Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಖಲಿಸ್ತಾನ್ ಚಳವಳಿಯಲ್ಲಿ ಭಯೋತ್ಪಾದಕ ದಾಳಿ...

ಖಲಿಸ್ತಾನ್ ಚಳವಳಿಯಲ್ಲಿ ಭಯೋತ್ಪಾದಕ ದಾಳಿ ಸಂಚು ರೂಪಿಸಿದ್ದ ಭಾರತೀಯನಿಗೆ 15 ವರ್ಷಗಳ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ8 March 2017 8:16 PM IST
share
ಖಲಿಸ್ತಾನ್ ಚಳವಳಿಯಲ್ಲಿ ಭಯೋತ್ಪಾದಕ ದಾಳಿ ಸಂಚು ರೂಪಿಸಿದ್ದ ಭಾರತೀಯನಿಗೆ 15 ವರ್ಷಗಳ ಜೈಲುಶಿಕ್ಷೆ

ನ್ಯೂಯಾರ್ಕ್,ಮಾ.8: ಸ್ವತಂತ್ರ ಸಿಖ್ ದೇಶ ರಚನೆಗೆ ಖಲಿಸ್ಥಾನ್ ಚಳವಳಿಯ ಭಾಗವಾಗಿ ಭಾರತೀಯ ಸರಕಾರಿ ಅಧಿಕಾರಿಯ ಹತ್ಯೆ ಸೇರಿದಂತೆ ಭಾರತದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಭಾರತೀಯ ಪ್ರಜೆ ಬಲ್ವಿಂದರ್ ಸಿಂಗ್ (42) ಎಂಬಾತನಿಗೆ ಇಲ್ಲಿಯ ರೆನೋ ನ್ಯಾಯಾಲಯವು ಮಂಗಳವಾರ 15 ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.

ಬಲ್ವಿಂದರ್ ಸಿಂಗ್ ಅಲಿಯಾಸ್ ಝಾಜಿ ಅಲಿಯಾಸ್ ಬಲ್ಜಿತ್ ಸಿಂಗ್ ರೆನೋ ನಿವಾಸಿಯಾಗಿದ್ದು ಎರಡು ಭಯೋತ್ಪಾದಕ ಗುಂಪುಗಳ ಸದಸ್ಯನಾಗಿದ್ದ ಮತ್ತು ಭಾರತ ಸರಕಾರಕ್ಕೆ ಬೆದರಿಕೆಯೊಡ್ಡಲು ಹಾಗೂ ಭಯೋತ್ಪಾದಕ ಗುಂಪುಗಳ ಹೋರಾಟವನ್ನು ಬೆಂಬಲಿಸದ ವ್ಯಕ್ತಿಗಳಿಗೆ ಹಾನಿಯನ್ನುಂಟು ಮಾಡಲು ಅಗತ್ಯ ನೆರವನ್ನು ಒದಗಿಸಿದ್ದ ಎಂದು ನೆವಾಡಾ ಜಿಲ್ಲೆಯ ಸರಕಾರಿ ವಕೀಲ ಡೇನಿಯಲ್ ಬೊಗ್ದೇನ್ ಹೇಳಿದರು.

ಅಮೆರಿಕ ಮತ್ತು ಅದರ ಮಿತ್ರದೇಶಗಳನ್ನು ಭಯೋತ್ಪಾದಕ ಕೃತ್ಯಗಳಿಂದ ರಕ್ಷಿಸಲು ಹಲವಾರು ಕಾನೂನು ಜಾರಿ ಸಂಸ್ಥೆಗಳು ಒಂದಾಗಿ ಶ್ರಮಿಸುತ್ತಿವೆ ಎನ್ನುವುದಕ್ಕೆ ಈ ಪ್ರಕರಣವು ಉದಾಹರಣೆಯಾಗಿದೆ ಎಂದೂ ಅವರು ತಿಳಿಸಿದರು.

ಭಾರತೀಯ ಪ್ರಜೆಯಾಗಿರುವ ಸಿಂಗ್ ಖಾಯಂ ಅಮೆರಿಕ ನಿವಾಸಿಯಾಗಿದ್ದ. ಕಳೆದ ವರ್ಷದ ನವೆಂಬರ್‌ನಲ್ಲಿ ಆತ ನ್ಯಾಯಾಲಯದಲಿ ತನ್ನ ತಪ್ಪು ಒಪ್ಪಿಕೊಂಡಿದ್ದ.

2013,ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವೆ ಸಿಂಗ್ ಭಯೋತ್ಪಾದಕ ದಾಳಿಗಳನ್ನು ಬೆಂಬಲಿಸುವ ಸಂಚು ರೂಪಿಸಿದ್ದ. ದಕ್ಷಿಣ ಏಷ್ಯಾಕ್ಕೆ ಸಹ ಸಂಚುಕೋರನ ಪ್ರವಾಸಕ್ಕೆ ಸೌಲಭ್ಯ,ಹಣಕಾಸು ನೆರವು ಮತ್ತು ದಾಳಿಯನು ನಡೆಸಲು ಅಗತ್ಯ ಸಾಮಗ್ರಿಗಳನ್ನು ಒದಗಿಸಲು ಆತ ಒಪ್ಪಿಕೊಂಡಿದ್ದ. ಸಹ ಸಂಚುಕೋರನನ್ನು ಮುಖತಃ ಭೇಟಿಯಾಗಲು ರೆನೋದಿಂದ ಕ್ಯಾಲಿಫೋರ್ನಿಯಾಕ್ಕೂ ಆತ ಪ್ರಯಾಣಿಸಿದ್ದ ಎಂದು ದೋಷಾರೋಪಣ ಪಟ್ಟಿಯಲ್ಲಿ ಹೇಳಲಾಗಿತ್ತು.

 ಎರಡು ಸೆಟ್ ರಾತ್ರಿ ಗೋಚರತೆಯ ಗಾಗಲ್‌ಗಳು, ಲ್ಯಾಪ್‌ಟಾಪ್‌ಗಳನ್ನು ಖರೀದಿಸಿದ್ದ ಸಿಂಗ್ ಅವುಗಳನ್ನು ಯೋಜಿತ ಭಯೋತ್ಪಾದಕ ದಾಳಿಗಳನ್ನು ನಡೆಸಲಿದ್ದ ಸಹ ಸಂಚುಕೋರನಿಗೆ ನೀಡಿದ್ದ. ಆದರೆ ಸಹ ಸಂಚುಕೋರ 2013,ಡಿಸೆಂಬರ್‌ನಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಿಂದ ಬ್ಯಾಂಕಾಕ್‌ಗೆ ವಿಮಾನವನ್ನೇರಲು ಪ್ರಯತ್ನಿಸುತ್ತಿದ್ದಾಗ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X