ಕುಖ್ಯಾತ ರೌಡಿ ಕಾಲಿಯಾ ರಫೀಕ್ ಹತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ

ಮಂಗಳೂರು, ಫೆ.28: ಕುಖ್ಯಾತ ರೌಡಿ ಕಾಲಿಯಾ ರಫೀಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಕಾಸರಗೋಡಿನ ನೂರ್ ಅಲಿ (36), ರಶೀದ್ ಟಿ.ಎಸ್.(30), ಬಂಟ್ವಾಳದ ಹುಸೈನಬ್ಬ (35) ಎಂದು ಗುರುತಿಸಲಾಗಿದೆ.
ಹತ್ಯೆಗೆ ಬಳಸಿದ ಪಿಸ್ತೂಲ್, ತಲವಾರು, ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಗಳು 3 ತಿಂಗಳಲ್ಲಿ 5 ಬಾರಿ ಕಾಲಿಯಾ ರಫೀಕ್ ಹತ್ಯೆಗೆ ಯತ್ನಿಸಿದ್ದರು ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
Next Story





