ನಾಳೆ ಯುವ ಪರಿವರ್ತಕರ ಆಯ್ಕೆ
ಮಂಗಳೂರು, ಮಾ.8: ಜನ ಆರೋಗ್ಯ ಸಂಸ್ಥೆ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರಕಾರದ ಅನುದಾನಿತ ಯೋಜನೆ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆಯಡಿ ಯುವ ಪರಿವರ್ತಕರ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಶೈಕ್ಷಣಿಕ ಅರ್ಹತೆ: ಯಾವುದೇ ಪದವಿಯಿಂದ ಮೇಲ್ಪಟ್ಟು ಹಾಗೂ ಕನಿಷ್ಠ ವಯಸ್ಸು 21 ರಿಂದ 35 ವರ್ಷಗಳು. ಸ್ಥಳೀಯ ಭಾಷೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದು ಅವಶ್ಯ. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ, ಹುಮ್ಮಸ್ಸನ್ನು ಹಾಗೂ ಉತ್ತಮ ಅಂತರ್ವ್ಯಕ್ತೀಯ, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯ ಹೊಂದಿರಬೇಕು. ಸಮುದಾಯದಲ್ಲಿ ಯುವ ಜನರಿಗೆ ತರಬೇತಿಯಂತಹ ಕಾರ್ಯಕ್ರಮವನ್ನು ನಡೆಸುವುದು ಮತ್ತು ರಾಜ್ಯದ 30 ಜಿಲ್ಲೆಗಳಲ್ಲಿ ಪ್ರಯಾಣಿಸುವುದು ಅವಶ್ಯವಿರುತ್ತದೆ.
ಯುವ ಪರಿವರ್ತಕರ ಆಯ್ಕೆ ಸಂದರ್ಶನವು ಮಾ.10ರಂದು ಬೆಳಗ್ಗೆ 11ಕ್ಕೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಕಚೇರಿಯಲ್ಲಿ ನಡೆಸಲಾಗುವುದು.
ಅರ್ಹತಾ ಮಾನದಂಡವನ್ನು ಹೊಂದಿದ ಆಸಕ್ತ ಅಭ್ಯರ್ಥಿಗಳು ಬಿಳಿ ಹಾಳೆಯಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನೊಳಗೊಂಡಂತೆ ಮೂಲ ಪ್ರಮಾಣಪತ್ರದ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಉಪನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.







