Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಡಿತರ ವಿತರಣೆಗೆ ಕೂಪನ್ ಕಡ್ಡಾಯವಲ್ಲ:...

ಪಡಿತರ ವಿತರಣೆಗೆ ಕೂಪನ್ ಕಡ್ಡಾಯವಲ್ಲ: ಆಹಾರ ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ4 March 2017 7:43 PM IST
share
ಪಡಿತರ ವಿತರಣೆಗೆ ಕೂಪನ್ ಕಡ್ಡಾಯವಲ್ಲ: ಆಹಾರ ಸಚಿವ ಖಾದರ್

ಬೆಂಗಳೂರು, ಮಾ. 4: ಪಡಿತರ ವಿತರಣೆಗೆ ಇನ್ನು ಮುಂದೆ ಕೂಪನ್ ಕಡ್ಡಾಯವಲ್ಲ. ನ್ಯಾಯಬೆಲೆ ಅಂಗಡಿಗಳಲ್ಲೆ ಫಲಾನುಭವಿಗಳು ಬಯೋಮೆಟ್ರಿಕ್ ನೀಡಿ ಪಡಿತರ ಪಡೆಯಬಹುದಾಗಿದ್ದು, ಎರಡು ತಿಂಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪಡಿತರ ಪಲಾನುಭವಿಗಳ ಅಲೆದಾಟ ತಪ್ಪಿಸಲು ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಅನುಷ್ಠಾನಗೊಳಿಸಲಾಗುತ್ತಿದೆ. ಮೊಬೈಲ್ ಮೂಲಕ ಕೂಪನ್ ಪಡೆದರೆ, ಬಯೋಮೆಟ್ರಿಕ್ ಇಲ್ಲದೆ ಪಡಿತರ ನೀಡಲಾಗುವುದು ಎಂದರು.

ಕೂಪನ್ ವ್ಯವಸ್ಥೆಯಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಕೂಪನ್ ಕಡ್ಡಾಯವಿಲ್ಲ. ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ಮೆಟ್ರಿಕ್ ಉಪಕರಣ ಅಳವಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಎರಡು ತಿಂಗಳಲ್ಲಿ ಎಲ್ಲ ಅಂಗಡಿಗಳಲ್ಲಿ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.

ಹಿರಿಯ ನಾಗರಿಕರು ಮತ್ತು ಅಂಗವಿಕಲರು ಮೊಬೈಲ್ ಮೂಲಕ ಕೂಪನ್ ಪಡೆದ ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ಪದಾರ್ಥಗಳನ್ನು ಪಡೆದುಕೊಳ್ಳಬಹುದು ಎಂದ ಅವರು, ಬಯೋಮೆಟ್ರಿಕ್ ಸ್ಕಾನರ್ ಮತ್ತು ಕಂಪ್ಯೂಟರ್ ಅಥವಾ ಸ್ಮಾರ್ಟ್ ಫೋನ್ ಖರೀದಿ ಹೊಣೆಯನ್ನು ನ್ಯಾಯಬೆಲೆ ಅಂಗಡಿಗಳ ಮಾಲಕರಿಗೆ ನೀಡಿದ್ದೇವೆ.

ಕಂಪ್ಯೂಟರ್ ಅಥವಾ ಸ್ಮಾರ್ಟ್‌ಫೋನ್ ಖರೀದಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಮತ್ತು ಇಲಾಖೆಯಿಂದ ಪ್ರೋತ್ಸಾಹ ಧನ ನೀಡಲಾಗುವುದು ಎಂದ ಅವರು, ವಿದ್ಯುತ್ ಮತ್ತು ಇಂಟರ್‌ನೆಟ್ ಸಂಪರ್ಕವಿಲ್ಲದ ಪ್ರದೇಶಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸಂಬಂಧ ಚಿಂತನೆ ನಡೆದಿದೆ ಎಂದರು.

ನಿರಾಕರಿಸಿದರೆ ದಂಡ: ಆಹಾರ ಭದ್ರತೆ ಕಾಯ್ದೆಯನ್ವಯ ಬಿಪಿಎಲ್ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳು ಸಮರ್ಪಕ ಪಡಿತರ ವಿತರಿಸದಿದ್ದರೆ ದಂಡ ಪಾವತಿಸಬೇಕೆಂದು ಎಚ್ಚರಿಸಿದ ಖಾದರ್, ಈ ಸಂಬಂಧ ಲೋಪದೋಷಗಳ ಬಗ್ಗೆ ಇಲಾಖೆಗೆ ಮೊಬೈಲ್ ಮೂಲಕ ದೂರು ನೀಡಬಹುದು. ಕಾರ್ಡುದಾರರು ಪಡಿತರ ಪದಾರ್ಥಗಳಿಗೆ ನ್ಯಾಯಬೆಲೆ ಅಂಗಡಿಗಳಿಂದ ಬಿಲ್ ಪಡೆದುಕೊಳ್ಳಬೇಕು ಎಂದರು.

ವರ್ಗಾವಣೆ ಸರ: ಜಿಲ್ಲೆಯಿಂದ ಜಿಲ್ಲೆಗೂ, ಒಂದು ಊರಿನಿಂದ ಮತ್ತೊಂದು ಊರಿಗೆ, ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶ ಹಾಗೂ ಒಂದು ಅಂಗಡಿಯಿಂದ ಮತ್ತೊಂದು ಅಂಗಡಿಗೂ ಮೊಬೈಲ್ ಮೂಲಕವೇ ಕಾರ್ಡುಗಳನ್ನು ವರ್ಗಾವಣೆ ಮಾಡಿಕೊಳ್ಳಬಹುದು. ಅಲ್ಲದೆ, ಕಾರ್ಡುಗಳಿಗೆ ಹೊಸದಾಗಿ ಹೆಸರು ಸೇರ್ಪಡೆ ಮತ್ತು ತೆಗೆಯುವುದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದರು.

ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ನಿಯಮ ಸರಳೀಕರಣ ಮಾಡಿದ್ದು, ಅಂಗನವಾಡಿ, ಆಶಾ ಕಾರ್ಯಕರ್ತರು, ಬಾಡಿಗೆಗೆ ಕಾರು ಓಡಿಸುವ ಚಾಲಕರು ಸೇರಿದಂತೆ ಬಡವರು ಹೊಸದಾಗಿ ಅರ್ಜಿ ಸಲ್ಲಿಸಬಹುದು. ಆ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದರು.

‘ಆಹಾರ ಭದ್ರತೆ ಕಾಯ್ದೆ ಅನುಷ್ಠಾನಕ್ಕೂ ಮೊದಲೇ ‘ಅನ್ನಭಾಗ್ಯ’ ಯೋಜನೆ ಜಾರಿಗೆ ತಂದಿದ್ದು, ಅತ್ಯಂತ ಜನಪ್ರಿಯ-ಯಶಸ್ವಿ ಯೋಜನೆ ಇದು. ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲಿಯೂ ಇಂಥ ಯೋಜನೆ ಇಲ್ಲ. ಹೀಗಿರುವಾಗ ಕೇಂದ್ರದ ಅನುದಾನದ ಯೋಜನೆ ಎಂಬ ಟೀಕೆ ಸಲ್ಲ’

-ಯು.ಟಿ.ಖಾದರ್ ಆಹಾರ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X