Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಕೇಂದ್ರದಿಂದಲೇ ಮಾನವ ಹಕ್ಕು ಉಲ್ಲಂಘನೆ

ಕೇಂದ್ರದಿಂದಲೇ ಮಾನವ ಹಕ್ಕು ಉಲ್ಲಂಘನೆ

ವಾರ್ತಾಭಾರತಿವಾರ್ತಾಭಾರತಿ7 March 2017 9:35 AM IST
share

ಮಾನವ ಹಕ್ಕುಗಳ ಉಲ್ಲಂಘನೆಯಲ್ಲಿ ಭಾರತ ದಾಖಲೆ ಸ್ಥಾಪಿಸಿದೆ. ಆಮೆಷ್ನಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆಯ 2016-17ನೆ ವರ್ಷದ ವಾರ್ಷಿಕ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಆಮ್ನೆಸ್ಟಿ ಇಂಟರ್‌ನ್ಯಾಶನಲ್ ಎಂಬುದು ಯಾವುದೇ ಪ್ರಚಾರಕ್ಕೆ ಮಾಡಿಕೊಂಡ ಸಂಸ್ಥೆಯಲ್ಲ. ದಶಕಗಳ ಕಾಲ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಜಾಗತಿಕ ಮಟ್ಟದಲ್ಲಿ ಮಹತ್ವದ ಪಾತ್ರವನ್ನು ಇದು ವಹಿಸುತ್ತಾ ಬಂದಿದೆ. ಜಗತ್ತಿನ ಎಲ್ಲ ದೇಶಗಳ ಮಾನವ ಹಕ್ಕುಗಳ ಪರಿಸ್ಥಿತಿಗಳ ಬಗ್ಗೆ ನಿಷ್ಪಕ್ಷಪಾತವಾಗಿ ಅಧ್ಯಯನ ಮಾಡಿ ಇದು ವರದಿ ನೀಡುತ್ತದೆ.

ಈ ವರ್ಷ ನೀಡಿದ ವರದಿಯಲ್ಲಿ ಭಾರತದಲ್ಲಿ ನಡೆಯುತ್ತಿರುವ ನಾಗರಿಕ ಹಕ್ಕುಗಳ ದಮನದ ಮೇಲೆ ಬೆಳಕು ಚೆಲ್ಲಲಾಗಿದೆ. ಸಂವಿಧಾನದತ್ತವಾದ ಮೂಲಭೂತ ಹಕ್ಕುಗಳ ಮೇಲೆ ಪ್ರಭುತ್ವ ನಡೆಸುತ್ತಿರುವ ದಾಳಿಗಳನ್ನು ಅತ್ಯಂತ ವಿವರವಾಗಿ ಇದರಲ್ಲಿ ದಾಖಲಿಸಲಾಗಿದೆ. ಜನತೆಯ ಮೇಲೆ ದೌರ್ಜನ್ಯವೆಸಗಲು ಹಾಗೂ ಅವರ ಬಾಯಿ ಮುಚ್ಚಿಸಲೆಂದೇ ಈಗಿರುವ ಕಾನೂನುಗಳಿಗೆ ತಿದ್ದುಪಡಿ ತಂದು ಇನ್ನಷ್ಟು ಉಗ್ರವಾದ ಕಾನೂನುಗಳನ್ನು ರೂಪಿಸಲು ಕೇಂದ್ರ ಸರಕಾರ ಹುನ್ನಾರ ನಡೆಸುತ್ತಿದೆ. ಇಂತಹ ಸನ್ನಿವೇಶದಲ್ಲಿ ಈ ವರದಿ ಅತ್ಯಂತ ಮಹತ್ವದ್ದಾಗಿದೆ.

ಆಮ್ನೆಸ್ಟಿ ಸಂಸ್ಥೆಯ ವರದಿಯಲ್ಲಿ ಅತಿಶಯೋಕ್ತಿಯಾದುದು ಏನೂ ಇಲ್ಲ. ಈ ದೇಶದಲ್ಲಿ ಎನ್‌ಕೌಂಟರ್ ಹೆಸರಿನಲ್ಲಿ ನಡೆಯುತ್ತಿರುವ ಕಗ್ಗೊಲೆಗಳು, ಪೊಲೀಸ್ ಠಾಣೆಗಳಲ್ಲಿ ನಡೆಯುತ್ತಿರುವ ಸಂಶಯಾಸ್ಪದ ಸಾವುಗಳು, ಇದಕ್ಕೆಲ್ಲ ಕಾರಣವಾದ ದುಷ್ಕರ್ಮಿಗಳನ್ನು ರಕ್ಷಿಸುತ್ತಿರುವ ಸರಕಾರ ಇವೆಲ್ಲವುಗಳ ಮೇಲೆ ವರದಿ ಬೆಳಕು ಚೆಲ್ಲಿದೆ. ಮಾವೋವಾದಿಗಳ ಪ್ರಭಾವವಿರುವ ಪ್ರದೇಶಗಳಲ್ಲಿ ಕಾನೂನು ಪಾಲನೆಯ ಹೆಸರಿನಲ್ಲಿ ಪ್ರಭುತ್ವ ಅತ್ಯಂತ ಉಗ್ರವಾದ ದೌರ್ಜನ್ಯಗಳನ್ನು ನಡೆಸುತ್ತಿದೆ.

ಕಾಶ್ಮೀರದ ಬಗ್ಗೆ ವಿಶೇಷವಾಗಿ ಉಲ್ಲೇಖಿಸಿರುವ ಈ ವರದಿಗಳಲ್ಲಿ ಅಲ್ಲಿನ ಪ್ರತಿಭಟನಾಕಾರರು, ನಾಗರಿಕರು, ಮಕ್ಕಳು ಹಾಗೂ ಮಹಿಳೆಯರ ಮೇಲೆ ಸೇನಾಪಡೆ ನಡೆಸಿರುವ ದೌರ್ಜನ್ಯಗಳನ್ನು ಉಲ್ಲೇಖಿಸಲಾಗಿದೆ. ದೇಶದ ದಲಿತ,ದಮನಿತ ಸಮುದಾಯ ಹಾಗೂ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆಯ ಬಗ್ಗೆ ಈ ವರದಿ ಗಮನಸೆಳೆದಿದೆ.

ದೇಶದಲ್ಲಿ ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ನಡೆಯುತ್ತಿರುವ ದಾಳಿಗಳು ಹಾಗೂ ಶಂಕಿತ ಉಗ್ರಗಾಮಿಗಳು ಎಂದು ಹೆಸರಿಸಿ ಒಂದು ಸಮುದಾಯದ ಸಾವಿರಾರು ಯುವಕರನ್ನು ಯಾವುದೇ ವಿಚಾರಣೆ ಇಲ್ಲದೆ ಕಾರಾಗೃಹದಲ್ಲಿ ಇಟ್ಟಿರುವುದು, ಸಾವಿರಾರು ಯುವಕರ ಬದುಕು ಜೈಲಿನ ಕತ್ತಲ ಕೋಣೆಗಳಲ್ಲಿ ಕಮರಿ ಹೋಗುತ್ತಿರುವುದು ಈ ಎಲ್ಲ ಅಂಶಗಳನ್ನು ವರದಿ ಬಹಿರಂಗಪಡಿಸಿದೆ.

ಈ ವರದಿ ಬಿಡುಗಡೆಯಾಗಿರುವಾಗಲೇ ರಾಜಧಾನಿ ದಿಲ್ಲಿಯಲ್ಲಿ ಇತ್ತೀಚೆಗೆ ನಡೆದ ಘಟನೆಗಳು ಮಾನವಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ದಿಲ್ಲಿ ವಿಶ್ವವಿದ್ಯಾನಿಲಯಕ್ಕೆ ಸೇರಿದ ರಾಮ್‌ಜಸ್ ಕಾಲೇಜಿನ ಆಡಳಿತ ವರ್ಗ ಇತ್ತೀಚೆಗೆ ‘ಪ್ರತಿರೋಧ ಸಂಸ್ಕೃತಿ’ ಎಂಬ ವಿಚಾರಗೋಷ್ಠಿಯನ್ನು ಏರ್ಪಡಿಸಿತ್ತು. ಈ ಗೋಷ್ಠಿಯಲ್ಲಿ ದಿಲ್ಲಿ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಉಮರ್ ಖಾಲಿದ್ ಭಾಷಣ ಮಾಡಬೇಕಾಗಿತ್ತು. ಆದರೆ, ಈ ಹಂತದಲ್ಲಿ ಗೂಂಡಾಗಿರಿಗೆ ಇಳಿದ ಎಬಿವಿಪಿ ಎಂಬ ಸಂಘಟನೆ ಉಮರ್ ಖಾಲಿದ್‌ರನ್ನು ಭಾಷಣ ಮಾಡಲು ಬಿಡುವುದಿಲ್ಲ ಎಂದು ಪಟ್ಟುಹಿಡಿಯಿತು.

ಈ ಪುಂಡಾಟಿಕೆಗೆ ಹೆದರಿದ ಕಾಲೇಜಿನ ಆಡಳಿತ ವರ್ಗ ಏಕಾಏಕಿ ಈ ಕಾರ್ಯಕ್ರಮವನ್ನು ರದ್ದುಪಡಿಸಿತು. ಎಬಿವಿಪಿ ಬೆದರಿಕೆಗೆ ಮಣಿದು ಕಾರ್ಯಕ್ರಮವನ್ನು ರದ್ದುಪಡಿಸಿದ್ದನ್ನು ಪ್ರತಿಭಟಿಸಿ ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಈ ಪ್ರತಿಭಟನಾ ಮೆರವಣಿಗೆಯನ್ನು ದಾರಿಯಲ್ಲೇ ತಡೆದ ಎಬಿವಿಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಈ ಘಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಮತ್ತು ಅನೇಕ ಅಧ್ಯಾಪಕರು ತೀವ್ರವಾಗಿ ಗಾಯಗೊಂಡಿದ್ದು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಬಿವಿಪಿ ವಿದ್ಯಾರ್ಥಿಗಳ ಗೂಂಡಾಗಿರಿಯನ್ನು ಖಂಡಿಸಿ ದಿಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಗುರ್ಮೆಹರ್ ಕೌರ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಆಗ ಆಕೆಯನ್ನು ಅತ್ಯಾಚಾರ ನಡೆಸುವುದಾಗಿ ಬೆದರಿಕೆಗಳು ಬಂದವು. ರಾಷ್ಟ್ರಪ್ರೇಮದ ಗುತ್ತಿಗೆ ಹಿಡಿದ ಸಂಘಪರಿವಾರದವರು ಆಕೆಯನ್ನು ದೇಶದ್ರೋಹಿ ಎಂದು ಕರೆದರು. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಹುತಾತ್ಮ ಯೋಧನ ಪುತ್ರಿಯಾದ ಈಕೆಯನ್ನು ದಾವೂದ್ ಇಬ್ರಾಹೀಂಗೆ ಹೋಲಿಸಿ ಅವಮಾನಿಸಲಾಯಿತು. ಈ ಎಲ್ಲವೂ ಮಾನವ ಹಕ್ಕು ದಮನವಲ್ಲದೆ ಬೇರೇನೂ ಅಲ್ಲ.

ಕಳೆದ ವರ್ಷ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ನಡೆದ ರೋಹಿತ್ ವೇಮುಲಾ ಆತ್ಮಹತ್ಯೆ ಮತ್ತು ದಿಲ್ಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಕನ್ಹಯ್ಯಾ ಕುಮಾರ್ ಮೇಲೆ ರಾಷ್ಟ್ರದ್ರೋಹದ ಆರೋಪ ಹೊರಿಸಿ ಜೈಲಿಗೆ ತಳ್ಳಿದ ಘಟನೆ ಬರೀ ಆಕಸ್ಮಿಕಗಳಲ್ಲ. ಕನ್ಹಯ್ಯಿ ಕುಮಾರ್ ಅಫ್ಝಲ್ ಗುರು ಪರ ಘೋಷಣೆ ಕೂಗಿದ್ದರೆನ್ನಲಾದ ಸಿಡಿಯೊಂದನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಯಿತು. ಆದರೆ, ಆ ಸಿಡಿ ನಕಲಿ ಎಂಬುದು ಇದೀಗ ಬಟಾಬಯಲಾಗಿದೆ. ಇದರಿಂದ ಹತಾಶೆಗೊಂಡ ಕೇಂದ್ರ ಸರಕಾರ ಇನ್ನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ತನ್ನ ವಿರೋಧಿಗಳಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿಕಟ್ಟಲು ಮುಂದಾಗಿದೆ. ಮಾತ್ರವಲ್ಲ ಸರಕಾರದ ದೃಷ್ಟಿಯಲ್ಲಿ ದೇಶದ್ರೋಹಿಗಳೆಂದು ಪರಿಗಣಿಸಲ್ಪಟ್ಟವರನ್ನು ಹತ್ತಿಕ್ಕಲು ಈಗಿರುವ ಕಾನೂನಿಗೆ ತಿದ್ದುಪಡಿ ತರುವುದಾಗಿ ಕೇಂದ್ರ ಸಚಿವರಾದ ವೆಂಕಯ್ಯ ನಾಯ್ಡು ಮತ್ತು ಅರುಣ್ ಜೇಟ್ಲಿ ಹೇಳಿದ್ದಾರೆ. ಈ ಕಾನೂನು ಜಾರಿಗೆ ಬಂದರೆ ಬಿಜೆಪಿ ಮತ್ತು ಸಂಘಪರಿವಾರದವರನ್ನು ದೂಷಿಸುವ ಎಲ್ಲರೂ ದೇಶದ್ರೋಹದ ಆಪಾದನೆಯ ಮೇಲೆ ಜೈಲಿಗೆ ಹೋಗಬೇಕಾಗುತ್ತದೆ.

ಛತ್ತೀಸ್‌ಗಡದಲ್ಲಂತೂ ನಮ್ಮ ಜನತಂತ್ರವೇ ತಬ್ಬಲಿಯಾಗಿ ನಿಂತಿದೆ. ಮಾವೋವಾದಿಗಳ ದಮನದ ಹೆಸರಿನಲ್ಲಿ ಅಲ್ಲಿನ ಆದಿವಾಸಿಗಳ ಮೇಲೆ ನಿತ್ಯವೂ ಪೈಶಾಚಿಕ ದೌರ್ಜನ್ಯ ನಡೆಯುತ್ತಿದೆ. ಈ ಆದಿವಾಸಿಗಳನ್ನು ಬಸ್ತಾರ್ ಅರಣ್ಯ ಪ್ರದೇಶದಿಂದ ಹೊರದಬ್ಬಿ ಅಲ್ಲಿನ ಅಮೂಲ್ಯ ಖನಿಜಸಂಪತ್ತನ್ನು ಬಹುರಾಷ್ಟ್ರೀಯ ಕಾರ್ಪೊರೇಟ್ ಕಂಪೆನಿಗಳು ಕೊಳ್ಳೆಹೊಡೆಯುವುದಕ್ಕೆ ಅವಕಾಶ ನೀಡಲು ಕೇಂದ್ರದ ಮೋದಿ ಹಾಗೂ ಮಧ್ಯಪ್ರದೇಶದ ಬಿಜೆಪಿ ಸರಕಾರಗಳು ಮಸಲತ್ತು ನಡೆಸಿವೆ.

ಅದಕ್ಕಾಗಿ ಆ ನೆಲವನ್ನು ಬಿಟ್ಟುಕೊಡಲು ಒಪ್ಪದ ಆದಿವಾಸಿಗಳ ಮೇಲೆ ಕ್ರೂರವಾದ ದೌರ್ಜನ್ಯ ನಡೆಸಲಾಗುತ್ತಿದೆ. ಆದಿವಾಸಿ ಮಹಿಳೆಯರು ಪೊಲೀಸರು ಮತ್ತು ಬಾಡಿಗೆ ಗೂಂಡಾಗಳ ದೈಹಿಕ ಹಿಂಸಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಕಳೆದ ವರ್ಷ ಸೋನಿ ಸೋರಿ ಎಂಬ ಶಾಲಾ ಶಿಕ್ಷಕಿಯನ್ನು ಬಂಧಿಸಿ ಆಕೆಯ ಅತ್ಯಾಚಾರ ಸೇರಿದಂತೆ ನಾನಾರೀತಿಯ ಚಿತ್ರಹಿಂಸೆ ನೀಡಲಾಯಿತು. ಕೊನೆಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಆಕೆಗೆ ರಕ್ಷಣೆ ನೀಡಿತು.

ಬಡವರು, ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ನಿತ್ಯವೂ ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಪೊಲೀಸರು ಮಾತ್ರವಲ್ಲ, ಸಂಸ್ಕೃತಿಯ ಹೆಸರಿನಲ್ಲಿ ಗೂಂಡಾಗಿರಿ ನಡೆಸುವ ಶಕ್ತಿಗಳು ಇಲ್ಲಿ ಹುಟ್ಟಿಕೊಂಡಿವೆ. ಗೋ ರಕ್ಷಣೆಯ ಹೆಸರಿನಲ್ಲಿ ಉತ್ತರಭಾರತದಲ್ಲಿ ಅಖ್ಲಾಕ್ ಎಂಬ ಅಮಾಯಕ ವ್ಯಕ್ತಿಯನ್ನು ಕೊಚ್ಚಿಕೊಂದು ಹಾಕಿದರು. ಹರ್ಯಾಣದಲ್ಲಿ ದನ ಸಾಗಾಟ ಮಾಡುತ್ತಿದ್ದರೆಂಬ ಕಾರಣಕ್ಕೆ ಮೂವರು ದಲಿತರನ್ನು ದಾರಿಯಲ್ಲಿ ಹೊಡೆದು ಸಾಯಿಸಿದರು.

ಈ ರೀತಿ ಪುಂಡಾಟಿಕೆ ನಡೆಸಿದರು ಕೂಡಾ ದುಷ್ಕರ್ಮಿಗಳ ಮೇಲೆ ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಗುಜರಾತ್ ಹತ್ಯಾಕಾಂಡ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಮೋದಿ ಸರಕಾರದ ನಿಜ ಸ್ವರೂಪವನ್ನು ಬಯಲಿಗೆಳೆದ ಎನ್‌ಜಿಒಗಳ ಮೇಲೆ ಕೇಂದ್ರ ಗೃಹ ಇಲಾಖೆ ಉದ್ದೇಶಪೂರ್ವಕವಾಗಿ ದಾಳಿ ಆರಂಭಿಸಿದೆ.

ಗುಜರಾತ್ ಹತ್ಯಾಕಾಂಡ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹೋಗಿ ಈ ಪ್ರಕರಣದ ವಿಚಾರಣೆಗಾಗಿ ದಿಟ್ಟವಾಗಿ ಹೋರಾಡುತ್ತಿರುವ ತೀಸ್ತಾ ಸೆಟಲ್‌ವಾಡ್ ಅವರಂತಹ ಮಾನವಹಕ್ಕು ಹೋರಾಟಗಾರ್ತಿಯ ಮೇಲೆ ನೂರೆಂಟು ಮೊಕದ್ದಮೆಗಳನ್ನು ಹಾಕಿ ಅವರ ಬಾಯಿ ಮುಚ್ಚಿಸಲು ಯತ್ನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಮ್ನೆಸ್ಟಿ ಇಂಟರ್‌ನ್ಯಾಶನಲ್‌ಸಂಸ್ಥೆ ಬಿಡುಗಡೆ ಮಾಡಿದ ವರದಿ ಅತ್ಯಂತ ಗಮನಾರ್ಹವಾಗಿದೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ಜನತೆ ಪ್ರಭುತ್ವವನ್ನು ಎದುರಿಸಿ ಹೋರಾಟ ಮಾಡುವ ಕಾಲ ಸನ್ನಿಹಿತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X