'ಮಂಕುತಿಮ್ಮನ ಕಗ್ಗದಲ್ಲಿ ಧನಾತ್ಮಕ ಮನೋವಿಜ್ಞಾನವಿದೆ'

ಉಡುಪಿ, ಮಾ.1: ಕನ್ನಡ ಖ್ಯಾತನಾಮ ಸಾಹಿತಿಗಳಾದ ಡಿವಿಜಿ ಅವರ 'ಮಂಕುತಿಮ್ಮನ ಕಗ್ಗ' ಇಂದಿನ ಕಾಲದ ಆಡು ಮಾತಿನ ಲಯ ಹೊಂದಿರುವ ಮನೋವೈಜ್ಞಾನಿಕ ಅಂಶಗಳು ಅಡಕವಾಗಿರುವ ಒಂದು ಅದ್ಭುತ ಗ್ರಂಥ ಎಂದು ಡಾ.ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಬಿ.ಮಹಾಬಲೇಶ್ವರ ರಾವ್ ಅಭಿಪ್ರಾಯಪಟ್ಟಿದ್ದಾರೆ.
ಕುಂಜಿಬೆಟ್ಟಿನ ಡಾ.ಟಿಎಂಎ ಪೈ ಶಿಕ್ಷಣ ಮಹಾವಿದ್ಯಾಲಯ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿ ಕೊಂಡ ಱಮಂಕುತಿಮ್ಮನ ಕಗ್ಗೞಕಂಠಪಾಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ ಪೂರ್ಣಪ್ರಜ್ಞ ಕಾಲೇಜಿನ ಉಪನ್ಯಾಸಕ ಅಶ್ವತ್ ಭಾರದ್ವಾಜ್ ಮಾತನಾಡಿ, ಮಂಕುತಿಮ್ಮನ ಕಗ್ಗ ಸಕಾರಾತ್ಮಕ ಬದುಕಿನ ಮೌಲ್ಯಗಳನ್ನು ತಿಳಿಸಿಕೊಡುವ ಅಮೋಘ ಕೃತಿ. ಅದರ ಅಂತರಂಗವನ್ನು ಪ್ರತಿಯೊಬ್ಬರು ಅರಿಯಬೇಕು ಎಂಬ ಆಶಯ ವ್ಯಕ್ತ ಪಡಿಸಿದರು.
ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಶಾರದಾ ವಸತಿ ಶಾಲೆಯ ನಿರ್ದೇಶಕ ವಿದ್ಯಾವಂತ ಆಚಾರ್ಯ ಅತಿಥಿಗಳನ್ನು ಸ್ವಾಗತಿಸಿದರು. ಕುಶಾಲಿನಿ ಅತಿಥಿ ಗಳನ್ನು ಪರಿಚಯಿಸಿದರು. ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೀತಿ ಎಸ್. ರಾವ್ ವಂದಿಸಿ ಮಮತಾ ಸಾಮಂತ್ ಕಾರ್ಯಕ್ರಮ ನಿರ್ವಹಿಸಿದರು.







