'ದೇಶದ 2 ಕೋಟಿ ಕುಟುಂಬಕ್ಕೆ ಸ್ವಂತ ಮನೆ ಇಲ್ಲ'

ಕುಂದಾಪುರ, ಮಾ.6: ದೇಶದಲ್ಲಿ ಎರಡು ಕೋಟಿ ಕುಟುಂಬಕ್ಕೆ ಸ್ವಂತ ಮನೆ ಇಲ್ಲ. ಸುಮಾರು 5 ಕೋಟಿ ಜನರಿಗೆ ಸ್ವಂತ ಭೂಮಿ ಇಲ್ಲ. ತುಂಡು ಭೂಮಿ ಇಲ್ಲದ ಬಡಜನರ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಈತನಕ ಸಾಧ್ಯವಾಗಿಲ್ಲ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕು ಉಪಾಧ್ಯಕ್ಷ ರಾಜೀವ ಪಡುಕೋಣೆ ಟೀಕಿಸಿದ್ದಾರೆ.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಮನೆ ನಿವೇಶನ ರಹಿತರಿಗೆ ಸರಕಾರಿ ಭೂಮಿ ಗುರುತಿಸಿ ಹಕ್ಕು ಪತ್ರ ಮಂಜೂರು ಮಾಡುವಂತೆ ಆಗ್ರಹಿಸಿ ಕಂಡ್ಲೂರು ಭವಾನಿ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ಆಯೋಜಿಸಲಾದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಯು.ದಾಸ ಭಂಡಾರಿ, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಮಾತನಾಡಿದರು.
ಸ್ಥಳೀಯ ಮುಖಂಡ ನಂದ ಕುಲಾಲ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ನಾಗರತ್ನ ನಾಡ, ಕುಶಲ, ಪದ್ಮಾವತಿ ಶೆಟ್ಟಿ, ಶೀಲಾವತಿ, ಸತೀಶ ಖಾರ್ವಿ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು.
Next Story





