Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮತ್ತೆ ಸರ್ಕಾರ್ ಆಡಳಿತ

ಮತ್ತೆ ಸರ್ಕಾರ್ ಆಡಳಿತ

ವಾರ್ತಾಭಾರತಿವಾರ್ತಾಭಾರತಿ4 March 2017 12:53 PM IST
share
ಮತ್ತೆ ಸರ್ಕಾರ್ ಆಡಳಿತ

ಬಾಳಾಠಾಕ್ರೆಯ ಯುಗ ಮುಂಬೈಯಲ್ಲಿ ಮುಗಿದು ಹಲವು ವರ್ಷಗಳು ಸಂದಿವೆಯಾದರೂ, ಅವರ ಸ್ಫೂರ್ತಿಯಿಂದ ಕೆತ್ತಲ್ಪಟ್ಟ ಪಾತ್ರ ‘ಸುಭಾಶ್ ನಾಗ್ರೆ’ಯ ಆಡಳಿತ ಮಾತ್ರ ಮುಂದುವರಿಯುತ್ತಲೇ ಇದೆ. ಬಾಳಾಠಾಕ್ರೆಯ ಬದುಕನ್ನು ಆಧರಿಸಿ ಅಥವಾ ಅದಕ್ಕೆ ಬಹಳಷ್ಟು ರೋಚಕತೆಯನ್ನು ಸೇರಿಸಿ ರಾಮ್‌ಗೋಪಾಲ್ ವರ್ಮಾ ‘ಸರ್ಕಾರ್’ ಮಾಡಿದಾಗ ಅದು ಈ ಪರಿಯ ಯಶಸ್ಸು ಕಾಣುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ.

ಇಂದು ಮುಂಬೈಯ ಜನರು ಠಾಕ್ರೆಯನ್ನು ಮರೆತಿದ್ದಾರಾದರೂ, ಅಮಿತಾಭ್ ಬಚ್ಚನ್ ನಿರ್ವಹಿಸಿರುವ ನಾಗ್ರೆಯನ್ನು ಮರೆತಿಲ್ಲ. ಪರಿಣಾಮವಾಗಿಯೇ ಇದೀಗ ಸರ್ಕಾರ್ ಭಾಗ 3 ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಹಿಂದಿನ ಎರಡೂ ಭಾಗಗಳಲ್ಲಿ ಸುಭಾಶ್ ನಾಗ್ರೆ ತನ್ನ ಎರಡೂ ಮಕ್ಕಳನ್ನು ಕಳೆದುಕೊಳ್ಳುತ್ತಾನೆ. ಈ ಬಾರಿ ನಾಗ್ರೆಯ ಜೊತೆ ನಿಲ್ಲುವವರು ಯಾರು? ಉತ್ತರ ಸಿದ್ಧವಿದೆ.

ಅಮಿತ್ ಸಾದ್ ಇದೀಗ ಅಭಿಷೇಕ್ ಬಚ್ಚನ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಶಿವಾಜಿಯಾಗಿ ತನ್ನ ತಾತನ ಜೊತೆಗೆ ಈತ ಕಾಣಿಸಿಕೊಳ್ಳಲಿದ್ದಾನೆ. ಮೊದಲ ಸರ್ಕಾರ್‌ಗೆ ಹೋಲಿಸಿದರೆ ಎರಡನೆ ಸರ್ಕಾರ್ ತೀವ್ರತೆಯಲ್ಲಿ ಸೋಲುತ್ತದೆ. ಮೊದಲ ಚಿತ್ರದಲ್ಲಿ ಚಿತ್ರಕತೆಯ ಗಾಂಭೀರ್ಯ ಎರಡನೆ ಭಾಗದಲ್ಲಿ ಕಾಣಿಸಿಕೊಂಡಿಲ್ಲ. ಮುಖ್ಯವಾಗಿ ಚಿತ್ರದಲ್ಲಿ ಐಶ್ವರ್ಯ ರೈ ನಿರ್ವಹಿಸಿದ ಪಾತ್ರ ಅಭಿಷೇಕ್ ಬಚ್ಚನನ್ನು ಹಿಂದೆ ಸರಿಸಿತ್ತು. ಈ ಬಾರಿ ಅಮಿತ್ ಸಾದ್ ಹೇಗೆ ಕಾಣಿಸಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಸರ್ಕಾರ್ ಸರಣಿಯ ಕುರಿತಂತೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಅಪಾರ ಭರವಸೆಯಲ್ಲಿದ್ದಾರೆ. ಇತ್ತೀಚೆಗೆ ಅವರ ಚಿತ್ರಗಳು ಹಿಂದಿನ ಮಾಂತ್ರಿಕತೆಯನ್ನು ಕಳೆದುಕೊಂಡಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಮೂರನೆ ಸರ್ಕಾರ್ ಹೇಗೆ ಬರುತ್ತದೆ ಎನ್ನುವುದನ್ನು ಕಾದು ನೋಡಬೇಕು. ಈ ಚಿತ್ರದಲ್ಲಿ ರಾಮ್‌ಗೋಪಾಲ್ ವರ್ಮಾ ಅವರ ಭವಿಷ್ಯವೇ ನಿಂತಿದೆ. ಒಂದು ವೇಳೆ ಈ ಚಿತ್ರವೇನಾದರೂ ಸೋತರೆ, ಮತ್ತೆ ಬಾಲಿವುಡ್ ಅವರನ್ನು ಸ್ವೀಕರಿಸುವುದು ಕಷ್ಟ.

ಅಮಿತಾಭ್ ಬಚ್ಚನ್ ಅವರ ಜೊತೆಗೆ ಮಾಡಿದ ಚಿತ್ರಗಳ ಕುರಿತಂತೆ ಹೆಮ್ಮೆಪಡುವ ವರ್ಮಾ, ಸರ್ಕಾರ್ ಚಿತ್ರದಲ್ಲಿ ಮಾತ್ರ ಅಮಿತಾಭ್ ಬಚ್ಚನ್‌ಗೆ ನಾನು ನ್ಯಾಯ ನೀಡಿದ್ದೇನೆ ಎನ್ನುತ್ತಾರೆ. ಅವರ ಜೊತೆಗೆ ಮಾಡಿದ ಉಳಿದೆಲ್ಲ ಚಿತ್ರಗಳ ಬಗ್ಗೆ ನನಗೆ ಪಶ್ಚಾತ್ತಾಪವಿದೆ ಎಂದೂ ಹೇಳಿಕೊಳ್ಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X