Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಯಕಿಯ ಮಹಿಳಾ ಅಭಿಯಾನಕ್ಕೆ ಅಪೂರ್ವ...

ಗಾಯಕಿಯ ಮಹಿಳಾ ಅಭಿಯಾನಕ್ಕೆ ಅಪೂರ್ವ ಸ್ಪಂದನೆ

ವಾರ್ತಾಭಾರತಿವಾರ್ತಾಭಾರತಿ9 March 2017 9:15 AM IST
share
ಗಾಯಕಿಯ ಮಹಿಳಾ ಅಭಿಯಾನಕ್ಕೆ ಅಪೂರ್ವ ಸ್ಪಂದನೆ

ಹೈದರಾಬಾದ್,ಮಾ.9: ಖ್ಯಾತ ಗಾಯಕಿ ಚಿನ್ಮಯಿ ಶ್ರೀಪಾದ ಆರಂಭಿಸಿರುವ "#ರೇಪ್‌ಥ್ರೆಟ್ಸ್‌ನಾಟ್‌ಓಕೆ" ಟ್ವೀಟ್ ಅಭಿಯಾನಕ್ಕೆ ಕೇವಲ 48 ಗಂಟೆಗಳಲ್ಲಿ 48 ಸಾವಿರ ಮಂದಿಯ ಬೆಂಬಲ ಸಿಕ್ಕಿದೆ. ಚೇಂಜ್.ಓಆರ್‌ಜಿ ಮೂಲಕ ಈ ಅಭಿಯಾನ ಆರಂಭಿಸಿದ್ದು, ಟ್ವಿಟ್ಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನೇರ ಆಗ್ರಹವನ್ನು ಈ ಅಭಿಯಾನ ಒಳಗೊಂಡಿದೆ.

"ಟ್ವೀಟ್ ಮೂಲಕ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕುವ ಟ್ವೀಟ್ ಖಾತೆಗಳನ್ನು ದೊಡ್ಡ ಪ್ರಮಾಣದಲ್ಲಿ ಕಿತ್ತುಹಾಕುವ ಮೂಲಕ ಪ್ರಬಲವಾದ ಸಂದೇಶ ರವಾನಿಸಿ" ಎಂದು ಟ್ವಿಟ್ಟರ್ ಸಿಇಓ ಜಾಕ್ ದೋರ್ಸೆ ಅವರನ್ನು ಆಗ್ರಹಿಸಲಾಗಿದೆ.

 ವಿಶ್ವಾದ್ಯಂತ ಇಂಥ ಮೈಕ್ರೊ ಬ್ಲಾಗಿಂಗ್ ಜಗತ್ತು ಹಾಗೂ ಸಮಾಜ ಮಾಧ್ಯಮ ಮಹಿಳೆಯರ ಪಾಲಿಗೆ ಹೇಗೆ ಮಾರಕವಾಗುತ್ತಿದೆ ಎನ್ನುವುದನ್ನು ಚಿನ್ಮಯಿ ವಿವರಿಸಿದ್ದು, ಇಂಥ ಶೋಷಣೆಯನ್ನು ತಡೆಯಲು ಇದು ಸೂಕ್ತ ಕಾಲ ಎಂದು ಪ್ರತಿಪಾದಿಸಿದ್ದಾರೆ. "ಕೆಲ ಪುರುಷರು ಅತ್ಯಾಚಾರ ಬೆದರಿಕೆ ದೊಡ್ಡ ಸಂಗತಿಯೇ ಅಲ್ಲ ಎಂದುಕೊಂಡಿದ್ದಾರೆ. ಆದರೆ ಅತ್ಯಾಚಾರ ಎನ್ನುವುದು ಅತ್ಯಂತ ಹೇಯ ಕೃತ್ಯ ಹಾಗೂ ಮಾನಸಿನ ಹಿಂಸೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆ ಅನುಭವಿಸುವ ಸಂಕಷ್ಟ ವಿವರಿಸಲು ಪದಗಳೇ ಸಿಗುವುದಿಲ್ಲ" ಎಂದು ಹೇಳಿದ್ದರು. ಶ್ರೀಲಂಕಾ ನೌಕಾಪಡೆ, ತಮಿಳು ಮೀನುಗಾರರನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಚಿನ್ಮಯಿ ಧ್ವನಿ ಎತ್ತಿದಾಗ ಇವರಿಗೆ ಮೊದಲ ಬಾರಿಗೆ ಅತ್ಯಾಚಾರದ ಬೆದರಿಕೆ ಬಂದಿತ್ತು.

"ಅಂಥ ಖಾತೆಗಳನ್ನು ನಿರ್ದಾಕ್ಷಿಣ್ಯವಾಗಿ ಕಿತ್ತುಹಾಕಬೇಕು ಎಂದು ಅಂದಿನಿಂದ ಇಂದಿನವರೆಗೂ ಆಗ್ರಹಿಸುತ್ತಾ ಬಂದಿದ್ದೇನೆ. ನನ್ನ ನಿಲುವಿಗೆ ನಾನು ಬದ್ಧ. ಅತ್ಯಾಚಾರ ಹಾಗೂ ಅತ್ಯಾಚಾರದ ಬೆದರಿಕೆ ಮಹಿಳೆಯರ ಸದ್ದಡಗಿಸುವ ಹುನ್ನಾರ. ಆ ಒತ್ತಡಕ್ಕೆ ನಾನು ಮಣಿಯುವುದಿಲ್ಲ. ಈ ಬಗ್ಗೆ ಟ್ವೀಟರ್ ಅಧಿಕಾರಿಗಳನ್ನೂ ಸಂಪರ್ಕಿಸಿದಾಗ, ಪೊಲೀಸರಿಗೆ ದೂರು ನೀಡದೇ ಯಾವ ಕ್ರಮವನ್ನೂ ಕೈಗೊಳ್ಳುವಂತಿಲ್ಲ ಎಂಬ ಉತ್ತರ ದೊರಕಿದೆ" ಎಂದು ಅವರು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X