Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಿಎಸ್‌ಟಿ ನೋಂದಣಿಯಲ್ಲಿ ದೇಶದಲ್ಲೇ...

ಜಿಎಸ್‌ಟಿ ನೋಂದಣಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ: ಬಿ.ಎ.ನಾಣಿಯಪ್ಪ

ಬಿಸಿಸಿಐನಿಂದ 'ಜಿಎಸ್‌ಟಿ' ಕುರಿತು ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ7 March 2017 7:13 PM IST
share
ಜಿಎಸ್‌ಟಿ ನೋಂದಣಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ: ಬಿ.ಎ.ನಾಣಿಯಪ್ಪ

ಮಂಗಳೂರು, ಮಾ.7: ಕೇಂದ್ರ ಸರಕಾರ ಜಾರಿಗೊಳಿಸಲಿರುವ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ)ನೋಂದಣಿಯಲ್ಲಿ ಕರ್ನಾಟಕವು ದೇಶದಲ್ಲೇ ಮತ್ತು ಮಂಗಳೂರು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಮಂಗಳೂರು ಪಶ್ಚಿಮ ವಲಯ ವಾಣಿಜ್ಯ ತೆರಿಗೆ (ಜಾರಿ) ಜಂಟಿ ಆಯುಕ್ತ ಬಿ.ಎ. ನಾಣಿಯಪ್ಪ ಹೇಳಿದರು.

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಬಿಸಿಸಿಐ) ಮಂಗಳವಾರ ನಗರದ ಐಎಂಎ ಸಭಾಂಗಣದಲ್ಲಿ ಏರ್ಪಡಿಸಿದ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಕುರಿತ ವಿಚಾರ ಸಂಕಿರಣದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.

ಸಮಾಜದಲ್ಲಿ ಬೇರೆ ಬೇರೆ ವಿಧದ ವರ್ತಕರಿದ್ದಾರೆ. ವ್ಯಾಪಾರ-ವ್ಯವಹಾರಕ್ಕೆ ಸಂಬಂಧಿಸಿ ತೆರಿಗೆ ವ್ಯವಸ್ಥೆಯಲ್ಲಿ ವರ್ತಕರ ಪಾತ್ರ ಅಪಾರ. 1997ರಿಂದ ವ್ಯಾಟ್ ವ್ಯವಸ್ಥೆ ಜಾರಿಗೆ ಬಂದ ಬಳಿಕ ಬೇರೆ ಬೇರೆ ತೆರಿಗೆಗಳ ಮೂಲಕ ಶೇ.35ರಷ್ಟು ಆರ್ಥಿಕ ಹೊರೆ ಬೀಳುತ್ತಿತ್ತು. ಆದರೆ, ಜಿಎಸ್‌ಟಿ ಬಂದ ಬಳಿಕ ಶೇ.18ರಿಂದ 20ರವರೆಗೆ ಅದರ ಇಳಿಕೆಯಾಗಲಿದೆ. ಇದು ಪ್ರತಿ ಗ್ರಾಹಕನಿಗೆ ಅನುಕೂಲವಾಗಲಿದೆ ಎಂದು ಬಿ.ಎ. ನಾಣಿಯಪ್ಪ ನುಡಿದರು.

ಜಿಎಸ್‌ಟಿಗೆ ಆರಂಭದಲ್ಲಿ ಭಾರೀ ಪ್ರತಿರೋಧ ವ್ಯಕ್ತವಾದರೂ ಇದೀಗ ಎಲ್ಲರೂ ಅದಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ. ಕೋಟ್ಯಂತರ ವ್ಯವಹಾರ ಮಾಡಿದರೂ ಕೂಡ ಪಾರದರ್ಶಕವಾಗಿರಲಿ. ಇದರಿಂದ ಸ್ವತ: ಉದ್ಯಮಿಗೆ ಮಾತ್ರವಲ್ಲ ಸಮಾಜಕ್ಕೂ ಒಳ್ಳೆಯದಾಗಲಿದೆ. ಯಾವ ಕಾರಣಕ್ಕೂ ಜಿಎಸ್‌ಟಿಯಲ್ಲಿ ಅಕ್ರಮ ವ್ಯವಹಾರಕ್ಕೆ ಅವಕಾಶವಿಲ್ಲ. ಅಕ್ರಮ ಎಸಗಿದರೆ ಕಟ್ಟುನಿಟ್ಟಾಗಿ ದಂಡ ಪಾವತಿಸಬೇಕಾಗುತ್ತದೆ. ಸಣ್ಣಪುಟ್ಟ ತಪ್ಪುಗಳಾದರೆ ಅದನ್ನು ಸರಿಪಡಿಸಲು ವರ್ಷವೇ ಕಾಯಬೇಕಾದಿತು. ಯಾವ ವಾಣಿಜ್ಯ ತೆರಿಗೆ ಅಧಿಕಾರಿ ಕೂಡ ಯಾರನ್ನೂ ರಕ್ಷಿಸಲಾರರು. ಎಲ್ಲವೂ ಹೊಸದಿಲ್ಲಿ ಕೇಂದ್ರಿತವಾಗಿರುತ್ತದೆ. ಹಾಗಾಗಿ ಕಾನೂನು ಪರಿಪಾಲನೆಯೊಂದಿಗೆ ಪಾರದರ್ಶಕ ವ್ಯವಹಾರ ಮಾಡಿ ಎಂದು ಬಿ.ಎ. ನಾಣಿಯಪ್ಪ ಕರೆ ನೀಡಿದರು.

ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ:

ಜಿಎಸ್‌ಟಿ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಿದೆ. ಜಿಎಸ್‌ಟಿಯಿಂದ ವರ್ತಕರಿಗೆ ಮಾತ್ರವಲ್ಲ ಜನಸಾಮಾನ್ಯರಿಗೂ ಪ್ರಯೋಜನವಾಗಲಿದೆ. ಹೊರರಾಜ್ಯದಿಂದ ವಸ್ತುಗಳನ್ನು ಆಮದು ಮಾಡಿದರೂ ಕೂಡ ಹೆಚ್ಚಿನ ತೆರಿಗೆ ಬೀಳುವುದಿಲ್ಲ. ಉತ್ಪನ್ನಗಳು ಹೆಚ್ಚಾಗಲಿದೆ, ಅದರ ದರ ಕಡಿಮೆಯಾಗಲಿದೆ. ಸರಕಾರಗಳಿಗೂ ಸಂಪನ್ಮೂಲ ಕ್ರೋಢೀಕರಣಗೊಳ್ಳಲಿದೆ. ರಾಜ್ಯ ಸರಕಾರಗಳು ಕೇಂದ್ರದ ಅನುದಾನಕ್ಕಾಗಿ ಹೆಚ್ಚು ಹಾತೊರೆಯುವುದನ್ನು ತಪ್ಪಲಿದೆ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ (ಆಡಳಿತ-ವ್ಯಾಟ್ ವಿಭಾಗ) ಎಚ್. ಜಿ. ಪವಿತ್ರ ಹೇಳಿದರು.

ಜುಲೈಯಿಂದ ಜಾರಿಗೊಳ್ಳಲಿರುವ ಜಿಎಸ್‌ಟಿ ಬಗ್ಗೆ ಜಾಗೃತಿ ಅತ್ಯಗತ್ಯ. ಈಗಿರುವ ಎಲ್ಲ ತೆರಿಗೆಗಳನ್ನು ಏಕೀಕೃತ ತೆರಿಗೆ ವ್ಯವಸ್ಥೆಯಲ್ಲಿ ವಿಲೀನಗೊಳಿಸುವ ಪರೋಕ್ಷ ಪದ್ಧತಿ ಇದಾಗಿದೆ. ಕೇಂದ್ರೀಯ ಮತ್ತು ರಾಜ್ಯ ತೆರಿಗೆಗಳ ವಿಲೀನದಿಂದಾಗಿ ಅಧಿಕ ತೆರಿಗೆ ಪಾವತಿಯು ತಪ್ಪುತ್ತದೆ ಎಂದು ಎಚ್. ಜಿ. ಪವಿತ್ರ ನುಡಿದರು.

ವಾಣಿಜ್ಯ ತೆರಿಗೆಗಳ ಉಪಾಯುಕ್ತ ಬಿ. ಶಂಭು ಭಟ್, ಸಹಾಯಕ ಆಯುಕ್ತ ವಿಜಯ ಕುಮಾರ್ ಬತಾಡ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವೇದಿಕೆಯಲ್ಲಿ ಬಿಸಿಸಿಐ ಉಪಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್, ಕೋಶಾಧಿಕಾರಿ ಮನ್ಸೂರ್ ಅಹ್ಮದ್ ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಸಿಸಿಐ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ ಸ್ವಾಗತಿಸಿದರು. ಖಾಲಿದ್ ತಣ್ಣೀರುಬಾವಿ ಕಿರಾಅತ್ ಪಠಿಸಿದರು. ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X