ಕೊಣಾಜೆ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಕೊಣಾಜೆ, ಮಾ.8: ಮುಡಿಪು ಭಾರತೀ ಅನುದಾನಿತ ಪ್ರಾಥಮಿಕ ಶಾಲೆಯ ಬಳಿಯ ಗುಡ್ಡದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಸಂಪೂರ್ಣ ಕೊಳೆತ ಶವವು ಉಟ್ಟ ಲುಂಗಿಯಲ್ಲೇ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ಸ್ಥಳಕ್ಕೆ ಕೊಣಾಜೆ ಪೊಲೀಸರು ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.ಮೃತಪಟ್ಟ ವ್ಯಕ್ತಿ 40ರಿಂದ 42 ಪ್ರಾಯ ಆಸುಪಾಸಿನವರಾಗಿದ್ದು ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





