Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಘನತ್ಯಾಜ್ಯ ನಿರ್ವಹಣೆಯಲ್ಲಿ ಅವ್ಯವಹಾರ...

ಘನತ್ಯಾಜ್ಯ ನಿರ್ವಹಣೆಯಲ್ಲಿ ಅವ್ಯವಹಾರ ಶಂಕೆ : ತನಿಖೆಗೆ ಆಗ್ರಹ

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ

ವಾರ್ತಾಭಾರತಿವಾರ್ತಾಭಾರತಿ2 March 2017 7:33 PM IST
share
ಘನತ್ಯಾಜ್ಯ ನಿರ್ವಹಣೆಯಲ್ಲಿ ಅವ್ಯವಹಾರ ಶಂಕೆ : ತನಿಖೆಗೆ ಆಗ್ರಹ

ಮೂಡುಬಿದಿರೆ, ಮಾ.2: ಪುರಸಭೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಆರೋಪ ಪ್ರತ್ಯಾರೋಪಗಳ ನಡುವೆ ನಡೆದು ಗದ್ದಲಗಳೊಂದಿಗೆ ಮುಕ್ತಾಯ ಕಂಡಿತು.

 ಸಭೆ ಆರಂಭಗೊಳ್ಳುತ್ತಿದ್ದಂತೆಯೇ ಪುರಸಭೆಯ ಘನತ್ಯಾಜ್ಯ ನಿರ್ವಹಣೆಯಲ್ಲಾಗುತ್ತಿರುವ ಅವ್ಯವಹಾರದ ಬಗ್ಗೆ ಶಂಶಯ ವ್ಯಕ್ತಪಡಿಸಿದ ಪುರಸಭೆಯ ಹಿರಿಯ ಸದಸ್ಯ ಬಾಹುಬಲಿ ಪ್ರಸಾದ್ ಪಕ್ಕದ ಕಾರ್ಕಳ ಪುರಸಭೆಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ 1.75 ಲಕ್ಷ ಖರ್ಚಾಗುತ್ತಿದ್ದರೆ ನಮ್ಮಲ್ಲಿ 9 ಲಕ್ಷ ಖರ್ಚು ತೋರಿಸಲಾಗುತ್ತಿದೆ. ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಸಂಬಳದಲ್ಲಿಯೂ ಸಾಕಷ್ಟು ಗೊಂದಲಗಳಿವೆ. ಪುರಸಭಾ ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆಯಲ್ಲಿ ಭಾರೀ ಅವ್ಯವಹಾರದ ಶಂಕೆಯಿದ್ದು, ಸೂಕ್ತ ರೀತಿಯ ತನಿಖೆ ನಡೆಯಬೇಕಿದೆ ಎಂದು ಆಗ್ರಹಿಸಿದರು.
 
ಇದಕ್ಕೆ ದನಿಗೂಡಿಸಿದ ಪುರಸಭಾ ಸದಸ್ಯರಾದ ಪ್ರಸಾದ್ ಹಾಗೂ ದಿನೇಶ್ ಸೂಕ್ತ ತನಿಖೆ ನಡೆಸುವಂತೆ ಒಮ್ಮತ ಸೂಚಿಸಿದರು. ಇದಕ್ಕುತ್ತರಿಸಿದ ಆಡಳಿತ ಪಕ್ಷದ ಸದಸ್ಯ ಪಿ.ಕೆ. ಥೋಮಸ್, ಪೌರಕಾರ್ಮಿಕರ ಸಂಖ್ಯೆಯಲ್ಲಿ ಜಾಸ್ತಿಯಾಗಿರುವುದು ಹಾಗೂ ಇತರೆ ಖರ್ಚುಗಳು ಅಧಿಕಗೊಂಡಿರುವುದರಿಂದ ಈ ಸಮಸ್ಯೆ ತಲೆದೋರಿದ್ದು, ಇದಕ್ಕಾಗಿ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮುಖ್ಯಮಂತ್ರಿ ನಿಧಿಯಿಂದ ಪುರಸಭೆಯ ಎಲ್ಲ ವಾರ್ಡ್‌ಗಳಿಗೆ ಅನುದಾನ ಬಳಕೆಗೆ ತಾರತಮ್ಯ ಎಸಗಲಾಗುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವಾಗ ಮೂಡುಬಿದಿರೆ ಪುರಸಭೆಯ ಎಲ್ಲ ವಾರ್ಡ್‌ಗಳಿಗೆ ಸೂಕ್ತ ರೀತಿಯಲ್ಲಿ ಹಂಚಿಕೆ ನಡೆಯುತ್ತಿದ್ದು, ಯಾವುದೇ ತಾರತಮ್ಯ ಎಸಗಲಾಗುತ್ತಿರಲಿಲ್ಲ. ಇದೀಗ ಸಿಎಂ ಫಂಡಿನ 7.5 ಕೋಟಿ ರೂ.ಗಳಲ್ಲಿ ಹೆಚ್ಚಿನ ಪಾಲನ್ನು ಕಾಂಗ್ರೆಸ್ ಬೆಂಬಲಿತ ಸದಸ್ಯರ ವಾರ್ಡ್‌ಗಳಿಗೆ ಮಾತ್ರ ಹಂಚಲಾಗುತ್ತಿದೆ. ಈ ತಾರತಮ್ಯ ಮುಂದುವರಿದಲ್ಲಿ ಪುರಸಭೆಯ ಎದುರೇ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಬಾಹುಬಲಿ ಪ್ರಸಾದ್ ಇನ್ನೊಂದು ಸುತ್ತಿನ ವಾಗ್ದಾಳಿ ನಡೆಸಿದರು.

ಆಗ ಪಕ್ಷಭೇದ ಮರೆತ ಜೆಡಿಎಸ್ ಬೆಂಬಲಿತೆ ಪ್ರೇಮಾ ಸಾಲ್ಯಾನ್ ಬಾಹುಬಲಿ ಪ್ರಸಾದ್ ಮಾತಿಗೆ ಬೆಂಬಲ ಸೂಚಿಸಿ, ನನ್ನ ವಾರ್ಡ್‌ಗೆ ನಿಧಿ ನೀಡುವುದರಲ್ಲಿ ತಾರತಮ್ಯ ಎಸಗಲಾಗುತ್ತಿದೆ. ಒಂದೊಮ್ಮೆ ಹಣ ಮೀಸಲಿರಿಸಿದರೂ ಕ್ರಿಯಾ ಯೋಜನೆ ಮಾಡದೇ ಸತಾಯಿಸಲಾಗುತ್ತಿದೆ. ತಕ್ಷಣವೇ 25 ಲಕ್ಷ ರೂಪಾಯಿ ನನ್ನ ವಾರ್ಡ್‌ಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು.

 ಜ್ಯೋತಿನಗರದಲ್ಲಿ ರಸ್ತೆಯ ಇಕ್ಕೆಲಗಳಲ್ಲೂ ಅನಧಿಕೃತ ಗೂಡಂಗಡಿಗಳು ತಲೆಯೆತ್ತಿದ್ದು, ಅವು ಪುಟ್‌ಫಾತ್‌ಗಳನ್ನು ನುಂಗಿಹಾಕಿವೆ. ಅಲ್ಲಿ ಒಟ್ಟು ನಾಲ್ಕು ವಿದ್ಯಾಸಂಸ್ಥೆಗಳಿದ್ದು, ಅಲ್ಲಿ ವಿದ್ಯಾರ್ಥಿಗಳ ಓಡಾಟಕ್ಕೆ ಫುಟ್‌ಪಾತ್ ಇಲ್ಲದೆ ಸಮಸ್ಯೆ ಎದುರಾಗಿದೆ. ವಾಹನಗಳು ರಸ್ತೆಯಲ್ಲಿ ಹೆಚ್ಚಿರುವುದರಿಂದ ವಿದ್ಯಾರ್ಥಿಗಳಿಗೆ ಅಪಾಯ ಎದುರಾಗಿದೆ. ಇಂತಹ ಅನಧಿಕೃತ ಗೂಡಂಗಡಿಗಳಿಗೆ ಪುರಸಭೆ ಬೆಂಬಲ ನೀಡಬಾರದು ಎಂದು ಕೆಲ ಸದಸ್ಯರು ಒತ್ತಾಯಿಸಿದರು.

 ನಂತರ ಮಾತನಾಡಿದ ಪುರಸಭೆಯ ಮುಖ್ಯಾಧಿಕಾರಿ ಶೀನ ನಾಯ್ಕಾ ಮೂಡುಬಿದಿರೆಯ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕಾಗಿ ಕರೆದಿರುವ ಟೆಂಡರ್‌ನಲ್ಲಿ ಅರ್ಹ ಗುತ್ತಿಗೆದಾರರು ಭಾಗವಹಿಸಿದ್ದು, ಇದರ ಜೊತೆಗೆ ಅಲ್ಲಿನ ಬಾಡಿಗೆದಾರರ ಬೇಡಿಕೆಗಳ ಬಗ್ಗೆ ಹಾಗೂ ಅವರಿಗೆ ಸದ್ಯಕ್ಕೆ ಕಲ್ಪಿಸಬೇಕಾದ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಚರ್ಚಿಸಬೇಕಾಗಿದೆಎಂದು ವಿಷಯವನ್ನು ಸಭೆಯ ಮುಂದಿರಿಸಿದರು.

 ನಂತರ ಮಾತನಾಡಿದ ಸದಸ್ಯೆ ಪ್ರೇಮಾ ಸಾಲ್ಯಾನ್, ಲಾಡಿ ಬ್ರಹ್ಮಸ್ಥಾನದ ಬಳಿ ಸರಕಾರಿ ಜಾಗ ಅತಿಕ್ರಮಣ ನಡೆದಿದೆ. ಈ ಹಿಂದೆಯೇ ಈ ಬಗ್ಗೆ ಪುರಸಭೆಯ ಗಮನಕ್ಕೆ ತರಲಾಗಿದ್ದರೂ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ ಎಂದಾಗ ಅದಕ್ಕೆ ಉತ್ತರಿಸಿದ ಪುರಸಭೆಯ ಕಂದಾಯ ಅಧಿಕಾರಿ ಧನಂಜಯ, ತಹಸೀಲ್ದಾರ್ ವ್ಯಾಪ್ತಿಗೆ ಬರುವ ವಿಷಯವಾದ್ದರಿಂದ ಅದನ್ನು ಅವರ ಗಮನಕ್ಕೆ ತರಬೇಕುಎಂದು ಸಮಜಾಯಿಷಿ ನೀಡಿದರು.

ಆದರೆ ಅದಕ್ಕೊಪ್ಪದ ನಾಮ ನಿರ್ದೇಶಿತ ಸದಸ್ಯ ಅಲ್ವಿನ್ ಮಿನೇಜಸ್ ಮುಖ್ಯಾಧಿಕಾರಿಗಿರುವ ಅಧಿಕಾರ ವ್ಯಾಪ್ತಿಯ ಬಗ್ಗೆ ನೆನಪಿಸಿದರು.

ಈ ಸಂದರ್ಭ ಜಿಲ್ಲಾ ಯೋಜನಾ ಸಮಿತಿಯ ಅವಿರೋಧವಾಗಿ ಆಯ್ಕೆಯಾದ ಸುರೇಶ್ ಕೋಟ್ಯಾನ್‌ಗೆ ಅಭಿನಂದನೆ ಸಲ್ಲಿಸಲಾಯಿತು. ನಂತರ ಮೂಡುಬಿದಿರೆ ಪುರಸಭೆಗೆ ಘನತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದ ಬಗ್ಗೆ ಸಭೆಯಲ್ಲಿ ವಿವರಿಸಲಾಯಿತು. ಇದಕ್ಕಾಗಿ ಶ್ರಮಿಸಿದ ಎಲ್ಲರನ್ನೂ ಅಭಿನಂದಿಸಲಾಯಿತು.

ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷ ವಿನೋದ್ ಸೆರಾವೋ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಪುರಸಭಾ ಇಂಜಿನಿಯರ್ ದಿನೇಶ್, ಪರಿಸರ ಅಭಿಯಂತರರಾದ ಶಿಲ್ಪಾ, ಪ್ರಥಮ ದರ್ಜೆ ಸಿಬ್ಬಂದಿ ಯಶಸ್ವಿನಿ, ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X