ಕೀಟನಾಶಕ ಸೇವಿಸಿ ಆತ್ಮಹತ್ಯೆ
ಕೋಟ, ಮಾ.5: ಆರ್ಥಿಕ ಅಡಚಣೆಯಿಂದ ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಳೂರು ಗ್ರಾಮದ ಮೊಗೆಬೆಟ್ಟು ಎಂಬಲ್ಲಿ ಶನಿವಾರ ಮಧ್ಯಾಹ್ನದ ವೇಳೆ ನಡೆದಿದೆ.
ಮೃತರನ್ನು ಮೊಗೆಬೆಟ್ಟು ನಿವಾಸಿ ಚಂದ್ರ ಮೊಗವೀರ(46)ಎಂದು ಗುರುತಿಸಲಾಗಿದೆ.
ಕೂಲಿ ಕೆಲಸ ಮಾಡುತ್ತಿದ್ದ ಇವರು ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದರು. ಇತ್ತೀಚಿನ ದಿನಗಳಲ್ಲಿ ಕೆಲಸವಿಲ್ಲದೆ ಹಣದ ಅಡಚಣೆ ಉಂಟಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಔಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





