ಖರ್ಗೆ ನೇತೃತ್ವದ ಶಾಸಕರ ನಿಯೋಗದಿಂದ ಸಿಎಂ ಭೇಟಿ
ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಬೆಂಗಳೂರು, ಮಾ.2: ಕಾಂಗ್ರೆಸ್‌ನ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ಶಾಸಕರ ನಿಯೋಗವೊಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿಯಾಯಿತು.
ಬಜೆಟ್ ನಲ್ಲಿ ಸೇರಿಸಬೇಕಾದ ವಿವಿಧ ಅಭಿವೃದ್ಧಿ ವಿಚಾರಗಳ ಬಗ್ಗೆ ನಿಯೋಗವು ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಿತು.
ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ತನ್ವೀರ್ ಸೇಠ್ ಈ ಸಂದರ್ಭ ಉಪಸ್ಥಿತರಿದ್ದರು.
Next Story





