ಮಂಗಳೂರು:ಪಂಚಾಯತ್ ರಾಜ್ ಪ್ರತಿನಿಧಿಗಳ ಕಾರ್ಯಗಾರ ಉದ್ಘಾಟನೆ

ಮಂಗಳೂರು.ಮಾ,1:ಫಲಾನುಭವಿಗಳ ಆಯ್ಕೆಯಲ್ಲಿ ಗ್ರಾಮ ಪಂಚಾಯತ್‌ಗಳ ಗ್ರಾಮ ಸಭೆಗಳೇ ಅಂತಿಮ ಅವರ ಹಕ್ಕುಗಳಿಗೆ ಚ್ಯುತಿಯಾಗದಂತೆ ಶಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸರಕಾರದ ಮುಖ್ಯ ಸಚೇತಕ ಐವನ್ ಡಿಸೋಜ ತಿಳಿಸಿದ್ದಾರೆ.
ದ.ಕ ಜಿಲ್ಲಾ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಹಮ್ಮಿಕೊಂಡ ಪಂಚಾಯತ್ ಪ್ರತಿನಿಧಿಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಯಲ್ಲಿ ಆಯಾ ಪಂಚಾಯತ್‌ನ ಗ್ರಾಮ ಸಭೆಗಳೇ ಮುಖ್ಯವಾಗುತ್ತವೆ.ಗ್ರಾಮ ಸ್ವರಾಜ್ಯದ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ಗಳ ಅಧಿಕಾರ,ಹಕ್ಕುಗಳಿಗೆ ಚ್ಯುತಿಯಾಗದಂತೆ ರಾಜ್ಯ ಸರಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಐವನ್ ಡಿ ಸೋಜ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮಾಜಿ ಸಭಾಪತಿಗಳಾದ ಬಿ.ಎಲ್.ಶಂಕರ್,ಸುದರ್ಶನ್ ,ಮಾಜಿ ಸಂಸದ ಸಿ.ನಾರಾಯಣ ಸ್ವಾಮಿ,ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಭಾರ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್,ಇತರ ಪದಾಧಿಕಾರಿಗಳಾದ ಲೋಕೇಶ್ ಹೆಗ್ಡೆ, ಪದ್ಮನಾಭ ನರಿಂಗಾನ, ಅಶ್ರಫ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯ ಸಮಿತಿಯ ಪ್ರತಿನಿಧಿಗಳಾದ ಸಂದೀಪ್,ರಂಗಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯತ್ ಸದಸ್ಯ ಶಾಹುಲ್ ಹಮೀದ್ ಸ್ವಾಗತಿದರು.





