ದುಬೈ ಟೆನಿಸ್ ಚಾಂಪಿಯನ್‌ಶಿಪ್: ಮರ್ರೆ ಚಾಂಪಿಯನ್

ದುಬೈ, ಮಾ.4: ಸ್ಪೇನ್‌ನ ಫೆರ್ನಾಂಡೊ ವೆರ್ಡಾಸ್ಕೊರನ್ನು ನೇರ ಸೆಟ್‌ಗಳ ಅಂತರದಿಂದ ಮಣಿಸಿರುವ ಬ್ರಿಟನ್ ಆಟಗಾರ ಆ್ಯಂಡಿ ಮರ್ರೆ ದುಬೈ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಜಯಿಸಿದ್ದಾರೆ
ಇಲ್ಲಿ ಶನಿವಾರ ನಡೆದ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವದ ನಂ.1 ಆಟಗಾರ ಮರ್ರೆ ಅವರು ಫೆರ್ನಾಂಡೊರನ್ನು 6-3, 6-2 ನೇರ ಸೆಟ್‌ಗಳ ಅಂತರದಿಂದ ಮಣಿಸಿದರು.
ಐದು ವರ್ಷಗಳ ಹಿಂದೆ ರೋಜರ್ ಫೆಡರರ್ ವಿರುದ್ಧ ಫೈನಲ್‌ನಲ್ಲಿ ಸೋತಿದ್ದ ಮರ್ರೆ ದುಬೈ ಚಾಂಪಿಯನ್‌ಶಿಪ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದುಕೊಂಡರು. ಈ ವರ್ಷ ಮೊದಲ ಹಾಗೂ ವೃತ್ತಿಜೀವನದಲ್ಲಿ 45ನೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.
‘‘ಮೊದಲ ಬಾರಿ ದುಬೈನಲ್ಲಿ ಪ್ರಶಸ್ತಿ ಜಯಿಸಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ನಾನು ಇಂದು ಚೆನ್ನಾಗಿ ಆಡಿದ್ದೆ. ನನ್ನ ಆರಂಭ ನಿಧಾನವಾಗಿತ್ತು. ಅಂತಿಮವಾಗಿ ಉತ್ತಮ ಪ್ರದರ್ಶನ ನೀಡಿರುವೆ’’ ಎಂದು ಮರ್ರೆ ಪ್ರತಿಕ್ರಿಯಿಸಿದರು.
Next Story





