Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.: ಎಸೆಸೆಲ್ಸಿ -33,518, ದ್ವಿತೀಯ...

ದ.ಕ.: ಎಸೆಸೆಲ್ಸಿ -33,518, ದ್ವಿತೀಯ ಪಿಯು-38,607 ಪರೀಕ್ಷಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ2 March 2017 11:57 PM IST
share
ದ.ಕ.: ಎಸೆಸೆಲ್ಸಿ -33,518, ದ್ವಿತೀಯ ಪಿಯು-38,607 ಪರೀಕ್ಷಾರ್ಥಿಗಳು

ಮಂಗಳೂರು, ಮಾ.2: ಪ್ರಸಕ್ತ ವರ್ಷ ದ.ಕ. ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯನ್ನು 33,518 ಹಾಗೂ ದ್ವಿತೀಯ ಪಿಯು ಪರೀಕ್ಷೆಯನ್ನು 38,607 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ.

ಅವರು ಗುರುವಾರ ತಮ್ಮ ಕಚೇರಿ ಸಭಾಂಗಣ ದಲ್ಲಿ ಪ್ರಸಕ್ತ ವರ್ಷದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ಸಿದ್ಧತೆಗಳ ಪರಿಶೀಲನೆ ನಡೆಸಲು ಪರೀಕ್ಷಾ ಕೇಂದ್ರಗಳ ಮುಖ್ಯ ಸ್ಥರ, ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದಾಗ ಅವರೊಂದಿಗೆ ಉತ್ತಮ ರೀತಿಯಲ್ಲಿ ಶಿಕ್ಷಕರು ವರ್ತಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡುವಂತೆ ಮಾಡಬೇಕು. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಫ್ಯಾನ್, ಬೆಳಕು, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಇದರಲ್ಲಿ ಲೋಪವಾದರೆ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ದ್ವಿತೀಯ ಪಿಯು: ಅಪರ ಜಿಲ್ಲಾಧಿಕಾರಿ ಕುಮಾರ್ ಮಾತನಾಡಿ, ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗೆ ಮಂಗಳೂರು ಜಿಲ್ಲಾ ಖಜಾನೆಯಿಂದಲೇ ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಆಯಾ ಪರೀಕ್ಷಾ ದಿನದಂದು ಪ್ರಶ್ನೆಪತ್ರಿಕೆ ರವಾನೆಯಾಗಲಿದೆ. ಪ್ರತೀ ಪರೀಕ್ಷಾ ಕೊಠಡಿಗಳಲ್ಲಿ ಗರಿಷ್ಠ 30 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. ಪರೀಕ್ಷಾ ಕೊಠಡಿಗಳಿಗೆ ಮೇಲ್ವಿಚಾರಕರನ್ನು ಲಾಟರಿ ಮೂಲಕ ಆಯ್ಕೆ ಮಾಡಿ ನಿಯೋಜಿ ಸಲಾಗುವುದು. ಪರೀಕ್ಷಾ ವಿಷಯಗಳ ಉಪನ್ಯಾಸಕರನ್ನು ಆಯಾ ವಿಷಯದ ಪರೀಕ್ಷೆಯಂದು ಕರ್ತವ್ಯಕ್ಕೆ ನಿಯೋಜಿಸುವಂತಿಲ್ಲ ಎಂದು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕ ತಿಮ್ಮಯ್ಯ ಮಾತನಾಡಿ, ಮಾ.9ರಿಂದ 27ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಈ ವರ್ಷ ಜಿಲ್ಲೆಯ 198 ಕಾಲೇಜುಗಳ 38,607 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಈ ಪೈಕಿ 19,128 ಹುಡುಗರು ಹಾಗೂ 19,479 ಹುಡುಗಿಯರಿದ್ದಾರೆ. ಕಲಾ ವಿಭಾಗದಲ್ಲಿ 5,796, ವಾಣಿಜ್ಯ ವಿಭಾಗದಲ್ಲಿ 17,396 ಹಾಗೂ ವಿಜ್ಞ್ಞಾನ ವಿಭಾಗದಲ್ಲಿ 15,415 ವಿದ್ಯಾರ್ಥಿ ಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 34,428 ಪ್ರಥಮ ಬಾರಿಗೆ, 1,391 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 2,788 ಮಂದಿ ಖಾಸಗಿಯಾಗಿ ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಪರೀಕ್ಷೆ ಆರಂಭವಾದ 30 ನಿಮಿಷಗಳ ಬಳಿಕ ವಿದ್ಯಾರ್ಥಿಗಳು ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದರು.

ಎಸೆಸೆಲ್ಸಿ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವಾಲ್ಟರ್ ಡಿಮೆಲ್ಲೊ ಮಾತನಾಡಿ, ಎಸೆಸೆಲ್ಸಿ ಪರೀಕ್ಷೆ ಮಾರ್ಚ್ 30ರಿಂದ ಎಪ್ರಿಲ್ 13ರವರೆಗೆ ನಡೆಯಲಿದೆ. ಜಿಲ್ಲೆಯ 500 ಶಾಲೆಗಳ 33,518 ವಿದ್ಯಾರ್ಥಿಗಳು 91 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 17,267 ಬಾಲಕರು ಹಾಗೂ 16,251 ಬಾಲಕಿಯರು ಒಳಗೊಂಡಿದ್ದಾರೆ ಎಂದರು. ಒಟ್ಟು ವಿದ್ಯಾರ್ಥಿಗಳಲ್ಲಿ 32,222 ಶಾಲಾ ವಿದ್ಯಾರ್ಥಿಗಳು ಹಾಗೂ 1,296 ಮಂದಿ ಖಾಸಗಿಯಾಗಿ ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ. ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ದಿನದಂದು ಬೆಳಗ್ಗೆ 9:30 ಗಂಟೆಯ ನಂತರ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದವರು ಇದೇ ವೇಳೆ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಡಾ.ಎಂ.ಆರ್.ರವಿ, ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಪುತ್ತೂರು ಉಪವಿಭಾಗಾಧಿಕಾರಿ ರಘುನಂದನ ಮೂರ್ತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X