ದ.ಕ. ಜಿಲ್ಲೆಯ 21 ಶಾಲೆಗಳಿಗೆ ‘ಪರಿಸರ ಮಿತ್ರ ಪ್ರಶಸ್ತಿ’
ಮಂಗಳೂರು, ಮಾ.1: ದ.ಕ ಜಿಲ್ಲೆಯ 21 ಶಾಲೆಗಳು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿವೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಸಹಯೋಗದೊಂದಿಗೆ ಮಾ.3ರಂದು ಬೆಳಗ್ಗೆ 11ಕೆ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ.
ಪ್ರಶಸ್ತಿ ವಿಜೇತ ಶಾಲೆಗಳಿಗೆ ನಗದು ಬಹುಮಾನ, ಪ್ರಮಾಣಪತ್ರ, ಲಕಗಳನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ವಿಜೇತ ಶಾಲೆಗಳ ವಿವರ
ಜಿಲ್ಲಾ ಪರಿಸರ ಮಿತ್ರ ಶಾಲೆ: ಸುದಾನ ವಸತಿಯುತ ಶಾಲೆ, ಪುತ್ತೂರು.
ಜಿಲ್ಲಾ ಹಸಿರು ಶಾಲೆಗಳು: ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆ, ದ.ಕ. ಜಿಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ, ಸರಕಾರಿ ಪ್ರೌಢ ಶಾಲೆ ಕೊಯ್ಯೂರು ಬೆಳ್ತಂಗಡಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಚೇರು ಬಿಳಿನೆಲೆ ಪುತ್ತೂರು, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ದೇವರಕಾನ ಸುಳ್ಯ, ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ರಾಮಕುಂಜ ಪುತ್ತೂರು, ರಾಮಕೃಷ್ಣ ಪ್ರೌಢಶಾಲೆ ಪುತ್ತೂರು, ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಇರ್ದೆ ಉಪ್ಪಳಿಗೆ, ದ.ಕ. ಜಿಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರ್, ಸರಕಾರಿ ಪ್ರೌಢಶಾಲೆ ಕೊಕ್ರಾಡಿ ಬೆಳ್ತಂಗಡಿ,
ಜಿಲ್ಲಾ ಹಳದಿ ಶಾಲೆಗಳು: ದ.ಕ. ಜಿಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ ಪುತ್ತೂರು, ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ, ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಹಿರೇಬಂಡಾಡಿ ಪುತ್ತೂರು, ದ.ಕ. ಜಿಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ-ಕೈಕಂಬ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಪುತ್ತೂರು, ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆ ರೆಂಜಿಲಾಡಿ ಪುತ್ತೂರು, ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆ ಸುರಿಬೈಲು ಬಂಟ್ವಾಳ, ದ.ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆ ಮಜಿ ಬಂಟ್ವಾಳ, ದ.ಕ. ಜಿಪಂ ಕಿರಿಯ ಪ್ರಾಥಮಿಕ ಶಾಲೆ ಚೆನ್ನಾವರ ಪಾಲ್ತಾಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೈ ಆನಡ್ಕ ಬಂಟ್ವಾಳ.