Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೃತ ಯೋಧ ಮ್ಯಾಥ್ಯು ದೇಹದಲ್ಲಿ ಗಾಯಗಳು :...

ಮೃತ ಯೋಧ ಮ್ಯಾಥ್ಯು ದೇಹದಲ್ಲಿ ಗಾಯಗಳು : ಕುಟುಂಬದ ಆರೋಪ

ವಾರ್ತಾಭಾರತಿವಾರ್ತಾಭಾರತಿ5 March 2017 9:10 AM IST
share
ಮೃತ ಯೋಧ ಮ್ಯಾಥ್ಯು ದೇಹದಲ್ಲಿ ಗಾಯಗಳು : ಕುಟುಂಬದ ಆರೋಪ

ನಾಶಿಕ್/ ತಿರುವನಂತಪುರಂ, ಮಾ.5: ನಿಗೂಢವಾಗಿ ಸಾವಿಗೀಡಾಗಿರುವ ಯೋಧ ಲ್ಯಾನ್ಸ್ ನಾಯಕ್ ರಾಯ್ ಮ್ಯಾಥ್ಯೂ ಅವರ ದೇಹದಲ್ಲಿ ಗಾಯದ ಗುರುತುಗಳಿದ್ದವು ಎಂದು ಅವರ ಕುಟುಂಬಸ್ಥರು ಆರೋಪಿಸುವುದರೊಂದಿಗೆ ಈ ನಿಗೂಢ ಸಾವು ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಕುಟುಂಬದ ಆರೋಪದ ಹಿನ್ನೆಲೆಯಲ್ಲಿ ತಿರುವನಂತಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಯೋಧನ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಕೇರಳದ ಕೊಲ್ಲಂ ಜಿಲ್ಲೆಯವರಾದ ರಾಯ್ ಅವರ ಮೃತದೇಹ ದೇವಲಾಲಿ ಕೇಂದ್ರೀಯ ಶಸ್ತ್ರಾಗಾರದ ಬಳಿ ಹಳೆಯ ಬಾರಕ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ಸಾವನ್ನು ಸೇನೆ ದೃಢಪಡಿಸಿದ ಬಳಿಕ, ಯೋಧನ ಕುಟುಂಬ ಕೇರಳ ಸಿಎಂ ಹಾಗೂ ಸೇನಾ ಮುಖ್ಯಸ್ಥರಿಗೆ ಈ ಬಗ್ಗೆ ದೂರು ಸಲ್ಲಿಸಿತ್ತು.

ಯೋಧನ ಮೃತದೇಹವನ್ನು ನಾಶಿಕ್ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಗುರಿಪಡಿಸಿದ ಬಳಿಕ ತಿರುವನಂತಪುರಕ್ಕೆ ತರಲಾಗಿತ್ತು. ಯೋಧನ ಸಂಬಂಧಿಕರು ಹೊಸದಾಗಿ ಮರಣೋತ್ತರ ಪರೀಕ್ಷೆಗೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಅದಕ್ಕೆ ವ್ಯವಸ್ಥೆ ಮಾಡಲಾಯಿತು. ಇದಕ್ಕೆ ಸೇನಾ ಸಿಬ್ಬಂದಿ ಆರಂಭದಲ್ಲಿ ನಿರಾಕರಿಸಿದರೂ, ಜಿಲ್ಲಾಧಿಕಾರಿ ಮಧ್ಯಸ್ಥಿಕೆಯಿಂದಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಯಿತು.

ಸೇನೆಯ ಸಹಾಯಕ್ ವ್ಯವಸ್ಥೆ ಬಗ್ಗೆ ಆನ್‌ಲೈನ್ ಸುದ್ದಿ ಜಾಲಕ್ಕೆ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪವನ್ನು ಸೇನೆಯ ಹಿರಿಯ ಅಧಿಕಾರಿಗಳು ರಾಯ್ ವಿರುದ್ಧ ಹೊರಿಸಿದ್ದರು. ಬಳಿಕ ರಾಯ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಸೇನೆ ಪ್ರಕಟನೆ ನೀಡಿತ್ತು. ರಾಯ್ ಅವರ ಸಹೋದರ ಜೋನ್ ಮ್ಯಾಥ್ಯೂ, "ರಾಯ್ ದೇಹದಲ್ಲಿ ಗಾಯದ ಗುರುತುಗಳಿದ್ದು, ಕೇರಳದಲ್ಲಿ ಮರಣೋತ್ತರ ಪರೀಕ್ಷೆ ನಡೆಸಬೇಕು" ಎಂದು ಆಗ್ರಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X