Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್‌ಟಿಒ ಇನ್‌ಸ್ಪೆಕ್ಟರ್ ಕಚೇರಿ, ಮನೆಗಳ...

ಆರ್‌ಟಿಒ ಇನ್‌ಸ್ಪೆಕ್ಟರ್ ಕಚೇರಿ, ಮನೆಗಳ ಮೇಲೆ ಎಸಿಬಿ ದಾಳಿ

*ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರಿನ ನಾಲ್ಕು ಕಡೆ ಏಕಕಾಲಕ್ಕೆ ಕಾರ್ಯಾಚರಣೆ * ಕೋಟ್ಯಂತರ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ ?

ವಾರ್ತಾಭಾರತಿವಾರ್ತಾಭಾರತಿ28 Feb 2017 9:17 PM IST
share

ಶಿವಮೊಗ್ಗ, ಫೆ.28: ಶಿವಮೊಗ್ಗ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಮಂಗಳವಾರ ಏಕಕಾಲಕ್ಕೆ ದಿಢೀರ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎ.ಸಿ.ಬಿ.) ದ ಪೊಲೀಸರು, ಆರ್‌ಟಿಒ ಇನ್‌ಸ್ಪೆಕ್ಟರ್ ಒಬ್ಬರಿಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದಾರೆ.

ಮೂಲತಃ ಶಿವಮೊಗ್ಗದ ವಿನೋಬನಗರದ ನಿವಾಸಿಯಾಗಿರುವ ಪ್ರಸ್ತುತ ಚಿತ್ರದುರ್ಗದ ಆರ್‌ಟಿಒ ಕಚೇರಿಯಲ್ಲಿ ಒಒಡಿಯ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಸ್.ಬಿ. ಕರುಣಾಕರ ಎಂಬವರೇ ಎಸಿಬಿ ದಾಳಿಗೊಳಗಾದ ಆರ್‌ಟಿಒ ಇನ್ಸ್‌ಪೆಕ್ಟರ್ ಎಂದು ಗುರುತಿಸಲಾಗಿದೆ.

ಶಿವಮೊಗ್ಗದ ವಿನೋಬನಗರ 60 ಅಡಿ ರಸ್ತೆಯಲ್ಲಿರುವ ನಿವಾಸ, ಚಿತ್ರದುರ್ಗದಲ್ಲಿ ಅವರು ಕಾರ್ಯನಿರ್ವಹಿಸುತ್ತಿರುವ ಆರ್‌ಟಿಒ ಕಚೇರಿ ಹಾಗೂ ಮನೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿಯಲ್ಲಿರುವ ತೋಟದ ಮನೆಯ ಮೇಲೆ ಎಸಿಬಿ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳೀಯ ಎಸಿಬಿ ಡಿವೈಎಸ್ಪಿ ಎ. ಚಂದ್ರಪ್ಪ ಅವರ ನೇತೃತ್ವದ ಎಸಿಬಿ ತಂಡ ಶಿವಮೊಗ್ಗದ ನಿವಾಸದ ಮೇಲೆ ನಡೆದ ದಾಳಿ ನಡೆಸಿದ್ದು, ದಾವಣಗೆರೆ ಎಸಿಬಿ ಎಸ್ಪಿ ಪುಟ್ಟಮಾದಯ್ಯ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಇಬ್ಬರು ಡಿವೈಎಸ್ಪಿಗಳು, ಮೂವರು ಇನ್‌ಸ್ಪೆಕ್ಟರ್‌ಗಳು ಸೇರಿದಂತೆ ಸುಮಾರು 25 ಕ್ಕೂ ಅಧಿಕ ಸಿಬ್ಬಂದಿಯನ್ನೊಳಗೊಂಡ ಎಸಿಬಿ ತಂಡ ಬೆಳಗ್ಗಿನಿಂದ ಸತತ ಮಧ್ಯಾಹ್ನದ ವರೆಗೂ ಶೋಧಕಾರ್ಯಾಚರಣೆ ನಡೆಸಿ ಚಿತ್ರದುರ್ಗದ ಆರ್‌ಟಿಒ ಇನ್‌ಸ್ಪೆಕ್ಟರ್ ಎಸ್.ಬಿ. ಕರುಣಾಕರ ಅವರು ಅಕ್ರಮವಾಗಿ ಗಳಿಸಿದ್ದರೆನ್ನಲಾಗದ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಸಂಪತ್ತು ಮತ್ತು ದಾಖಲೆಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿರುವುದಾಗಿ ಮೂಲಗಳು ಮಾಹಿತಿ ನೀಡಿವೆ.

ಕಾರ್ಯಾಚರಣೆ: ಆರ್‌ಟಿಒ ಇನ್‌ಸ್ಪೆಕ್ಟರ್ ಎಸ್.ಬಿ.ಕರುಣಾಕರ ಅವರು ಆದಾಯಕ್ಕೂ ಮೀರಿದ ಸಂಪತ್ತು ಗಳಿಸಿದ್ದು, ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕೆಂದು ಶಿವಮೊಗ್ಗದ ಭ್ರಷ್ಟಾಚಾರ ವಿರೋಧಿ ಸಾಮಾಜಿಕ ಹೋರಾಟಗಾರ ಹಾಗೂ ವಕೀಲ ವಿನೋದ್ ಎಸಿಬಿ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದರು.

ದೂರಿನ ಪ್ರತಿಯೊಂದಿಗೆ ಎಸ್.ಬಿ.ಕರುಣಾಕರರವರು ಗಳಿಸಿದ್ದ ಅಕ್ರಮ ಸಂಪತ್ತಿನ ವಿವರಗಳ ಮಾಹಿತಿಯನ್ನೂ ನೀಡಿದ್ದರು ಎನ್ನಲಾಗಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯ ಅನ್ವಯ ಇವರ ವಿರುದ್ಧ ಪ್ರಕರಣ ದಾಖಲಿಸಿ, ಅವರ ಆಸ್ತಿಪಾಸ್ತಿಗಳ ತನಿಖೆ ನಡೆಸುವಂತೆ ಎಸಿಬಿಗೆ ಸಲ್ಲಿಸಿದ್ದ ದೂರಿನಲ್ಲಿ ವಕೀಲ ವಿನೋದ್ ಮನವಿ ಮಾಡಿದ್ದರು.

ಈ ದೂರಿನ ಆಧಾರದ ಮೇಲೆ ಎಸಿಬಿ ಪೊಲೀಸರು ಮಂಗಳವಾರ ಕರುಣಾಕರ ಅವರ ಮೂರು ಮನೆಗಳು ಹಾಗೂ ಕಚೇರಿಯ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಈ ವೇಳೆ ಅವರ ಹಾಗೂ ಕುಟುಂಬ ಸದಸ್ಯರ ಹೆಸರಿನಲ್ಲಿ ಮಾಡಿದ್ದರೆನ್ನಲಾದ ಕೋಟ್ಯಂತರ ರೂ. ಮೌಲ್ಯದ ಚರಾಸ್ತಿ ಸ್ಥರಾಸ್ತಿ ಪತ್ತೆಯಾಗಿವೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X