ದಾಭೋಲ್ಕರ್ ಹತ್ಯಾ ಪ್ರಕರಣ: ಹಂತಕರ ಸುಳಿವು ನೀಡಿದರೆ 5 ಲಕ್ಷ ರೂ. ಬಹುಮಾನ

ಮುಂಬೈ, ಮಾ.1: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯಾ ಪ್ರಕರಣದ ಆರೋಪಿಗಳಾದ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಸಿಬಿಐ ಘೋಷಿಸಿದೆ.
ಮಹಾರಾಷ್ಟ್ರದ ಪುಣೆಯಲ್ಲಿ 2013, ಮಾರ್ಚ್ 20ರಂದು ದಾಭೋಲ್ಕರ್ ಹತ್ಯೆಯಾಗಿತ್ತು. ಈ ಪ್ರಕರಣದ ತನಿಖೆಯನ್ನು ಮಾಹಾರಾಷ್ಟ್ರ ಸರಕಾರ ಸಿಬಿಐಗೆ ವಹಿಸಿತ್ತು.
ತನಿಖೆ ನಡೆಸುತ್ತಿರುವ ಸಿಬಿಐ ಪ್ರಕರಣದ ಆರೋಪಿಗಳಾಗಿರುವ ಸಾರಂಗ್ ಅಕೋಲ್ಕರ್ ಮತ್ತು ವಿನಯ್ ಪವಾರ್ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಪ್ರಕಟಿಸಿದೆ.
Next Story





