Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರದ್ಧೆ, ಪರಿಶ್ರಮ, ತನ್ಮಯತೆಗಳೇ...

ಶ್ರದ್ಧೆ, ಪರಿಶ್ರಮ, ತನ್ಮಯತೆಗಳೇ ಯಶಸ್ಸಿನ ಗುಟ್ಟು : ಪ್ರೊ. ಸುಶೀಲಾ ಆರ್. ರೈ

​ಆಳ್ವಾಸ್ ಕಾಲೇಜು ವಾರ್ಷಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ8 March 2017 8:57 PM IST
share
ಶ್ರದ್ಧೆ, ಪರಿಶ್ರಮ, ತನ್ಮಯತೆಗಳೇ ಯಶಸ್ಸಿನ ಗುಟ್ಟು : ಪ್ರೊ. ಸುಶೀಲಾ ಆರ್. ರೈ

ಮೂಡುಬಿದಿರೆ, ಮಾ.8: ‘ಆಧುನಿಕ ತಂತ್ರಜ್ಞಾನ ಇಂದಿನ ದಿನದ ಅವಶ್ಯಕತೆ. ತಂತ್ರಜ್ಞಾನವನ್ನು ಬಳಸಿ, ಆಧುನಿಕತೆಗೆ ಒಗ್ಗಿಕೊಳ್ಳಿ; ಆದರೆ ವಾಸ್ತವ ಲೋಕದಲ್ಲಿ ಬದುಕಿ. ಶ್ರದ್ಧೆಯಿಂದ ನಿಮ್ಮ ಕಾರ್ಯ ನಿರ್ವಹಿಸಿ. ಪರಿಶ್ರಮವೆಂಬುದು ಪರಿಶುದ್ಧ ಮುತ್ತಿನಂತೆ. ಅದಕ್ಕೆ ಎಂದಿಗೂ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಶ್ರದ್ಧೆ, ಪರಿಶ್ರಮ, ತನ್ಮಯತೆಗಳೇ ಯಶಸ್ವೀ ಸಾಧನೆಯ ಮೂಲ ತಳಹದಿಎಂದು ಪ್ರೊ. ಸುಶೀಲಾ ಆರ್. ರೈ ಹೇಳಿದರು.

  ಆಳ್ವಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯೆಯೆಂದರೆ ಕೇವಲ ಅಕ್ಷರಾಭ್ಯಾಸವಲ್ಲ. ಒಬ್ಬ ವ್ಯಕ್ತಿ ತನ್ನೆಲ್ಲಾ ಜವಾಬ್ದಾರಿಗಳನ್ನು, ಒತ್ತಡಗಳನ್ನು ಸರಿಯಾಗಿ ನಿಭಾಯಿಸಬೇಕು; ತನ್ನ ಸಾಧನೆಗಳನ್ನು, ಗುಣ-ನಡತೆಗಳನ್ನು ಸಮದೂಗಿಸಿಕೊಂಡು ಹೋಗಬೇಕು. ಅಂತಹ ಸಾಮರ್ಥ್ಯವೇ ಆ ವ್ಯಕ್ತಿ ವಿದ್ಯಾವಂತನೆಂದು ಸಾರಿ ಹೇಳುತ್ತದೆ. ಆದರೆ ಉನ್ನತೆ ಸಾಧನೆಗಳು ಎಂದಿಗೂ ಮನುಷ್ಯನನ್ನು ಅಹಂಕಾರಿಯಾಗಿಸಬಾರದು ಎಂದು ಕಿವಿ ಮಾತು ಹೇಳಿದರು.

ವಾರ್ಷಿಕೋತ್ಸವದಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಕುರಿತಾಗಿ ಅಭಿಪ್ರಾಯಗಳನ್ನು ಹಂಚಿಕೊಂಡ ಅವರು ‘ಈ ಸನ್ಮಾನ ಕಾರ್ಯಕ್ರಮ ಮಂಗಳೂರು ವಿವಿಯ ಘಟಿಕೋತ್ಸವ ಕಾರ್ಯಕ್ರಮವನ್ನು ನೆನಪಿಸುತ್ತದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಯಾವ ವಿಶ್ವವಿದ್ಯಾನಿಲಯಕ್ಕೂ ಕಡಿಮೆಯಿಲ್ಲ ಎಂದರು.

   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ‘ವಿದ್ಯಾರ್ಥಿ ಶಕ್ತಿ ಬಗ್ಗೆ ನನಗೆ ಅಪಾರ ಗೌರವವಿದೆ. ಒಬ್ಬ ವಿದ್ಯಾರ್ಥಿಯಲ್ಲಿ ಎಷ್ಟೆಲ್ಲಾ ಶಕ್ತಿ ಸಾಮರ್ಥ್ಯಗಳಿರಬಹುದು ಎಂಬುದಕ್ಕೆ ಈ ವೇದಿಕೆಯಲ್ಲಿರುವ ವಿದ್ಯಾರ್ಥಿ ಸಾಧಕರೇ ಸಾಕ್ಷಿ. ಈ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ನೀಡಿ ಅವರನ್ನು ನಾಡಿಗೆ ಕೊಡುಗೆಯಾಗಿ ನೀಡಬೇಕೆಂಬುದು ನಮ್ಮ ಆಸೆ. ಮಂಗಳೂರು ವಿವಿಯ ಅಡಿಯಲ್ಲಿರುವ ಆಳ್ವಾಸ್ ಕಾಲೇಜಿನ ಸಾಧನೆ ಅಪರೂಪವಾದದ್ದು. ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತವನ್ನೇ ಸೃಷ್ಟಿಸಿದ್ದಾರೆ. ಇಲ್ಲಿ ನಮಗೆ ಆರ್ಥಿಕ ನಷ್ಟ ಆಗಿದ್ದರೂ ಕಾಲೇಜು ಆರಂಭಿಸಿದ ನಮ್ಮ ಉದ್ದೇಶ ಮಾತ್ರ ಸಾರ್ಥಕ್ಯ ಕಂಡಿದೆಎಂದು ಹೇಳಿದರು.

 ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಕಾಲೇಜಿನ ಕ್ರೀಡಾ ತಂಡದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ‘ಶೈಕ್ಷಣಿಕ ಕ್ಷೇತ್ರದಲ್ಲಿ ರ‍್ಯಾಂಕ್ ಪಡೆಯುವುದು ಸುಲಭ. ಆದರೆ ಒಂದು ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವುದು, ದಾಖಲೆ ಸೃಷ್ಟಿಸುವುದು ಸುಲಭದ ಮಾತಲ್ಲ. ಆದರೆ ನಮ್ಮ ವಿದ್ಯಾರ್ಥಿಗಳು ಇದನ್ನು ಸಾಧ್ಯವಾಗಿಸಿದ್ದಾರೆ. ಈ ಕಾಲೇಜನ್ನು ಆರಂಭಿಸಿದ ಹೊಸತರಲ್ಲಿ ನಮ್ಮ ವಿದ್ಯಾರ್ಥಿಗಳು ಒಲಂಪಿಕ್ಸ್‌ನಲ್ಲಿ ಭಾಗವಹಿಸಬೇಕೆಂಬ ಆಸೆಯನ್ನು ನಾನು ವ್ಯಕ್ತಪಡಿಸಿದಾಗ ಬಹಳಷ್ಟು ಜನ ನನ್ನನ್ನು ಗೇಲಿ ಮಾಡಿದ್ದರು. ಆದರೆ ಈ ಬಾರಿ ನಮ್ಮ ಕಾಲೇಜಿನ ವಿದ್ಯಾರ್ಥಿ ದಾರುಣ್ ಒಲಂಪಿಕ್ಸ್‌ನಲ್ಲಿ ಇಡೀ ಭಾರತವನ್ನು ಪ್ರತಿನಿಧಿಸಿದ್ದಾರೆ. ಇದು ನಿಜಕ್ಕೂ ಹೆಮ್ಮೆಯ ವಿಷಯಎಂದರು.

  ಜೀವನವನ್ನು ಗಂಭೀರವಾಗಿ ತೆಗೆದುಕೊಳ್ಳಿ, ಚಿಕ್ಕ ಚಿಕ್ಕ ವಿಷಯಗಳಿಗೂ ಪ್ರಾಮುಖ್ಯತೆ ನೀಡಿ ಆಗ ಮಾತ್ರ ದೊಡ್ಡ ಸಾಧನೆ ಸಾಧಿಸಬಹುದು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧ. ಎಷ್ಟು ಹಣ ವಿನಿಯೋಗಿಸಿಯಾದರೂ ಸರಿ ವಿದ್ಯಾರ್ಥಿಗಳಿಗೆ ಒಳ್ಳೆಯ ಮಾರ್ಗದರ್ಶನ ನೀಡಿ ನಾಡಿಗೆ ಕೊಡುಗೆಯಾಗಿ ನೀಡುತ್ತೇವೆ ಎಂದು ಭರವಸೆ ನೀಡಿದರು.

 ಪ್ರಾಂಶುಪಾಲ ಡಾ. ಕುರಿಯನ್ ಕಾಲೇಜಿನ ವಾರ್ಷಿಕ ವರದಿ ನೀಡಿದರು. ರಚನಾ ಸ್ವಾಗತಿಸಿದರು. ವಂದನಾ ವಂದಿಸಿದರು. ರಕ್ಷಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

 ವಿದ್ಯಾರ್ಥಿ ಸನ್ಮಾನ: 

 ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮ ವಾರ್ಷಿಕೋತ್ಸವ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿತ್ತು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಮಂಗಳೂರು ವಿಶ್ವವಿದ್ಯಾನಿಲಯ ಪರೀಕ್ಷೆಗಳಲ್ಲಿ ರ‍್ಯಾಂಕ್ ಪಡೆದ 52 ವಿದ್ಯಾರ್ಥಿಗಳನ್ನು, ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಸ್ಥಾನ ಗಳಿಸಿದ ಕ್ರೀಡಾ ಪಟುಗಳನ್ನು ಹಾಗೂ ಸಾಂಸ್ಕೃತಿಕ ರಂಗದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಸಾಂಸ್ಕೃತಿಕ ವಿದ್ಯಾರ್ಥಿಗಳನ್ನು ಕಾಲೇಜಿನ ವತಿಯಿಂದ ಪುರಸ್ಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X