ಬೆಂಗಳೂರಿನಲ್ಲಿ ಮ್ಯಾನ್ ಹೋಲ್ ದುರಂತ ; ಮೂವರು ಸಾವು

ಬೆಂಗಳೂರು, ಮಾ.7:ಸಿವಿ ರಾಮನ್‌ನಗರದಲ್ಲಿ ಮ್ಯಾನ್‌ಹೋಲ್ ದುರಂತದಲ್ಲಿ ಮೂವರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಮೂವರು ಉಸಿರುಗಟ್ಟಿ ಸಾವಿಗೀಡಾದರು ಎಂದು ತಿಳಿದು ಬಂದಿದೆ.
ಮ್ಯಾನ್ ಹೋಲ್ ನಲ್ಲಿ ಇಬ್ಬರು ಅಮ್ಲಜನಕದ ಕೊರತೆಯಿಂದ ತೊಂದರೆ ಅನುಭವಿಸಿದ್ದಾರೆ. ತಕ್ಷಣ ಇನ್ನೊಬ್ಬ ಹಗ್ಗದ ಸಹಾಯದಿಂದ ಒಳಗೆ ಇಳಿದಿದ್ದಾನೆ. ಮೂವರು ಉಸಿರುಗಟ್ಟಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಮೃತಪಟ್ಟ ಕಾರ್ಮಿಕರ ಗುರುತು ಪತ್ತೆಯಾಗಿಲ್ಲ. ದುರಸ್ತಿಯ ಗುತ್ತಿಗೆ ಪಡೆದ ಕಾಂಟ್ರಾಕ್ಟರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





