ಮಹಿಳಾ ಹಾಕಿ: ಭಾರತಕ್ಕೆ ಹ್ಯಾಟ್ರಿಕ್ ಜಯ

ಭೋಪಾಲ್, ಮಾ.4: ನಾಯಕಿ ರಾಣಿ ನಾಲ್ಕು ನಿಮಿಷಗಳ ಅಂತರದಲ್ಲಿ ಎರಡು ಗೋಲು ಬಾರಿಸಿದ ಕಾರಣ ಭಾರತ ತಂಡ ಬೆಲಾರುಸ್ ವಿರುದ್ಧದ ಮೂರನೆ ಟೆಸ್ಟ್ ಪಂದ್ಯವನ್ನು 3-1 ಗೋಲುಗಳ ಅಂತರದಿಂದ ಗೆದ್ದುಕೊಂಡಿದೆ.
ಶ್ರೇಷ್ಠ ಪ್ರದರ್ಶನ ಮುಂದುವರಿಸಿದ ಭಾರತ ರವಿವಾರ ನಡೆದ ಪಂದ್ಯದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿತು.
35ನೆ ಹಾಗೂ 39ನೆ ನಿಮಿಷದಲ್ಲಿ ಗೋಲು ಬಾರಿಸಿದ ರಾಣಿ ಭಾರತದ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದರು. ಬೆಲಾರುಸ್ 24ನೆ ನಿಮಿಷದಲ್ಲಿ ಗೋಲು ಬಾರಿಸಿ 1-0 ಮುನ್ನಡೆ ಸಾಧಿಸಿ ಅಚ್ಚರಿ ಮೂಡಿಸಿತ್ತು. ಪ್ರವಾಸಿ ತಂಡದ ನಾಯಕಿ ರಿಟಾ ಬಟುರಾ 24ನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನ್ನು ಗೋಲಾಗಿ ಪರಿವರ್ತಿಸಿದರು. ಸತತ ಎರಡು ಗೋಲು ಬಾರಿಸಿದ ರಾಣಿ ಭಾರತಕ್ಕೆ 2-1 ಮುನ್ನಡೆ ಒದಗಿಸಿಕೊಟ್ಟರು. 42ನೆ ನಿಮಿಷದಲ್ಲಿ ಭಾರತದ ಪರ ಮೂರನೆ ಗೋಲು ಬಾರಿಸಿದ ದೀಪಿಕಾ ಭಾರತದ ಮುನ್ನಡೆಯನ್ನು 3-1ಕ್ಕೆ ಏರಿಸಿದರು.
Next Story





