ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಘಟಿಕೋತ್ಸವ ಮುಂದೂಡಿಕೆ

ಧಾರವಾಡ, ಮಾ.1: ಮಾ.4ರಂದು ಜರಗಬೇಕಾಗಿದ್ದ ಕರ್ನಾಟಕ ವಿಶ್ವವಿದ್ಯಾಲಯದ 67ನೆ ವಾರ್ಷಿಕ ಘಟಿಕೋತ್ಸವವು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಜವಾಹರಲಾಲ ನೆಹರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ. ಜಗದೇಶ ಕುಮಾರ ಅವರನ್ನು ಘಟಿಕೋತ್ಸವಕ್ಕೆ ಆಹ್ವಾನಿಸಲಾಗಿತ್ತು. ಆದರೆ ಈ ಬಗ್ಗೆ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ ವ್ಯಕ್ತವಾಗಿತ್ತು.
ಜೆಎನ್‌ಯು ಹೋರಾಟವನ್ನು ಹತ್ತಿಕ್ಕಿದ ದಲಿತ ವಿರೊಧಿ ಕುಲಪತಿ ವಿಶ್ವವಿದ್ಯಾನಿಲಯಕ್ಕೆ ಬಂದರೆ ಕರ್ನಾಟಕ ವಿಶ್ವವಿದ್ಯಾನಿಲಯಕ್ಕೆ ಕಪ್ಪುಚುಕ್ಕೆ ಎಂದು ವಿದ್ಯಾರ್ಥಿಪರ ಸಂಘಟನೆಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು.
Next Story





