Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಲಪಾಡಿ ಟೋಲ್‌ಗೇಟ್: ಮಾ.3ರವರೆಗೆ...

ತಲಪಾಡಿ ಟೋಲ್‌ಗೇಟ್: ಮಾ.3ರವರೆಗೆ ವಿನಾಯಿತಿಗೆ ಸಂಸದ ಸೂಚನೆ

ವಾರ್ತಾಭಾರತಿವಾರ್ತಾಭಾರತಿ28 Feb 2017 10:43 PM IST
share
ತಲಪಾಡಿ ಟೋಲ್‌ಗೇಟ್: ಮಾ.3ರವರೆಗೆ ವಿನಾಯಿತಿಗೆ ಸಂಸದ ಸೂಚನೆ

ಮಂಗಳೂರು, ಫೆ.28: ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್‌ಗೇಟ್‌ನಲ್ಲಿ ಮಾ.3ರವರೆಗೆ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡುವುದನ್ನು ಮುಂದುವರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.

ತಲಪಾಡಿ ಟೋಲ್ ವಿವಾದಕ್ಕೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಲಪಾಡಿ-ಪಂಪ್‌ವೆಲ್ ನಾಲ್ಕು ಪಥ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲವಾದರೂ ಶೇ.80ರಷ್ಟು ಪೂರ್ತಿಯಾಗಿದೆ ಎಂದು ಎನ್‌ಎಚ್‌ಎಐಗೆ ಗುತ್ತಿಗೆದಾರರು ತಪ್ಪುಮಾಹಿತಿ ನೀಡಿದ್ದಾರೆ. ಸ್ಥಳೀಯರನ್ನು, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಟೋಲ್ ಸಂಗ್ರಹವನ್ನು ಆರಂಭಿಸಲಾಗಿದೆ. ಸ್ಥಳೀಯ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯ್ತಿ ನೀಡಬೇಕು. 20 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಶುಲ್ಕದಲ್ಲಿ ಅರ್ಧದಷ್ಟು ಕಡಿತ ಮಾಡಬೇಕು. ಟೋಲ್ ಸಿಬ್ಬಂದಿಯ ಪೂರ್ವಾಪರವನ್ನು ಪೊಲೀಸರು ಪರಿಶೀಲಿಸಿದ ಬಳಿಕವೇ ಗುರುತಿನ ಚೀಟಿ ನೀಡಬೇಕು. ಹಗಲು ಹೊತ್ತು ಮಹಿಳಾ ಸಿಬ್ಬಂದಿಯನ್ನು ಟೋಲ್ ಸಂಗ್ರಹಕ್ಕೆ ನಿಯೋಜಿಸಬೇಕು. ಶಾಲಾ ವಾಹನಗಳಿಗೆ ವಿನಾಯಿತಿ ನೀಡಬೇಕು ಎಂಬ ಸಲಹೆಗಳ ಬಗ್ಗೆ ಸಚಿವ ಯು.ಟಿ.ಖಾದರ್ ಗಮನ ಸೆಳೆದರು.

ಸ್ಥಳೀಯ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಿರುವುದು ಬಿಟ್ಟರೆ ಬೇರೆ ಯಾವುದೇ ಸಲಹೆ ಕಾರ್ಯಗತಗೊಂಡಿಲ್ಲ ಎಂದು ಎನ್‌ಎಚ್‌ಎಐ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ತಲಪಾಡಿ ಟೋಲ್‌ಗೇಟ್‌ನ 5 ಕಿ.ಮೀ. ವ್ಯಾಪ್ತಿಯಲ್ಲಿ 8 ಗ್ರಾಮಗಳು ಬರುತ್ತವೆ. ಕೇರಳ ಭಾಗದಲ್ಲಿ 4 ಸಾವಿರ ಹಾಗೂ ತಲಪಾಡಿಯಲ್ಲಿ 11,031 ವಾಹನಗಳು ಇವೆ. ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯಿತಿಯ ಅವಧಿ ಮುಕ್ತಾಯಗೊಂಡಿದೆ. ಶಾಲಾ ವಾಹನಗಳಿಗೆ ಮಾಸಿಕ 3,620 ರೂ. ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಗುತ್ತಿಗೆದಾರರು ಹೇಳಿದರು.

ಸುರತ್ಕಲ್‌ನ ಎನ್‌ಐಟಿಕೆ ಬಳಿಯ ಟೋಲ್‌ನಲ್ಲಿ ಶಾಲಾ ವಾಹನಗಳಿಂದ ಶುಲ್ಕವನ್ನು ಸಂಗ್ರಹಿಸುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ಮಾಹಿತಿ ನೀಡಿದರಲ್ಲದೆ ತಲಪಾಡಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಟೋಲ್ ಸಂಗ್ರಹಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಡಿಸಿಪಿ ಶಾಂತರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X