ಮುಡಿಪು ಕಾಲೇಜಿನಲ್ಲಿ ವೃತ್ರಿ ಮಾರ್ಗದರ್ಶನ ಕಾರ್ಯಕ್ರಮ

ಕೊಣಾಜೆ, ಮಾ.1: ವಿದ್ಯಾರ್ಥಿಗಳು ಮೃದು ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಮುಖ್ಯಸ್ಥರಾದ ಪ್ರೊ.ಟಿ.ಪಿ.ಎಂ. ಪಕ್ಕಳ ಹೇಳಿದರು.
ಅವರು ಮಂಗಳೂರು ವಿಶ್ವವಿದ್ಯಾಲಯ ಉದ್ಯೋಗ ಮಾಹಿತಿ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು.
ಮಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ.ಪಿ.ಎಲ್ ಧರ್ಮ ಅವರು ವಿದ್ಯಾರ್ಥಿಗಳಿಗೆ ಪದವಿ ನಂತರದ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ ನಾಗರೀಕ ಸೇವಾ ಪರೀಕ್ಷೆಗಳನ್ನು ಎದುರಿಸುವಂತೆ ಸಲಹೆ ನೀಡಿದರು.
ಸಂದರ್ಶನ ಕೌಶಲ್ಯ ಹಾಗೂ ಸಂವಹನ ಕೌಶಲ್ಯಗಳ ಬಗ್ಗೆ ಕ್ಯಾಪ್ಟನ್ ವಿಜಯ್ ಕುಮಾರ್ ಮಾಹಿತಿ ನೀಡಿದರು. ವಾಣಿಜ್ಯ ಕ್ಷೇತ್ರದಲ್ಲಿ ಉದ್ಯೋಗವಕಾಶಗಳ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ಚಂದ್ರಶೇಖರ್ ಅವರು ಮಾಹಿತಿ ನೀಡಿದರು.
ಇದೇ ಸಂದರ್ಭ ವೃತ್ತಿ ಸಾಹಿತ್ಯ ಪ್ರದರ್ಶನ ನಡೆಯಿತು. ಪ್ರಾಂಶುಪಾಲ ಡಾ. ಗಿರಿಧರ್ ರಾವ್ ಎಂ.ಎಸ್., ಅಧ್ಯಕ್ಷತೆ ವಹಿಸಿದ್ದರು.
ಉದ್ಯೋಗ ಮಾಹಿತಿ ಕೋಶದ ಸಂಚಾಲಕ ನಂದಕಿಶೋರ್ ಎನ್. ಕಾರ್ಯಕ್ರಮ ಸಂಯೋಜಿಸಿದ್ದರು. ಲೋಕೇಶ್ ರೈ ನಿರೂಪಿಸಿದರು.







