ಮಾ.9ರಿಂದ ದ್ವಿತೀಯ ಪಿಯು ಪರೀಕ್ಷೆ

ಮಂಗಳೂರು, ಮಾ.8: ಪ್ರಸಕ್ತ ವರ್ಷದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮಾ.9ರಿಂದ 27ರ ವರಗೆ ನಡೆಯಲಿದೆ. ದ.ಕ. ಜಿಲ್ಲೆಯಲ್ಲಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.
ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕ ತಿಮ್ಮಯ್ಯ ಮಾತನಾಡಿ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ದ.ಕ. ಜಿಲ್ಲೆಯಿಂದ ಈ ವರ್ಷ 198 ಕಾಲೇಜುಗಳ 38,607 ವಿದ್ಯಾರ್ಥಿಗಳು 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 19,128 ವಿದ್ಯಾರ್ಥಿಗಳು ಹಾಗೂ 19,479 ವಿದ್ಯಾರ್ಥಿನಿಯರು. ಕಲಾ ವಿಭಾಗದಲ್ಲಿ 5,796, ವಾಣಿಜ್ಯ ವಿಭಾಗದಲ್ಲಿ 17,396 ಹಾಗೂ ವಿಜ್ಞ್ಞಾನ ವಿಭಾಗದಲ್ಲಿ 15,415 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಒಟ್ಟು ವಿದ್ಯಾರ್ಥಿಗಳಲ್ಲಿ 34,428 ಪ್ರಥಮ ಬಾರಿಗೆ, 1,391 ವಿದ್ಯಾರ್ಥಿಗಳು ಪುನರಾವರ್ತಿತ ಹಾಗೂ 2,788 ಮಂದಿ ಖಾಸಗಿಯಾಗಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.
Next Story





