Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 275 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೇವಲ 4...

275 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೇವಲ 4 ನಗರಗಳು ‘ಬಯಲು ಶೌಚ ಮುಕ್ತ’: ರಾಜ್ಯದ ಪ್ರಗತಿಗೆ ಸ್ವಚ್ಛ ಭಾರತ್ ಮಿಷನ್ ಬೇಸರ

ವಾರ್ತಾಭಾರತಿವಾರ್ತಾಭಾರತಿ4 March 2017 8:37 PM IST
share
275 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೇವಲ 4 ನಗರಗಳು ‘ಬಯಲು ಶೌಚ ಮುಕ್ತ’: ರಾಜ್ಯದ ಪ್ರಗತಿಗೆ ಸ್ವಚ್ಛ ಭಾರತ್ ಮಿಷನ್ ಬೇಸರ

ಬೆಂಗಳೂರು, ಮಾ. 4: ಕರ್ನಾಟಕ ರಾಜ್ಯದ 275 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೇವಲ 4 ನಗರಗಳು ಮಾತ್ರ ಬಯಲು ಶೌಚ ಮುಕ್ತ ನಗರಗಳಾಗಿದ್ದು, ಮಹಿಳೆಯರು ಮತ್ತು ಬಡ ಜನರ ಘನತೆಯಿಂದ ಜೀವಿಸಲು ಶೌಚಾಲಯಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ಸ್ವಚ್ಛ ಭಾರತ್ ಮಿಷನ್ ನಿರ್ದೇಶಕ ಪ್ರವೀಣ್ ಪ್ರಕಾಶ್ ಸಲಹೆ ನೀಡಿದ್ದಾರೆ.

 ಶನಿವಾರ ವಿಕಾಸಸೌಧದಲ್ಲಿ ಕೇಂದ್ರ ಸರಕಾರದ ಸ್ವಚ್ಛ ಭಾರತ್ ಅಭಿಯಾನ ಹಾಗೂ ಅಮೃತ್ ಯೋಜನೆ ಪ್ರಗತಿ ಪರಿಶೀಲನೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸ್ವಚ್ಛ ಭಾರತ್ ಅಭಿಯಾನದಡಿ ಬಯಲು ಶೌಚ ಮುಕ್ತ ಯೋಜನೆಯಲ್ಲಿ ಕರ್ನಾಟಕ ಅತ್ಯಂತ ಹಿಂದುಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

2014ರ ಅಕ್ಟೋಬರ್ 2ರಂದು ಪ್ರಧಾನಿ ಮೋದಿ ಸ್ವಚ್ಛ ಭಾರತ್ ಅಭಿಯಾನಕ್ಕೆ ಚಾಲನೆ ನೀಡಿದ್ದು, 2019ರ ಅಕ್ಟೋಬರ್ 2ಕ್ಕೆ ‘ಬಯಲು ಶೌಚ ಮುಕ್ತ’ ಭಾರತ ನಿರ್ಮಾಣ ಘೋಷಣೆ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೆರೆಯ ಆಂಧ್ರ 110 ನಗರ ಸ್ಥಳೀಯ ಸಂಸ್ಥೆಗಳು ಬಯಲು ಶೌಚ ಮುಕ್ತ ಎಂದು ಘೋಷಿಸಲಾಗಿದೆ ಎಂದರು.

ಅದೇ ಮಾದರಿಯಲ್ಲಿ ಮಹಾರಾಷ್ಟ್ರ-100, ತಮಿಳುನಾಡು-40, ಗುಜರಾತ್-178 ಸ್ಥಳೀಯ ಸಂಸ್ಥೆಗಳನ್ನು ಈಗಾಗಲೇ ಬಯಲು ಶೌಚ ಮುಕ್ತವೆಂದು ಘೋಷಿಸಲಾಗಿದೆ. ಆದರೆ, ಕರ್ನಾಟಕ ರಾಜ್ಯದ 275 ನಗರ ಸ್ಥಳೀಯ ಸಂಸ್ಥೆಗಳ ಪೈಕಿ ಕೇವಲ 4 ‘ಬಯಲು ಶೌಚ ಮುಕ್ತ’ ಎಂದು ಘೋಷಿಸಿದ್ದು, ಇದು ಅತ್ಯಂತ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಬೆಂಗಳೂರಲ್ಲೆ ಇನ್ನೂ ಬಯಲು ಶೌಚ: ದೇಶದ ಬಹುತೇಕ ಮೆಟ್ರೋ ಪಾಲಿಟನ್ ಸಿಟಿಗಳು ಬಯಲು ಶೌಚ ಮುಕ್ತ ನಗರಗಳಾಗಿವೆ. ಆದರೆ, ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂಬ ಖ್ಯಾತಿ ಗಳಿಸಿರುವ ಬೆಂಗಳೂರು ನಗರ ಯಾವಾಗ ‘ಬಯಲು ಶೌಚ ಮುಕ್ತ’ ಆಗಲಿದೆ ಎಂದು ಅವರು ಪ್ರಶ್ನಿಸಿದರು.

ಜಾಗತಿಕ ಮನ್ನಣೆ ಪಡೆದ ಬೆಂಗಳೂರು ಆಕರ್ಷಿತ ನಗರ. ಹೀಗಾಗಿ, ಬೆಂಗಳೂರು ಬಯಲು ಶೌಚ ಮುಕ್ತ ನಗರ ಯಾವಾಗ ಆಗುತ್ತದೆ ಎಂದು ಎಲ್ಲರೂ ಕೇಳುತ್ತಾರೆ. ಮುಂಬೈ, ನವಿಮುಂಬೈ, ಪುಣೆ, ಅಹಮದಬಾದ್, ವಿಜಯವಾಡ ಸೇರಿದಂತೆ ಇನ್ನಿತರ ನಗರಗಳು ಬಯಲು ಶೌಚ ಮುಕ್ತ ಆಗಿವೆ ಎಂದು ಅವರು ತಿಳಿಸಿದರು.

ಬೆರಳ ತುದಿಯಲ್ಲೆ ಮಾಹಿತಿ: ಹೊಸದಿಲ್ಲಿಯಲ್ಲಿ ‘ಗೂಗಲ್ ಟಾಯ್‌ಲೆಟ್ ಲೊಕೇಟರ್’ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಗೂಗಲ್ ನಕ್ಷೆಯಲ್ಲಿ ಸಾರ್ವಜನಿಕ ಶೌಚಾಲಯ ಅಥವಾ ಸ್ವಚ್ಛ ಶೌಚಾಲಯ ಎಂದು ಟೈಪಿಸಿದರೆ ಹೊಸದಿಲ್ಲಿಯ ಎಲ್ಲ ಸಾರ್ವಜನಿಕ ಶೌಚಾಲಯಗಳ ಮಾಹಿತಿ ಬೆರಳ ತುದಿಯಲ್ಲಿ ಸಿಗುತ್ತದೆ.

ಇಂತಹ ಅತ್ಯಾಧುನಿಕ ವ್ಯವಸ್ಥೆ ಮಾಹಿತಿ ತಂತ್ರಜ್ಞಾನ ನಗರದಲ್ಲಿ ಜನರಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆ ಏಕೆ ಪ್ರಯತ್ನಿಸಬಾರದು ಎಂದ ಪ್ರಶ್ನಿಸಿದ ಅವರು, ಸ್ವಚ್ಛ ಭಾರತ್ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳ ಜನ ಪ್ರತಿನಿಧಿಗಳು ಆಸ್ಥೆ ವಹಿಸಬೇಕು ಎಂದರು.

ಸ್ವಚ್ಛ ಭಾರತ್ ಅಭಿಯಾನಕ್ಕೆ ಕೇಂದ್ರ ಸರಕಾರ ವಾರ್ಷಿಕ 10 ಸಾವಿರ ಕೋಟಿ ರೂ.ನಂತೆ 3 ವರ್ಷಗಳಿಂದ ಒಟ್ಟು 30 ಸಾವಿರ ಕೋಟಿ ರೂ.ತೆರಿಗೆ ಸಂಗ್ರಹಿಸಿದ್ದು, ಆ ಪೈಕಿ ವಾರ್ಷಿಕ 2ಸಾವಿರ ಕೋಟಿ ರೂ.ನಗರ ಮತ್ತು 8ಸಾವಿರ ಕೋಟಿ ರೂ.ಗಳನ್ನು ಗ್ರಾಮೀಣ ಪ್ರದೇಶಗಳ ಶೌಚಾಲಯ ನಿರ್ಮಾಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.

ಘನತ್ಯಾಜ್ಯ ನಿರ್ವಹಣಾ ಘಟಕ, ಸಾರ್ವಜನಿಕ ಶೌಚಾಲಯ ಮತ್ತು ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ನೀಡಲಾಗುತ್ತಿದೆ. ಅದನ್ನು ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸ್ವಚ್ಛ ಭಾರತ್ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಸಲಹೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X