕಳ ತ್ವಯಿಬಾ ಗಾರ್ಡನ್‌ನ ಶರೀಫ್ ಸಅದಿ ಕಿಲ್ಲೂರು ಧಾರ್ಮಿಕ ಪ್ರವಚನ ನೀಡಲಿರುವರು. ಅಸ್ಸಯ್ಯಿದ್ ಹಾರೂನ್ ತಂಙಳ್ ಅಲ್‌ಬುಖಾರಿ ಭದ್ರಾವತಿ ದುವಾ ನೆರವೇರಿಸಲಿದ್ದಾರೆ.

4ರಂದು ಮಗ್ರಿಬ್ ನಮಾಝಿನ ಬಳಿಕ ಉಚ್ಚಿಲ ಖತೀಬ್ ಇಸ್‌ಹಾಕ್ ಫೈಝಿ ಧಾರ್ಮಿಕ ಪ್ರವಚನ ನೀಡಲಿರುವರು. ಮಾ.5ರಂದು ಅಪರಾಹ್ನ 3ಗಂಟೆಗೆ ಅನ್ಸಾರುಲ್ ಮಸಾಕೀನ್ ಯಂಗ್‌ಮೆನ್ಸ್ ಅಸೋಸಿಯೇಶನ್ ವತಿಯಿಂದ ಸಂದಲ್ ಮೆರವಣಿಗೆ ಮತ್ತು ಸಲೀಂ ಖಾದ್ರಿ ಉಜಿರೆ ಅವರಿಂದ ನಾತೇ ಶರೀಫ್ ನಡೆಯಲಿದೆ. ಮಗ್ರಿಬ್ ನಮಾಝ್‌ನ ಬಳಿಕ ಸಿದ್ದೀಖಿಯ ಮದ್ರಸ ವಿದ್ಯಾರ್ಥಿಗಳಿಂದ ದಫ್ ಪ್ರದರ್ಶನ ಮತ್ತು ಇಶಾ ನಮಾಜಿನ ಬಳಿಕ ಅನ್ವರ್ ಸಾದಾತ್ ಗೂಡಿನಬಳಿ ಅವರಿಂದ ಪ್ರವಚನ ಜರಗಲಿದೆ. ರಾತ್ರಿ 10ಗಂಟೆಗೆ ಬುರ್ದಾ ಹಾಗೂ ನಾತೇ ಶರೀಫ್(ಶುಕೂರು ಇರ್ಫಾನಿ ಚೆಂಬರಿಕ್ಕ, ನಾತ್: ಶಿಹಾನ್ ಮಂಗಳೂರು) ನಡೆಯಲಿದೆ.

6ರಂದು ಮಗ್ರಿಬ್ ನಮಾಝ್‌ನ ಬಳಿಕ ಸ್ವಲಾತ್ ವಾರ್ಷಿಕ ಹಾಗೂ ಸಮಾರೋಪ ಸಮಾರಂಭ ಜರಗಲಿದ್ದು, ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ದುವಾ ನೆರವೇರಿಸಲಿರವರು. ಅಸ್ಸಯ್ಯಿದ್ ಇಬ್ನು ವೌಲಾನಾ ತಂಙಳ್ ಚೇಳಕ್ಕಾಡ್ ಆಶೀರ್ವಚನ ನೀಡಲಿರುವರು. ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರ ಉದ್ಘಾಟಿಸಲಿರುವರು. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಪ್ರಭಾಷಣ ಮಾಡಲಿರುವರು.

 ಮುಖ್ಯ ಅತಿಥಿಗಳಾಗಿ ಸಚಿವರಾದ ಪ್ರಮೋದ್ ಮಧ್ವರಾಜ್, ಯು.ಟಿ. ಖಾದರ್, ರಮಾನಾಥ ರೈ, ಶಾಸಕರಾದ ವಿನಯ ಕುಮಾರ್ ಸೊರಕೆ, ಮೊದಿನ್ ಬಾವಾ, ಐವನ್ ಡಿಸೋಜ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಎಂ.ಎ.ಗಫೂರ್ ಮೊದಲಾದವರು ಭಾಗವಹಿಸಲಿದ್ದಾರೆ.

 ಸುದ್ದಿಗೋಷ್ಠಿಯಲ್ಲಿ ಮಸೀದಿ ಅಧ್ಯಕ್ಷ ಹಾಜಿ ಕೆ.ಅಬೂಬಕ್ಕರ್ ಪರ್ಕಳ, ಕೋಶಾಧಿಕಾರಿ ಅಬ್ದುರ್ರಹ್ಮಾನ್ ವೆನಿಲ್ಲ, ಉಪಾಧ್ಯಕ್ಷ ಹಾಜಿ ಇದಿನಬ್ಬ ಶಾಲಿಮಾರ್, ಜೊತೆ ಕೋಶಾಧಿಕಾರಿ ಸೈಯ್ಯದ್ ಮದನಿ ಎಕೆಎಂಎಸ್, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X