ಪುತ್ತೂರು: ಬೆಂಕಿ ತಗುಲಿ ಗಾಯಗೊಂಡಿದ್ದ ಗೃಹಿಣಿ ಮೃತ್ಯು
ಪುತ್ತೂರುಮ ಮಾ.6: ಒಲೆಯಲ್ಲಿ ಅಡುಗೆ ಮಾಡುತ್ತಿವ ವೇಳೆ ಮೈಮೇಲೆ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೃಹಿಣಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಮೇನಾಲ ಬೆಲ್ಯಚಡವು ನಿವಾಸಿ ಮಣಿಕಂಠ ಎಂಬವರ ಪತ್ನಿ ಪ್ರಿಯಂವದ (22) ಮೃತಪಟ್ಟವರು. ಪ್ರಿಯಂವದ ಅವರು ಫೆ. 28 ರಂದು ತನ್ನ ಮನೆಯಲ್ಲಿ ಅಡುಗೆ ಮಾಡುವ ವೇಳೆ ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದರು.
ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ಪತಿ ಮತ್ತು ಒಂದೂವರೆ ವರ್ಷದ ಪುತ್ರನನ್ನು ಅಗಲಿದ್ದಾರೆ.
Next Story





