ಮಾ.11: ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಉದ್ಘಾಟನೆ
ಪುತ್ತೂರು, ಮಾ.8: ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತದ ನೂತನ 4ನೆ ಶಾಖೆಯು ಮಾ.11ರಂದು ಪುತ್ತೂರಿನ ತಾಲೂಕು ಕಚೇರಿ ರಸ್ತೆ ಬಳಿಯಲ್ಲಿರುವ ಪುತ್ತೂರು ಸೆಂಟರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ವಿದ್ಯುತ್ ಗುತ್ತಿಗೆದಾರರ ಸಂಘದ ಪುತ್ತೂರು ಉಪಸಮಿತಿಯ ಅಧ್ಯಕ್ಷ ಕೃಷ್ಣ ಗೌಡ ಕೆ. ತಿಳಿಸಿದ್ದಾರೆ.
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೂತನ ಶಾಖೆಯನ್ನು ಕೇಂದ್ರ ಸರಕಾರದ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷ ಉರ್ಬಾನ್ ಪಿಂಟೊ ಅಧ್ಯಕ್ಷತೆ ವಹಿಸಲಿದ್ದಾರೆ.
ಶಾಸಕಿ ಶಕುಂತಳಾ ಶೆಟ್ಟಿ, ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎಂ., ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷ ಪಿ.ಶಿವಕುಮಾರ್ ಪೈಲೂರು ಮತ್ತಿತರರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದವರು ವಿವರಿಸಿದರು.





