ಹಿರಿಯ ನಟಿ ಪದ್ಮಾ ಕುಮುಟಾ ವಿಧಿವಶ

ಬೆಂಗಳೂರು, ಮಾ.6: ಹಿರಿಯ ಕಿರುತೆರೆ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಪದ್ಮಾ ಕುಮುಟಾ ಹೃದಯಾಘಾತದಿಂದ ಇಂದು ನಿಧನರಾದರು. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಸೋಮವಾರ ಶೃತಿ ನಾಯ್ಡು ಅವರ ಮಹಾನದಿ ಧಾರವಾಹಿ ಚಿತ್ರೀಕರಣ ಸಂದರ್ಭ ಉಸಿರಾಟದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.
ಪದ್ಮಾ ಅವರ ಚೋಮನದುಡಿ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಅಲ್ಲದೇ ಇತ್ತೀಚಿನ ಕೆಲ ವರ್ಷಗಳಿಂದ ಕಿರುತೆರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಇವರ ಅಕಾಲಿಕ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Next Story





