ಉಡುಪಿ: 38ನೆ ಮಾಸ್ಟರ್ಸ್ ರಾಷ್ಟ್ರೀಯ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪೊಲೀಸ್ ಸಿಬ್ಬಂದಿ ಸಾಧನೆ

ಉಡುಪಿ, ಫೆ.28: ಇತ್ತೀಚೆಗೆ ಹೈದರಾಬಾದ್‌ನಲ್ಲಿ ಜರಗಿದ 38ನೆ ಮಾಸ್ಟರ್ಸ್ ರಾಷ್ಟ್ರೀಯ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಿಲ್ಲಾ ಪೊಲೀಸ್ ಕಚೇರಿಯ ವಿಶೇಷ ವಿಭಾಗದ ಪೊಲೀಸ್ ಸಿಬ್ಬಂದಿ ವಿಶ್ವನಾಥ್ 4x100 ರಿಲೆಯಲ್ಲಿ ಬೆಳ್ಳಿ ಪದಕ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಶಂಕರ್ 4x400 ರಿಲೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇವರಿಬ್ಬರೂ ಸೆಪ್ಟಂಬರ್ ತಿಂಗಳಲ್ಲಿ ಚೀನಾದಲ್ಲಿ ನಡೆಯಲಿರುವ ಏಶಿಯನ್ ಗೇಮ್ಸ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಇವರ ಕ್ರೀಡಾ ಸಾಧನೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ, ಹೆಚ್ಚುವರಿ ಎಸ್ಪಿ ವಿಷ್ಣುವರ್ಧನ್, ಡಿಎಆರ್‌ನ ಆರ್‌ಪಿಐ ಶೀನಪ್ಪನಾಯ್ಕ್, ಡಿಎಸ್‌ಬಿಯ ಪೊಲೀಸ್ ನಿರೀಕ್ಷಕ ಕೆ.ಕೆ. ರಾಮಕೃಷ್ಣ ಅಭಿನಂದನೆ ಸಲ್ಲಿಸಿದ್ದಾರೆ.
Next Story





