ಬದ್ರಿಯಾನಗರ: ಬೈಕ್ ಢಿಕ್ಕಿ, ವ್ಯಕ್ತಿ ಮೃತ್ಯು

ಮಂಗಳೂರು, ಫೆ.28: ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೂರು ಸಮೀಪದ ಬದ್ರಿಯಾನಗರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಲ್ಲೂರಿನ ಶೇಖರ ಪೂಜಾರಿ ಮೃತಪಟ್ಟ ವ್ಯಕ್ತಿ. ಇವರು ಸೋಮವಾರ ತನ್ನ ಮೊಮ್ಮಗನನ್ನು ಶಾಲೆಗೆ ಬಿಟ್ಟು ಮರಳಿ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮಲ್ಲೂರಿನಿಂದ ನೀರ್‌ಮಾರ್ಗ ಕಡೆಗೆ ಚಲಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತು. ಇದರಿಂದ ಶೇಖರ ಪೂಜಾರಿ ಗಂಭೀರ ಗಾಯಗೊಂಡರು.
ತಕ್ಷಣ ಮಸೀದಿಗೆ ಸೇರಿದ ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶೇಖರ ಪೂಜಾರಿ ಕೊನೆಯುಸಿರೆಳೆದರು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ.
Next Story





