Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ಯಾಂಕ್ ನೌಕರರ ಮುಷ್ಕರ ಯಶಸ್ವಿ :...

ಬ್ಯಾಂಕ್ ನೌಕರರ ಮುಷ್ಕರ ಯಶಸ್ವಿ : ಬ್ಯಾಂಕ್‌ಗಳ ವಿಲೀನ ಖಂಡಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Feb 2017 7:33 PM IST
share
ಬ್ಯಾಂಕ್ ನೌಕರರ ಮುಷ್ಕರ ಯಶಸ್ವಿ : ಬ್ಯಾಂಕ್‌ಗಳ ವಿಲೀನ ಖಂಡಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ಬೆಂಗಳೂರು,ಫೆ.28: ಎಸ್‌ಬಿಐನೊಂದಿಗೆ ಸಹವರ್ತಿ ಬ್ಯಾಂಕುಗಳ ವಿಲೀನ, ವಸೂಲಾಗದ ಸಾಲಕ್ಕೆ ಅಧಿಕಾರಿಗಳನ್ನು ಹೊಣೆ ಮಾಡುತ್ತಿರುವುದು ವಿರೋಧಿಸಿ ರಾಷ್ಟ್ರೀಯ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಕರೆ ಕೊಟ್ಟಿದ್ದ ಒಂದು ದಿನದ ಬ್ಯಾಂಕ್ ನೌಕರರ ಮುಷ್ಕರ ಬೆಂಬಲಿಸಿ ಇಂದು ನಗರದಲ್ಲಿ ವಿವಿಧ ಬ್ಯಾಂಕ್‌ಗಳ ಸಿಬ್ಬಂದಿ ಪ್ರತಿಭಟನೆ ನಡೆಸಿದರು.

    ರಾಷ್ಟ್ರೀಯ ಬಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಮತ್ತು ಇತರೆ ಸಂಘಟನೆಗಳು ಕರೆ ಕೊಟ್ಟಿದ್ದ ಒಂದು ದಿನದ ಬ್ಯಾಂಕ್ ಮುಷ್ಕರಕ್ಕೆ ಎಸ್‌ಬಿಐ, ಎಸ್‌ಬಿಎಂ, ಕೆನರಾ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್‌ಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರಿಂದ ನಗರದಲ್ಲಿ ಬಹುತೇಕ ಬ್ಯಾಂಕ್ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿತ್ತು.

  ನಗರದಲ್ಲಿನ ಕೆನರಾ ಬ್ಯಾಂಕಿನ ಕೇಂದ್ರ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವಿವಿಧ ಬ್ಯಾಂಕ್‌ಗಳ ನೂರಾರು ಸಿಬ್ಬಂದಿ, ಅಧಿಕಾರಿಗಳು ಪಾಲ್ಗೊಂಡು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೂಡಲೆ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಸಬೇಕು ಎಂದು ಆಗ್ರಹಿಸಿದರು.

   ಪ್ರತಿಭಟನಾಕಾರರನ್ನು ಉದ್ದೇಶಿಸಿ ಅಖಿಲ ಭಾರತ ಸ್ಟೇಟ್ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವೈ.ಸುದರ್ಶನ್ ಮಾತನಾಡಿ, ಸುಧಾರಣೆಗಳ ಹೆಸರಿನಲ್ಲಿ ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನಡೆಯನ್ನು ತಾಳುತ್ತಿದೆ. ಸಾರ್ವಜನಿಕ ವಲಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಮೂಲಕ ಖಾಸಗಿ ಬಂಡವಾಳದಾರರಿಗೆ ದೇಶದ ಸಂಪತ್ತು ನೀಡಲು ಸರಕಾರ ಹುನ್ನಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

   ಯಾವುದೇ ಕಾರಣಕ್ಕೂ ರಾಷ್ಟ್ರೀಕೃತ ಬ್ಯಾಂಕಿಂಗ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಅವಕಾಶ ಕೋಡುವುದಿಲ್ಲ ಎಂದು ಎಚ್ಚರಿಕೆ ನೀಡಿದ ಅವರು, ವಸೂಲಾಗದ ಸಾಲಕ್ಕೆ ಬ್ಯಾಂಕ್ ಅಧಿಕಾರಿಗಳನ್ನು ಹೊಣೆ ಮಾಡುವುದು ಸಮಂಜಸವಲ್ಲ. ಈ ನಿರ್ಧಾರವನ್ನು ಸರಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

ಸಾಲ ವಸೂಲಿಗೆ ಸರಕಾರ ಕಠಿಣ ಕ್ರಮ ಕೈಗೊಳ್ಳದೇ ಇರುವುದರಿಂದ ಪ್ರಮಾಣ ಏರಿಕೆಯಾಗಿದೆ. 50 ಕೋಟಿಗೂ ವಸೂಲಾಗದ ಸಾಲದಲ್ಲಿ ಶೇ 80ರಷ್ಟು ಮಂದಿ ಉದ್ಯಮಿಗಳಿದ್ದಾರೆ. ಈ ಪ್ರಮಾಣ ಸಾಲವನ್ನು ಉಳಿಸಿಕೊಂಡಿರುವ ಉದ್ಯಮಿಗಳಿಂದ ಸಾಲವನ್ನು ವಸೂಲ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

 ನೋಟು ಅನಾಣ್ಯೀಕರಣದ ಬಳಿಕ ಬ್ಯಾಂಕ್ ಸಿಬ್ಬಂದಿ ಹೆಚ್ಚುವರಿ ಸಮಯ ದುಡಿದಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಹೆಚ್ಚುವರಿ ದುಡಿಮೆಯನ್ನು ಪರಿಗಣಿಸಿ ಹೆಚ್ಚುವರಿ ವೇತನ ನೀಡಿಲ್ಲ. ಅಲ್ಲದೆ ಅನಾಣ್ಯೀಕರಣದಿಂದ ಬ್ಯಾಂಕ್‌ಗಳಿಗೆ 70 ಸಾವಿರ ಕೋಟಿ ರೂಗಳಷ್ಟು ನಷ್ಟವಾಗಿದೆ. ಈ ನಷ್ಟವನ್ನು ಬಜೆಟ್‌ನಲ್ಲಿ ಭರಿಸಲಾಗುವುದು ಎಂದು ಕೇಂದ್ರ ಸರಕಾರ ಭರವಸೆ ನೀಡಿತ್ತು. ಆದರೆ ಬಜೆಟ್‌ನಲ್ಲಿ ಬ್ಯಾಂಕ್‌ಗಳನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕಿಡಿಕಾರಿದರು.

    ಕೇಂದ್ರ ಸರಕಾರಿ ನೌಕರರಿಗೆ ಗ್ರಾಚ್ಯುಟಿ ನೀಡಲಾಗಿದೆ. ಆದರೆ ಆರು ವರ್ಷಗಳಿಂದ ಬ್ಯಾಂಕ್ ಸಿಬ್ಬಂದಿಗಳಿಗೆ ಗ್ರಾಚ್ಯುಟಿ ನೀಡಿಲ್ಲ. ಕೇಂದ್ರ ಸರಕಾರ ಬ್ಯಾಂಕ್ ಸಿಬ್ಬಂದಿಗಳ ಕುರಿತ ಮಲತಾಯಿ ಧೋರಣೆ ತಾಳುತ್ತಿದೆ ಎಂದು ಕಿಡಿಕಾರಿದ ಅವರು, ಕೂಡಲೆ ಬ್ಯಾಂಕ್ ನೌಕರರಿಗೂ 2016ರಿಂದ ಪೂರ್ವಾನ್ವಯವಾಗುವಂತೆ ಇದನ್ನು ಜಾರಿಗೆ ತರಬೇಕು. ಬ್ಯಾಂಕ್‌ಗಳ ಆಡಳಿತ ಮಂಡಳಿಯಲ್ಲಿ ಕಾರ್ಮಿಕ ವರ್ಗ ಮತ್ತು ಅಧಿಕಾರಿ ವರ್ಗದವರಿಗೆ ನಿರ್ದೇಶಕ ಸ್ಥಾನಗಳಲ್ಲಿ ಪ್ರಾತಿನಿದ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

 ಪ್ರತಿಭಟನೆಯಲ್ಲಿ ಐಎನ್‌ಬಿಇಎಫ್‌ನ ಪ್ರಧಾನ ಕಾರ್ಯದರ್ಶಿ ಎಂ.ಕೆ.ನರಸಿಂಹಮೂರ್ತಿ,ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X